SSLC ಪರೀಕ್ಷೆಗೆ ಹಾಜರಾಗುವ ಮುನ್ನ ವಿದ್ಯಾರ್ಥಿಗಳು ತಿಳಿದಿರಬೇಕಾದ ಅಂಶಗಳು! ಸಂಪೂರ್ಣ ಮಾಹಿತಿ

ಕೊರೊನಾ ಹಿನ್ನಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮಂಡಳಿ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

ರಾಜ್ಯದಲ್ಲಿ ಒಟ್ಟು 8,48,203 ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಬರೆಯುತ್ತಿದ್ದು, ಎಚ್ಚರಿಕಾ ಕ್ರಮಗಳೊಂದಿಗೆ ಪರೀಕ್ಷೆಯು ಜೂ.25- ಜುಲೈ 4 ರವರೆಗೆ ನಡೆಯುತ್ತದೆ ಎಂದು SSLC ಪರೀಕ್ಷಾ ಮಂಡಳಿ ತಿಳಿಸಿದೆ.

ಒಟ್ಟು 2879 ಕೇಂದ್ರಗಳಲ್ಲಿ ಪರೀಕ್ಷೆಯು ನಡೆಯುತ್ತಿದ್ದು, ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸರ್‍ನಿಂದ ಸ್ವಚ್ಛಗೊಳಿಸಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೆ ಎರಡು ಮಾಸ್ಕ್ ವಿತರಿಸಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್ ನೀಡಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕಾನರ್ ತಪಾಸಣೆ ನಡೆಸಲಾಗುವುದು. ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಮಂಡಳಿ ತಿಳಿಸಿದೆ.

KSEEB (kseeb.kar.nic.in / karresults.nic.in) SSLC Class 10th Exam ...

ಇದಕ್ಕಾಗಿ ಪ್ರತಿ ಪರೀಕ್ಷಾ ಕೇಂದ್ರದಲ್ಲೂ 2 ಪ್ರತ್ಯೇಕ ಕೊಠಡಿಗಳನ್ನು ಮೀಸಲಿರಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪ್ರತಿಯೊಂದು ಕೊಠಡಿಯಲ್ಲಿ ಕೇವಲ 18-20 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯದಲ್ಲಿ ಒಟ್ಟು 2879 ಪರೀಕ್ಷಾ ಕೇಂದ್ರಗಳಿದ್ದು, ಹೆಚ್ಚುವರಿಯಾಗಿ 7067 ಕೊಠಡಿಗಳನ್ನು ಮೀಸಲಿರಿಸಲಾಗಿದೆ. ಹಾಗಾಗಿ ಒಟ್ಟು 43,720 ಕೊಠಡಿಗಳು ಪರೀಕ್ಷೆಗೆ ಸಜ್ಜುಗೊಂಡಿವೆ. ಜೊತೆಗೆ ಭದ್ರತಾ ದೃಷ್ಠಿಯಿಂದ ಹೆಚ್ಚು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಸಾರಿಗೆ ವ್ಯವಸ್ಥೆ: ಪರೀಕ್ಷಾ ಪ್ರವೇಶ ಪತ್ರವನ್ನು ಆಧರಿಸಿ ಕೆಎಸ್‍ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‍ಗಳಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ. ಹೆಚ್ಚು ಬಸ್‍ಗಳ ಸಂಚಾರ ಇಲ್ಲದ ಕಡೆ ಬಸ್‍ಗಳ ವ್ಯವಸ್ಥೆ ಕಲ್ಪಿಸಲು ಜಿಲ್ಲೆಗಳ ಡಿಡಿಪಿಐ ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೊತೆಗೆ ಸ್ವಂತ ವಾಹನದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಮಕ್ಕಳನ್ನು ಕರೆತಂದಾಗ ಪರೀಕ್ಷಾ ಕೇಂದ್ರದ ಬಳಿ ಜನದಟ್ಟಣೆಯಾಗಬಾರದು ಎಂದು ಪರೀಕ್ಷಾ ಕೇಂದ್ರದಿಂದ 200 ಮೀ 144 ಜಾರಿಗೊಳಿಸಲಾಗುವುದು ಎಂದು ನಿರ್ಧರಿಸಲಾಗಿದೆ.

SSLC exam to begin today 4.22 lakh students write exams sslc exam ...

ವಸತಿ ನಿಲಯದಲ್ಲಿದ್ದ ವಿದ್ಯಾರ್ಥಿಗಳು ಲಾಕ್‍ಡೌನ್ ಪರಿಣಾಮ ಶಾಲೆ ಅಥವಾ ವಸತಿ ನಿಲಯಗಳಿಗೆ ತೆರಳು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ತಮ್ಮ ವಸತಿ ಪ್ರದೇಶಕ್ಕೆ ಸಮೀಪವಿರುವ ಶಾಲೆಯನ್ನು ಆಯ್ಕೆ ಮಾಡಿಕೊಂಡು ಪರೀಕ್ಷೆಯನ್ನು ಬರೆಯಲು ಅವಕಾಶ ಕಲ್ಪಿಸಿದ್ದು, 12,694 ವಿದ್ಯಾರ್ಥಿಗಳು ಇದರ ಉಪಯೋಗ ಪಡೆದುಕೊಂಡಿದ್ದಾರೆ.

ಪರೀಕ್ಷೆಗಳು ಬೆಳಗ್ಗೆ 10.30ಕ್ಕೆ ಆರಂಭವಾಗಲಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ 9.30ಕ್ಕೆ ಹಾಜರಾಗಿ ಆರೋಗ್ಯ ತಪಾಸಣೆಗೆ ಒಳಪಡಬೇಕು. ಜೊತೆಗೆ ಪರೀಕ್ಷಾ ಕೇಂದ್ರದಲ್ಲಿ ವೈದ್ಯಕೀಯ ಸಿಬ್ಬಂದಿಯನ್ನು ನೇಮಿಸಲು ಮನವಿ ಮಾಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್‍ನ ಇಬ್ಬರು ವಾಲಂಟೀಯರ್ಸ್ ನೇಮಿಸಲು ಸೂಚಸಿಲಾಗಿದೆ.

 

ಪರೀಕ್ಷೆ ಎರಡು ದಿನವಿರುವಾಗ ಪರೀಕ್ಷಾ ಕೇಂದ್ರವಿರುವ ಪ್ರದೇಶವು ಕಂಟೋನ್ಮೆಂಟ್ ಜೋನ್ ಎಂದಾದರೆ ಕೇಂದ್ರವನ್ನು ಬದಲಾಯಿಸಿ ಬೇರೊಂದು ಕಡೆ ಪರೀಕ್ಷೆ ನಡೆಸಲಾಗುತ್ತದೆ. ಆದರೆ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರವಿರುವ ಪ್ರದೇಶ ಕಂಟೈನ್‌ಮೆಂಟ್ ಜೋನ್ ಎಂದು ತಿಳಿದು ಬಂದರೆ ಅಲ್ಲಿನ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯಲ್ಲಿ ಅವಕಾಶ ಕಲ್ಪಿಸಿ, ಮೊದಲ ಹಂತದಲ್ಲಿಯೇ ಉತೀರ್ಣರಾಗಿದ್ದಾರೆ ಎಂದು ಪರಿಗಣಿಸಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕಿ ವಿ.ಸುಮಂಗಲಾ ತಿಳಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights