Lock down ಸಡಿಲಿಕೆ ನಂತರ ಸೋಂಕು ಏರುಮುಖವಾಗಿದೆ, ವಲಸಿಗರಲ್ಲಿ ಸೋಂಕು ಅಧಿಕ..

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೊಂಕಿತರ ಸಂಖ್ಯೆ ಹೆಚ್ಚುತ್ತಿದೆ. ಲಾಕ್ ಡೌನ್ ಸಡಿಲಿಕೆ ನಂತರ ಸೋಂಕು ಏರುಮುಖವಾಗಿದೆ. ಇದಕ್ಕೆ ಪ್ರಮುಖ ಕಾರಣ ಎಂದರೆ ಹೊರ ರಾಜ್ಯಗಳಿಂದ ವಾಪಸಾಗುವ ಜನರೇ ಆಗಿದ್ದಾರೆ. ನೆರೆಯ ಸೋಂಕು ಪೀಡಿತ ಸ್ಥಳಗಳಿಂದ ಇಲ್ಲಿಗೆ ಬರುತ್ತಿರುವ ಜನ ಸೋಂಕನ್ನು ಹೊತ್ತು ತರುತ್ತಿದ್ದಾರೆ.

ನೆರೆಯ ರಾಜ್ಯಗಳ ಅದರಲ್ಲಿಯೂ ಮಹಾರಾಷ್ಟ್ರ, ತಮಿಳುನಾಡು ಮತ್ತು ತೆಲಂಗಾಣ ಕಡೆಯಿಂದ ಬರುವ ಜನರಲ್ಲಿಯೆ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಲಾಕ್ ಡೌನ್ ಮಾಡುವ ಮೊದಲು ಕಾರ್ಮಿಕರನ್ನು ನೆಲೆಗೊಳಿಸಿದ್ದರೆ ಈ ಪ್ರಮಾಣದಲ್ಲಿ ಸೋಂಕು ಹರಡುತ್ತಿದ್ದಿಲ್ಲಾ ಅನ್ನುತ್ತಾರೆ ಏಕ್ದಪರ್ಟ್ಸ್…

ಈ ಕಾರಣಕ್ಕಾಗಿಯೇ ಹಸಿರು ವಲಯದ ಮಂಡ್ಯ, ಹಾಸನ, ಕೋಲಾರ ಮುಂತಾದ ಜಿಲ್ಲೆಗಳಲ್ಲಿಯೂ ಸೋಂಕು ಹರಡಿದೆ. ಈಗಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಸದ್ಯ ಮಹಾರಾಷ್ಟ್ರದಿಂದ 60 ಸಾವಿರ ಮಂದಿ ರಾಜ್ಯಕ್ಕೆ ವಾಪಸ್ ಆಗಿದ್ದು, ಈ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಸೋಂಕು ಹೊಂದಿರುವ ಜನರ ಸಂಖ್ಯೆ 2 ಸಾವಿರ ಇದ್ದು ಈ ಪೈಕಿ ಹೊರ ರಾಜ್ಯಗಳಿಂದ ಬಂದವರ ಸಂಖ್ಯೆ ಗಣನೀಯವಾಗಿದೆ. ಅದರಲ್ಲಿಯೂ ಮಂಡ್ಯ, ಚಿಕ್ಕಬಳ್ಳಾಪುರ, ಕಲ್ಬುರ್ಗಿ, ಹಾಸನ ಮುಂತಾದ ಕಡೆಗಳಲ್ಲಿ ಮಹಾರಾಷ್ಟ್ರದಿಂದ ಬಂದವರ ಕಾರಣದಿಂದಲೇ ಸೋಂಕು ಅಧಿಕವಾಗಿದೆ. ಈ ಕಾರಣಕ್ಕೆ ಮಹಾರಾಷ್ಟ್ರದಿಂದ ಬಂದಿರುವ ಎಲ್ಲರನ್ನೂ ಕ್ವಾರಂಟಿಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ನೆರೆಯ ತಮಿಳುನಾಡು, ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳಲ್ಲಿರುವ ಕನ್ನಡಿಗರು ದೊಡ್ಡ ಸಂಖ್ಯೆಯಲ್ಲಿ ರಾಜ್ಯಕ್ಕೆ ಹಿಂದಕ್ಕೆ ಬರುತ್ತಿರುವುದು ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಲು ಕಾರಣವಾಗಿದೆ. ನಮ್ಮವರನ್ನು ರಾಜ್ಯಕ್ಕೆ ಮರಳಿ ಬರಬೇಡಿ ಎಂದು ಅಮಾನವೀಯವಾಗಿ ನಡೆದುಕೊಳ್ಳಲು ಆಗುವುದಿಲ್ಲ. ಆದರೆ ಬರುವ ಎಲ್ಲರನ್ನೂ ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಿ ಕ್ವಾರಂಟೈನ್‍ನಲ್ಲಿ ಇಡಲಾಗುತ್ತಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.

ಲಾಕ್‍ಡೌನ್ ಸಡಿಲಕೆ ಬಳಿಕ ಜನರು ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದ್ದಾರೆ. ಇದು ಸರಿಯಲ್ಲ. ಸರ್ಕಾರ ನೀಡುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇನ್ನು ಮುಂದೆ ಜನರ ಸಹಕಾರ ಅತೀ ಮುಖ್ಯ. ಇದನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಕೋವಿಡ್ ರೋಗಕ್ಕೆ ಲಸಿಕೆ ಸಿಗುವತನಕ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಜನರು ಚಾಚೂ ತಪ್ಪದೆ ತಮ್ಮಬದುಕಿನ ಭಾಗವಾಗಿಸಿಕೊಳ್ಳಬೇಕು .. ಹಿರಿಯ ನಾಗರೀಕರು ಮತ್ತು ಮಕ್ಕಳನ್ನು ಇನ್ನೂ ಕೆಲ ತಿಂಗಳು ಮನೆಯಿಂದ ಹೊರಗೆ ಕಳುಹಿಸಬಾರದು. ಸರ್ಕಾರ ನೀಡುವ ಸೂಚನೆಗಳನ್ನು ಅನುಸರಿಸಬೇಕು. ಇದು ನಮ್ಮ ಸಂಸ್ಕೃತಿಯ ಭಾಗ ಎಂಬಂತೆ ದೈನಂದಿನ ಚಟುವಟಿಕೆಗಳಲ್ಲಿ ಅಳವಡಿಸಿಕೊಳ್ಳಬೇಕು. ..

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights