Lockdown: ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌, ಮುಖ್ಯಮಂತ್ರಿ ಸಭೆಯಲ್ಲಿ ನಿರ್ಧಾರ!!

ಬೆಂಗಳೂರಿನಲ್ಲಿ ಕೊರೋನಾ ಹೆಚ್ಚಳವಾಗುತ್ತಿರುವ ಹಿನ್ನೆಲೆ ಮಾರ್ಕೆಟ್ ಏರಿಯಾದಲ್ಲಿ ಲಾಕ್ ಡೌನ್ ಮಾಡಲು ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಕೊರೋನಾ ಹೆಚ್ಚಳ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ಸಚಿವ ಆರ್.ಅಶೋಕ್, ನಗರದಲ್ಲಿ ಕೊರೋನಾ ನಿಯಂತ್ರಣ ಕುರಿತು ಸಿಎಂ ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು. ನಗರದ ಚಿಕ್ಕಪೇಟೆ, ಚಾಮರಾಜಪೇಟೆ, ಕಲಾಸಿಪಾಳ್ಯ, ಕೆ.ಆರ್ ಮಾರ್ಕೆಟ್ ಏರಿಯಾಗಳನ್ನ ಲಾಕ್ ಡೌನ್ ಮಾಡಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಹಾಗೆಯೇ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ಟೆಸ್ಟ್ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಕೊರೋನಾ ಸೋಂಕು ಪತ್ತೆಗಾಗಿ ಖಾಸಗಿ ಆಸ್ಪತ್ರೆಯಲ್ಲೂ ಕೊರೋನಾ ಪರೀಕ್ಷೆ ನಡೆಸುವಂತ ತೀರ್ಮಾನ ಕೈಗೊಳ್ಳಲಾಗಿದೆ. ಚಿಕಿತ್ಸಾ ದರದ ಬಗ್ಗೆಯೂ ಇಂದು ಸಂಜೆಯೊಳಗೆ ಅಧಿಕೃತ ಆದೇಶ ಹೊರ ಬೀಳಲಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಮಾರಣಾಂತಿಕ ಕೊರೋನಾ ಮಹಾಮಾರಿ ದಿನೇ ದಿನೇ ಹೆಚ್ಚಾಗುತ್ತಿದ್ದು ಈ ನಡುವೆ ದೇಶದಲ್ಲಿ ಒಂದೇ ದಿನ 14,821 ಮಂದಿಗೆ ಕೊರೋನಾ ಸೋಂಕು ತಗುಲಿದೆ. 14,821 –ಟಿeತಿ- ಛಿoಡಿoಟಿಚಿ- ಛಿouಟಿಣಡಿಥಿ

ಈ ಮೂಲಕ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 4,25,282ಕ್ಕೆ ಏರಿಕೆಯಾಗಿದೆ. 2,37196 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. 1,74,387 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ದೇಶದಲ್ಲಿ ಕೊರೋನಾ ರಣಕೇಕೆಗೆ 13699 ಮಂದಿ ಬಲಿಯಾಗಿದ್ದಾರೆ.

ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಬೆಂಗಳೂರಿನಲ್ಲಿ ಸೋಂಕು ಹೆಚ್ಚಿರುವ ಪ್ರದೇಶಗಳನ್ನು ಸಂಪೂರ್ಣ ಸೀಲ್ಡೌನ್ ಮಾಡಲು ಆದೇಶಿಸಲಾಗಿದೆ.‌

ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಚಿವ ಸಂಪುಟ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ

ಕ್ವಾರಂಟೈನ್ ಉಲ್ಲಂಘಿಸಿದವರ ವಿರುದ್ದ ಕಠಿಣ ಕ್ರಮ‌ ಜರುಗಿಸಲು ಸಹ ಮುಖ್ಯಮಂತ್ರಿ ಬಿಎಸ್ವೈ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಂದಿನ ಹದಿನೈದು ದಿನಗಳಲ್ಲಿ ಅತಿ ಹೆಚ್ಚು ಮುನ್ನೆಚ್ಚರಿಕೆಯ ಕ್ರಮಗಳನ್ನು ವಹಿಸಿದರೆ ಮಾತ್ರ, ಸೋಂಕು ಹರಡುವ ಪ್ರಮಾಣವನ್ನು ನಿಯಂತ್ರಿಸಲು ಸಾಧ್ಯ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

ಬೆಂಗಳೂರು ನಗರದಲ್ಲಿ ಹಾಗೂ ಇತರ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗಿರುವ ಪ್ರದೇಶಗಳಲ್ಲಿ ಲಾಕ್ ಡೌನ್ ಪ್ರಕ್ರಿಯೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಲಾಗಿದೆ.

ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿರುವ ಕೆ.ಆರ್. ಮಾರ್ಕೆಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಖ್ಯವಾಗಿ ಸಿದ್ದಾಪುರ ವಾರ್ಡ್, ವಿವಿಪುರಂ, ಕಲಾಸಿ ಪಾಳ್ಯಗಳಲ್ಲಿ, ಪ್ರಕರಣ ವರದಿಯಾದ ಅಕ್ಕಪಕ್ಕದ ಬೀದಿಗಳು ಸೇರಿದಂತೆ ಸೀಲ್ ಡೌನ್ ಮಾಡಲು ನಿರ್ಧರಿಸಲಾಯಿತು.

ಇದೇ ವೇಳೆ ಕ್ವಾರಂಟೈನ್ ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಯಿತು. ಅಗತ್ಯ ಬಿದ್ದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚಿಸಲಾಯಿತು.

ವಾರ್ ರೂಂ ನಲ್ಲಿ ವಿವಿಧ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ಕುರಿತು ಕ್ಷಣ ಕ್ಷಣದ ಮಾಹಿತಿ ಲಭ್ಯವಿರಬೇಕು. ಸೋಂಕಿತರಿಗೆ ವಿಳಂಬವಿಲ್ಲದೆ ಚಿಕಿತ್ಸೆ ಒದಗಿಸಲು ಕ್ರಮ ವಹಿಸಬೇಕು ಎಂದು ಸಿಎಂ ಸೂಚಿಸಿದರು.

ನಿಗಾ ತೀವ್ರಗೊಳಿಸಲು ಸರಕಾರ ನಿರ್ಧರಿಸಿದ್ದು, ಬೆಂಗಳೂರಿನಲ್ಲಿ ಇದಕ್ಕಾಗಿಯೇ ಮೂರು ವಿಶೇಷ ತಂಡಗಳನ್ನು ರಚಿಸಿದೆ.

ಕೊರೋನಾ ಸೋಂಕಿತರ ನಿಭಾವಣೆ (ಆಸ್ಪತ್ರೆಗಳೀಗೆ ರವಾನೆ), ಕಂಟೇನ್ಮೆಂಟ್ ವಲಯಗಳ ನಿಬಂಧನೆಗಳ ಪಾಲನೆಯ ಮೇಲ್ವಿಚಾರಣೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಬಗ್ಗೆ ಜಾಗೃತಿ ಮೂಡಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ.

ಸಾಮಾಜಿಕ ಅಂತರ, ಮುಸುಕು ಧರಿಸುವುದು, ಗುಂಪು ಕಟ್ಟದಿರುವ ಬಗ್ಗೆ ಅರಿವು ಮೂಡಿಸಲು ಸಾರ್ವಜನಿಕ ಪ್ರಕಟಣಾ ವ್ಯವಸ್ಥೆ ಕೈಗೊಳ್ಳುವಂತೆಯೂ ಸೂಚಿಸಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights