ಇಬ್ಬರು ಯುವಕರ ಮೇಲೆ ಪೋಲೀಸರು ಮತ್ತು ಸಾರ್ವಜನಿಕರಿಂದ ಹಲ್ಲೆ!
ಇಬ್ಬರು ಯುವಕರ ಮೇಲೆ ಪೋಲೀಸರು ಮತ್ತು ಸಾರ್ವಜನಿಕರು ಸೇರಿ ಹಲ್ಲೆ ಮಾಡಿರುವ ಹೇಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹಲ್ಲೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸ್ಕೂಟರ್ನಲ್ಲಿ ಹೋಗುತ್ತಿದ್ದ ಇಬ್ಬರು ಮುಸ್ಲೀಂ ಯುವಕರನ್ನು ತಡೆದು ನಿಲ್ಲಿಸಿರುವ ಪೊಲೀಸರು ನಿಮ್ಮ ಊರು ಯಾವುದು, ಇಲ್ಲಿಗೇಕೆ ಬಂದಿದ್ದೀರಾ? ಪಾದರಾಯಪುರದಿಂದ ಬಂದಿದ್ದೀರಾ? ವೀಲಿಂಗ್ ಮಾಡೋಕೆ ಬಂದಿದ್ದೀರಾ ಎಂದೆಲ್ಲಾ ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ ಅವ್ಯಾಚ್ಯ ಶಬ್ದಗಳಿಂದ ಸಾರ್ವಜನಿಕರ ಎದುರೇ ನಿಂದಿಸಿದ್ದಾರೆ.
ಪೊಲೀಸ್ ಅಧಿಕಾರಿಯೊಬ್ಬರು ಬೂಟು ಕಾಲಿನಿಂದ ಯುವಕನ ಮೇಲೆ ಹಲ್ಲೆ ಮಾಡಿದ್ದು, ಪೊಲೀಸರೇ ಸಾರ್ವಜನಿವಾಗಿ ಹಲ್ಲೆ ಮಾಡುತ್ತಿರುವುದನ್ನು ನೋಡಿ ಪ್ರೇರಿತನಾಗಿರುವ ಯುವಕನೊಬ್ಬ ಆ ಮುಸ್ಲೀಂ ಯುವಕರ ಮೇಲೆ ಕ್ರಿಕೆಟ್ ಬ್ಯಾಟಿನಿಂದ ಹಲ್ಲೆ ಮಾಡಿದ್ದಾನೆ.

ಹಲ್ಲೆಗೊಳಗಾದ ಯುವಕರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.
ಸಾರ್ವಜನಿಕರ ಮೇಲೆ ಹಲ್ಲೆ ಮಾಡಬಾರದು ಎಂದು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೂಚಿಸಿದ್ದರು. ಅಲ್ಲದೆ ಅಲ್ಪಸಂಖ್ಯಾತರ ಮೇಲೆ ಹಲ್ಲೆ ಮಾಡುವುದು, ಸುಳ್ಳು ಸುದ್ದಿ ಹಬ್ಬಿಸುವುದನ್ನು ಮಾಡಬಾರದು. ಒಂದು ವೇಳೆ ಮಾಡಿದ್ದಲ್ಲಿ ಅಂತಹವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಎಚ್ಚರಿಕೆ ನೀಡಿದ್ದರು.
ಆದರೂ ಪೊಲೀಸರು ಸಾರ್ವಜನಿಕವಾಗಿ ಯುವಕರ ಮೇಲೆ ಹಲ್ಲೆ ಮಾಡಿದ್ದು, ಆ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುತ್ತಾರೆಯೇ ಕಾದು ನೋಡಬೇಕಿದೆ.
ವಿಡಿಯೋ ನೋಡಿ:
https://m.facebook.com/story.php?story_fbid=1186227958381733&id=379333915737812

