SSLC : ಮಕ್ಕಳಿಗೆ ನೆರವಾಗಲು ಡಿಡಿ ಚಂದನದಲ್ಲಿ ರಿವಿಶನ್ ಕ್ಲಾಸ್ ಪ್ರಸಾರ – ಶಿಕ್ಷಣ ಸಚಿವ..

ಎಸ್ಎಸ್ಎಲ್ಸಿ ಪರೀಕ್ಷೆಗಳು ಮುಂದೂಡಿಕೆಯಾಗಿರುವುದರಿಂದ ಮಕ್ಕಳಿಗೆ ನೆರವಾಗುವ ಉದ್ದೇಶದಿಂದ ದೂರದರ್ಶನದ ಚಂದನ ವಾಹಿನಿಯಲ್ಲಿ ಏ. 29ರಿಂದ ಪುನರ್ಮನನ ತರಗತಿ  ಆರಂಭಿಸಲಾಗುತ್ತಿದೆ.  ಏ.29ರಿಂದ ಪ್ರತಿ ದಿನ ಮಧ್ಯಾಹ್ನ 3ರಿಂದ 4.30ರವರೆಗೆ ತರಗತಿಗಳು ನಡೆಯಲಿದ್ದು, ನುರಿತ ಶಿಕ್ಷಕರು ವಿಷಯವಾರು ಬೋಧನೆ ಮಾಡಲಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ  ಸುರೇಶ್ ಕುಮಾರ ತಿಳಿಸಿದ್ದಾರೆ.

ಮೊದಲ 16 ದಿನ ಪ್ರತಿ 45 ನಿಮಿಷಗಳ ಎರಡು ಅವಧಿಗಳಲ್ಲಿ ಗಣಿತ ಹಾಗೂ ವಿಜ್ಞಾನ ವಿಷಯಗಳ ಬೋಧನಾ ತರಗತಿಗಳು ನಡೆಯಲಿದ್ದು, 17ನೇ ದಿನ ಈ ಎರಡೂ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವ ವಿಧಾನವನ್ನು ಶಿಕ್ಷಕರು ತಿಳಿಸಿಕೊಡಲಿದ್ದಾರೆ. 18ನೇ ದಿನದಿಂದ ಸಮಾಜ ವಿಜ್ಞಾನದ ತರಗತಿಗಳು 6 ದಿನಗಳ ಅವಧಿಗೆ ನಡೆಯಲಿದ್ದು, ನಂತರದ ದಿನಗಳಲ್ಲಿ ಕನ್ನಡ ಮತ್ತು ಆಂಗ್ಲ ಭಾಷಾ ವಿಷಯಗಳ ಬೋಧನೆಯನ್ನೂ ಸಹ ಮಾಡಲಾಗುತ್ತದೆ.

ಪ್ರತಿ ವಿಷಯ ಬೋಧನೆಯ ಕೊನೆಯಲ್ಲಿ ವಿಶೇಷವಾಗಿ ತಯಾರಿಸಲಾಗಿರುವ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಉತ್ತರಿಸುವ ವಿಧಾನವನ್ನು ಹೇಳಿಕೊಡಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಮಧ್ಯೆ ಯಾವುದೇ ಕಾರಣಕ್ಕೂ ಮುಂದೂಡಿಕೆಯಾಗಿರುವ ಪರೀಕ್ಷೆಯನ್ನು ರದ್ದು ಮಾಡದೇ ನಡೆಸಿ ಎಂದು SSLC ವಿದ್ಯಾರ್ಥಿಗಳು ಶಿಕ್ಷಣ ಸಚಿವರಿಗೆ ಮನವಿ ಮಾಡಿಕೊಂಡಿದ್ದಾರೆ. ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಮೂಡಿಸಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಶ್ರೀ ಎಸ್. ಸುರೇಶ್ ಕುಮಾರ್ ಅವರು ಕೈಗೊಂಡಿರುವ ಮಕ್ಕಳಿಗ ತಾವೇ ನೇರವಾಗಿ ಫೋನ್ ಮಾಡಿ ಮಾತನಾಡುವ ಕಾರ್‍ಯಕ್ರಮದಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights