LockDown 04: ಕರ್ನಾಟಕದಲ್ಲಿಯೂ ಮುಂದುವರೆಯಲಿದೆ ಲಾಕ್‌ಡೌನ್

ಕೊರೊನಾ ವೈರಾಸ್‌ ಹರಡುವಿಕೆಯನ್ನು ನಿಯಂತ್ರಿಸುವುದಕ್ಕಾಗಿ ಜಾರಿಮಾಡಲಾಗಿದ್ದ ಮೂರನೇ ಹಂತದ ಲಾಕ್‌ಡೌನ್ ಇಂದಿಗೆ ಮುಕ್ತಾಯಗೊಳ್ಳಲಿದೆ. ಆದರೂ, ಕೊರೊನಾ ವೈರಸ್‌ ನಿಯಂತ್ರಣಕ್ಕೆ ಬಾರದ ಕಾರಣದಿಂದಾಗಿ ಮಹಾರಾಷ್ಟ್ರ, ತಮಿಳುನಾಡು ಸರ್ಕಾರ ಲಾಕ್‌ಡೌನ್ ಅವಧಿಯನ್ನು ಮೇ 31 ರ ವರೆಗೆ ವಿಸ್ತರಿಸುವುದಾಗಿ ಘೋಷಿಸಿದ್ದವು.

ನಾಲ್ಕನೇ ಹಂತದ ಲಾಕ್‌ಡೌನ್ ಬಗ್ಗೆ ಕರ್ನಾಟಕ ಸರ್ಕಾರದ ಮುಂದಿನ ನಡೆ ಏನು ಎಂಬುವುದು ತಿಳಿಸಿರುವ  ಮುಖ್ಯಮಂತ್ರಿ ಯಡಿಯೂರಪ್ಪ ಕರ್ನಾಟಕದಲ್ಲಿಯೂ ಮೇ 30ರವರೆಗೆ ಲಾಕ್‌ಡೌನ್ ಮುಂದುವರೆಸುವುದಾಗಿ  ಘೋಷಿಸಿದ್ದಾರೆ.

ನಾಲ್ಕನೇ ಹಂತದ ಲಾಕ್‌ಡೌನ್‌ನ ಕಾರ್ಯಸೂಚಿಗಳನ್ನು ಕೇಂದ್ರ ಸರ್ಕಾರದ ಹೊಸ ಕಾರ್ಯಸೂಚಿ ಬಂದ ನಂತರ ತಿಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸಧ್ಯ ರಾಜ್ಯದಲ್ಲಿ ಕೊರೊನಾ ಲಾಕ್‌ಡೌನ್ ನಡುವೆಯೂ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಲಾಕ್‌ಡೌನ್ ಸಡಿಲಗೊಂಡ ಹಿನ್ನೆಲೆಯಲ್ಲಿ ಅಂತರರಾಜ್ಯ ಹಾಗೂ ಅಂತರ್‌ಜಿಲ್ಲೆಗಳ ನಡುವೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗಿದೆ.

ಮೇ 17 ರಂದು ಭಾನುವಾರ ಒಂದೇ ದಿನ 54 ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿವೆ. ರಾಜ್ಯದಲ್ಲಿ ಸದ್ಯ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ 1146 ಕ್ಕೆ ತಲುಪಿದೆ. ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಲಾಕ್‌ಡೌನ್ ವಿಸ್ತರಣೆ ಮಾಡಬೇಕಾದ ಅನಿವಾರ್ಯತೆಗೆ ಸರ್ಕಾರಕ್ಕಿದೆ.

ಆದರೆ, ಪ್ರಧಾನಿ ಮೋದಿ ಜೊತೆಗೆ ನಡೆದ ಕಳೆದ ವಿಡಿಯೋ ಸಭೆಯಲ್ಲಿ ಲಾಕ್‌ಡೌನ್ ಸಡಿಲಗೊಳಿಬೇಕು. ಇಲ್ಲವಾದರೆ ಆರ್ಥಿಕತೆ ಅಧೋಗತಿಗೆ ತಲುಪುತ್ತದೆ ಎಂದು ಸಿಎಂ ಯಡಿಯೂರಪ್ಪ ಒತ್ತಾಯಿಸಿದ್ದರು.

ಅಲ್ಲದೆ, ಮೂರನೇ ಹಂತದ ಲಾಕ್‌ಡೌನ್‌ ಅವಧಿಯಲ್ಲಿ ಕೆಂಪು ವಲಯದಲ್ಲಿರುವ ಬೆಂಗಳೂರು ಸೇರಿದಂತೆ ಎಲ್ಲೆಡೆ ಲಾಕ್‌ಡೌನ್ ಸಡಿಲಿ ಮಾಡಲಾಗಿದ್ದು, ವಾಹನಗಳು, ವ್ಯಾಪಾರ ವಹಿವಾಟುಗಳು ಶುರುವಾಗಿವೆ.

ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆಯಿಂದಾಗಿ ಕೆಎಸ್ ಆರ್ ಟಿ, ಬಿಎಂಟಿಸಿ ಬಸ್ ಗಳು ಪುನರ್ ಆರಂಭವಾಗುವುದಿಲ್ಲ. ಆಟೋ, ಟ್ಯಾಕ್ಸಿ ಸೇವೆಗೂ ಅನುಮತಿ ಇಲ್ಲ. ಬಾರ್ ಅಂಡ್ ರೆಸ್ಟೋರೆಂಟ್, ಹೋಟೆಲ್, ಪಬ್‌ಗಳು ತೆರೆಯುವಂತಿಲ್ಲ ಎಂದು ಆದೇಶಿಸಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights