SSLC Result: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 71.80 ಫಲಿತಾಂಶ!

ಕರ್ನಾಟಕ ಎಸ್‌ಎಸ್‌ಎಲ್‌ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ಪರೀಕ್ಷೆಯಲ್ಲಿ ಶೇ. 71.80 ರಷ್ಟು ಮಕ್ಕಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷದ ಫಲಿತಾಂಶಕ್ಕೆ ಹೋಲಿಸಿದರೆ, ಈ ಬಾರಿಯ ಫಲಿತಾಂಶ ಕೊಂಚ ಕಡಿಮೆಯಾಗಿದೆ.

ಕಳೆದ ವರ್ಷ ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇ. 73.70 ರಷ್ಟು ಬಂದಿತ್ತು. ಈ ಬಾರಿ ಫಲಿತಾಂಶದ ಪ್ರಮಾಣ ಇಳಿಕೆಯಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಫಲಿತಾಂಶವನ್ನು ವಿವರಿಸಿದ್ದಾರೆ.

ಪರೀಕ್ಷೆ ಬರೆದ 8,11,050 ಮಕ್ಕಳ ಪೈಕಿ 5,82,316 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 2,28,734 ಮಕ್ಕಳು ಅನುತ್ತೀರ್ಣಗೊಂಡಿದ್ದಾರೆ. ಫೇಲ್‌ ಆದ ವಿದ್ಯಾರ್ಥಿಗಳು ಎದೆಗುಂದಬಾರದೆಂದು ಧೈರ್ಯದಿಂದರಬೇಕು ಎಂದು ಅವರು ಹೇಳಿದ್ದಾರೆ.

ವೆಬ್‌ಸೈಟ್‌ನಲ್ಲಿ ಇಂದೇ ಫಲಿತಾಂಶ ಲಭ್ಯವಿದ್ದು, ನಾಳೆ ಆಯಾ ಶಾಲೆಗಳಲ್ಲಿ ಫಲಿತಾಂಶದ ಜೊತೆಗೆ ಪ್ರಾವಿಶನಲ್ ಮಾರ್ಕ್ಸ್ ಕಾರ್ಡ್ ಕೂಡ ಸಿಗಲಿದೆ. 18,067 ಮಕ್ಕಳು ಪೂರಕ ಪರೀಕ್ಷೆ ಬರೆಯಲು ನಿರ್ಧರಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ಪೂರಕ ಪರೀಕ್ಷೆಯ ದಿನಾಂಕ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಈ ಬಾರಿಯ ಪರೀಕ್ಷೆಯಲ್ಲಿ ಶೇ. 71.80ರಷ್ಟು ಮಂದಿ ಪಾಸಾಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಶೇ. 72.79ರಷ್ಟು ಫಲಿತಾಂಶ ಬಂದಿದೆ. ಏಯ್ಡ್ ಶಾಲೆಗಳಲ್ಲಿ ಶೇ. 70.60ರಷ್ಟು ರಿಸಲ್ಟ್ ಬಂದಿದೆ. 50 ವರ್ಷ ದಾಟಿ ಖಾಸಗಿಯಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದ 59 ಮಂದಿ ಪೈಕಿ ಇಬ್ಬರು ಮಾತ್ರ ಪಾಸಾಗಿದ್ಧಾರೆ. ಇನ್ನು, ಪರೀಕ್ಷೆ ಬರೆದಿದ್ದ ವಿಶೇಷ ಚೇತನರಾದ 3,573 ವಿದ್ಯಾರ್ಥಿಗಳ ಪೈಕಿ 2,409 ಮಕ್ಕಳು ತೇರ್ಗಡೆಯಾಗಿದ್ದಾರೆ.

ಜಿಲ್ಲಾವಾರು ಫಲಿತಾಂಶದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲೇ ಗರಿಷ್ಠ ಫಲಿತಾಂಶ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನಕ್ಕೆ ಹೋಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights