NRC ವಿರುದ್ದ ಗುಲ್ಬರ್ಗದಲ್ಲಿ ಪ್ರತಿಭಟನೆ : ಸಹಸ್ರಾರು ಸಂಖ್ಯೆಯಲ್ಲಿ ಜನ ಭಾಗಿ

ಈಗ ದೇಶಾದ್ಯಂತ ಸದ್ದು ಮಾಡುತ್ತಿರುವುದು ಪೌರತ್ವ(ತಿದ್ದುಪಡಿ) ಮಸೂದೆ 2019. ಇದಕ್ಕೆ ಪರ-ವಿರೋಧ ಸಾಕಷ್ಟು ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಸಂಸತ್ತಿನಲ್ಲಿ ಈ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿವೆ. ಜೊತೆಗೆ  ಈ NRC ವಿವಾದಿತ ಮಸೂದೆಯ ವಿರುದ್ಧ ಗುಲ್ಬರ್ಗದಲ್ಲಿಯೂ ಇಂದು ಪ್ರತಿಭಟನೆ ಮಾಡಲಾಗುತ್ತಿದೆ.

ಈ ವಿವಾದಿತ ಮಸೂದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಳೆದ ಸೋಮವಾರ ಲೋಕಸಭೆಯಲ್ಲಿ ಮಂಡಿಸಿ ಅದಕ್ಕೆ ಬಹುಮತ ಸಿಕ್ಕಿ ಅನುಮೋದನೆಗೊಂಡು ಇದೀಗ ರಾಜ್ಯಸಭೆಯಲ್ಲಿ ಮಂಡನೆಯಾಗಿದೆ. ಈ ಪೌರತ್ವ ತಿದ್ದುಪಡಿ ಮಸೂದೆ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದ್ದು ಅಲ್ಪಸಂಖ್ಯಾತರ ವಿರುದ್ಧವಾಗಿದೆ ಎಂಬುದು ವಿರೋಧಿಸುತ್ತಿರುವವರ ವಾದ.

ಅಷ್ಟುಕ್ಕೂ ಈ ನಾಗರಿಕ ಅಥವಾ ಪೌರತ್ವ(ತಿದ್ದುಪಡಿ)ಮಸೂದೆ ಎಂದರೇ-

ಪೌರತ್ವ (ತಿದ್ದುಪಡಿ) ಮಸೂದೆ 2019, 1955ರಲ್ಲಿ ಜಾರಿಗೆ ತರಲಾಗಿದ್ದ ನಾಗರಿಕ ಕಾಯ್ದೆಗೆ ತಿದ್ದುಪಡಿಯಾಗಿದೆ. ಮುಸ್ಲಿಂ ಧರ್ಮೀಯರು ಬಹುಸಂಖ್ಯೆಯಲ್ಲಿರುವ ನಮ್ಮ ನೆರೆಯ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನಗಳ ಮುಸ್ಲಿಂಯೇತರ ನಿರಾಶ್ರಿತರಿಗೆ, ಅಲ್ಲಿ ಧಾರ್ಮಿಕ ಹಿಂಸೆ ಮತ್ತು ಕಿರುಕುಳಕ್ಕೆ ಒಳಗಾಗಿ ಜೀವನ ನಡೆಸಲು ಸಾಧ್ಯವಾಗದೆ ಭಾರತಕ್ಕೆ ಆಶ್ರಯ ಕಂಡುಕೊಂಡು ಬಂದಿರುವ ನಾಗರಿಕರಿಗೆ ಭಾರತದ ಪೌರತ್ವ ನೀಡುವ ಮಸೂದೆಯಾಗಿದೆ.

ಒಂದು ಬಾರಿ ಈ ತಿದ್ದುಪಡಿ ವಿದೇಯಕ ಜಾರಿಗೆ ಬಂದರೆ ಈ ಮೂರೂ ದೇಶಗಳ ಹಿಂದೂ, ಸಿಖ್, ಕ್ರೈಸ್ತ, ಬೌದ್ಧ, ಜೈನ ಮತ್ತು ಪಾರ್ಸಿ ಸಮುದಾಯದ ವಲಸಿಗರಿಗೆ ಭಾರತದ ಪೌರತ್ವ ಸಿಗುತ್ತದೆ. ಅವರು ಅಕ್ರಮ ವಲಸಿಗರು ಎಂದು ನಂತರ ಪರಿಗಣಿಸಲಾಗುವುದಿಲ್ಲ.

ಭಾರತದ ಪೌರತ್ವ ಸಹಜವಾಗಿ ಪಡೆಯಲು ಈ ಮೂರೂ ದೇಶಗಳ 6 ಧರ್ಮಗಳ ವಲಸಿಗರು ಅರ್ಹರಾಗಿರುತ್ತಾರೆ. ಸಹಜವಾಗಿ ಭಾರತದ ಪೌರತ್ವ ಗಳಿಸಲು ಬೇಕಾದ ಮುಖ್ಯ ಅರ್ಹತೆಯೆಂದರೆ ವಲಸಿಗ ಕಳೆದ 12 ತಿಂಗಳಿನಿಂದ ಭಾರತದಲ್ಲಿ ನೆಲೆಸಿರಬೇಕು. ಮತ್ತು ಈ ಹಿಂದಿನ 14 ವರ್ಷಗಳಲ್ಲಿ ಅವರು ಭಾರತದಲ್ಲಿ 11 ವರ್ಷ ನೆಲೆಸಿರಬೇಕಾಗುತ್ತದೆ.

ತಿದ್ದುಪಡಿ ಮಸೂದೆ ಜಾರಿಗೆ ಬಂದರೆ ಈ ಮೂರು ದೇಶಗಳ ಆರು ಧರ್ಮೀಯರಿಗೆ ಮಾತ್ರ 11 ವರ್ಷಗಳ ಬದಲು 6 ವರ್ಷಗಳ ಕಾಲ ಭಾರತದಲ್ಲಿ ನೆಲೆಸಿದ್ದರೆ ಇಲ್ಲಿನ ಪೌರತ್ವ ಸಿಗುತ್ತದೆ.  ಆ ದೇಶಗಳಿಂದ ಗಡಿಪಾರಿಗೆ ಒಳಗಾಗಿರಬಾರದು, 1946ರ ವಿದೇಶಿ ಕಾಯ್ದೆ ಮತ್ತು 1920ರ ಪಾಸ್ ಪೋರ್ಟ್ ಕಾಯ್ದೆ (ಭಾರತಕ್ಕೆ ಪ್ರವೇಶ)ಯಡಿ ಜೈಲಿಗೆ ಹೋಗಿ ಬಂದಿರಬಾರದು. 2014ರ ಡಿಸೆಂಬರ್ 31ರ ಮೊದಲು ಈ ಮೂರು ದೇಶಗಳಿಂದ ಭಾರತಕ್ಕೆ ಬಂದ 6 ಧರ್ಮಗಳ ಜನರು ಭಾರತದ ಪೌರತ್ವಕ್ಕೆ ಅರ್ಹರಾಗಿರುತ್ತಾರೆ.

ಆದರೆ ಈ ಮಸೂದೆ ಭಾರತದ ಈಶಾನ್ಯ ರಾಜ್ಯಗಳ ಜನರಿಗೆ ಅನ್ವಯವಾಗುವುದಿಲ್ಲ, ಹೀಗಾಗಿ ಅಲ್ಲಿ ಪ್ರತಿಭಟನೆ ಕೇಳಿಬರುತ್ತಿದೆ. ಯಾವುದೇ ಕಾನೂನನ್ನು ಉಲ್ಲಂಘಿಸಿದರೆ ಸಾಗರೋತ್ತರ ಭಾರತೀಯ ನಾಗರಿಕರ (ಒಸಿಐ) ಕಾರ್ಡುದಾರರ ನೋಂದಣಿಯನ್ನು ರದ್ದುಗೊಳಿಸಬಹುದು ಎಂದು ಮಸೂದೆ ಹೇಳುತ್ತದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights