ಕರೋನಾ ನಿಯಂತ್ರಣಕ್ಕೆ ಸರ್ವ ಪಕ್ಷಗಳ ಸಭೆಯಲ್ಲಿ ತೆಗೆದುಕೊಂಡ 10 ನಿರ್ಣಯಗಳು

ಸಾಂಕ್ರಮಿಕವಾಗಿ ಹರಡುತ್ತಿರುವ ಕೊರೊನಾ ಸೋಂಕಿನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರಗಳು ವಿವಿಧ ರೀತಿಯಲ್ಲಿ ಪ್ರಯತ್ನಿಸುತ್ತಿವೆ. ಸಾಮಾಜಿಕವಾಗಿ ಎಲ್ಲರ ಸೋಂಕಿನ ನಿಯಂತ್ರಣಕ್ಕೆ ಸಹಕಾರ ಪಡೆದುಕೊಳ್ಳಲು ಮುಂದಾಗಿರುವ ಕರ್ನಾಟಕ ರಾಜ್ಯ ಸರ್ಕಾರ ಭಾನುವಾರ ಸರ್ವಪಕ್ಷಗಳ ಸಭೆ ಕರೆದಿತ್ತು. ಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಮುಖಂಡರು ಭಾಗವಹಿಸಿದ್ದು ಕೊರೊನಾ ನಿಯಂತ್ರಣಕ್ಕೆ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಸರ್ವಪಕ್ಷ ಸಭೆಯ ಪ್ರಮುಖ 10 ನಿರ್ಣಯಗಳು ಹೀಗಿವೆ.

  1. ಸರ್ವ ಪಕ್ಷದ ಮುಖಂಡರು ಸರ್ಕಾರದ ಕ್ರಮಗಳಿಗೆ ಒಕ್ಕೊರಲಿನ ಬೆಂಬಲ ವ್ಯಕ್ತಪಡಿಸಿ, ಈ ಸಂಕಷ್ಟದ ಸನ್ನಿವೇಶದಲ್ಲಿ ಸರ್ಕಾರದ ಜೊತೆ ಕೈಜೋಡಿಸುವುದಾಗಿ ಸಹಮತ ವ್ಯಕ್ತಪಡಿಸಿದರು.
  2. ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, ನರ್ಸ್‍ಗಳು ಹಾಗೂ ಅರೇ ವೈದ್ಯಕೀಯ ಸಿಬ್ಬಂದಿಗೆ ಪಿಪಿಇ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಜರ್ ಬಾಟಲಿ ಗಳನ್ನು ಸರಬರಾಜು ಮಾಡಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು.
  3. ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ರಕ್ಷಣಾ ಸಾಧನಗಳನ್ನು ಒದಗಿಸಲು ಕೂಡಲೇ ಕ್ರಮಕೈಗೊಳ್ಳಲಾಗುವುದು.
  4. ರಾಜ್ಯದ ಗಡಿಗಳಲ್ಲಿ ಸಿಕ್ಕಿಕೊಂಡಿರುವ ಜನರ ವೈದ್ಯಕೀಯ ತಪಾಸಣೆ ನಡೆಸಿ, ಅವರಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡಲಾಗುವುದು.
  5. ಸೋಂಕಿಗೊಳಗಾಗಿರುವ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲು ಹಾಗೂ ಆರೋಗ್ಯವಾಗಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು.
  6. ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಅಗತ್ಯ ಸಂಖ್ಯೆಯಲ್ಲಿ ಟೆಸ್ಟಿಂಗ್ ಕಿಟ್ (ಪರೀಕ್ಷಾ ಸಾಧನಗಳು) ವಿತರಿಸಲಾಗುವುದು.
  7. ರೈತರ ಕೃಷಿ ಉತ್ಪನ್ನಗಳ, ಸಾಗಣೆ, ಮಾರಾಟ ಮತ್ತು ಒಳಕೆದಾರರಿಗೆ ಸೂಕ್ತವಾಗಿ ವಿತರಿಸಲು ವ್ಯವಸ್ಥೆ ಮಾಡಲಾಗುವುದು.
  8. ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಇತ್ಯಾದಿಗಳ ವಿತರಣೆ ಸೂಕ್ತ ವ್ಯವಸ್ಥೆ ಮಾಡಲಾಗುವುದು.
  9. ಪಡಿತರವನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಸಲಹೆಯನ್ನು ವಿರೋಧ ಪಕ್ಷದ ನಾಯಕರು ನೀಡಿದ್ದು, ಆ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು.
  10. ಮುಸ್ಲಿಂ ಬಾಂಧವರ ಜೊತೆ ನಾನು ಸಭೆ ನಡೆಸಿದ್ದು, ಅವರೆಲ್ಲರೂ ತಮ್ಮ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆಯನ್ನು ನಡೆಸಲು ಒಪ್ಪಿ ಸಹಕರಿಸಿರುತ್ತಾರೆ. ಅವರನ್ನು ಅಭಿನಂದಿಸುತ್ತೇನೆ.
ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights