ಕೊರೊನಾ ಉಲ್ಬಣ : ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವವರಿಗೆ ನಿಷೇಧ ಹೇರಿದ ಸಿಎಂ

ಕರ್ನಾಟದಲ್ಲಿ ಕಳೆದ ಒಂದು ವಾರದಿಂದ ಕೊರೊನಾ ಸೋಂಕಿತರ ಸಂಖ್ಯೆ ಹಿಚ್ಚಾಗುತ್ತಿದ್ದು ನಿಯಂತ್ರಣಕ್ಕೆ ಬರುವ ಲಕ್ಷಣಗಳೇ ಕಾಣ ಸಿಗುತ್ತಿಲ್ಲ. ಬೇರೆ ಬೇರೆ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಲ್ಲೇ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು ವೈರಸ್ ಹರಡುವುದನ್ನ ತಡೆಗಟ್ಟುವುದೇ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹೀಗಾಗಿ ಸಿಎಂ ಯಡಿಯೂರಪ್ಪ ಕರ್ನಾಟದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾರಣವಾದ ಮಹಾರಾಷ್ಟ್ರದಿಂದ ಬರುವವರಿಗೆ ಕಟ್ಟುನಿಟ್ಟಾಗಿ ನಿಷೇಧ ಹೇರಿದ್ದಾರೆ .

ಹೌದು… ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಡನಾಡಿದ ಸಿಎಂ ಯಡಿಯೂರಪ್ಪ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರಿಗೆ ನಿಷೇಧ ಮಾಡಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಇದವರೆಗೆ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗಿತ್ತು. ಆದರೆ ಲಾಕ್ ಡೌನ್ 4.0 ಸಡಿಲಿಕೆಗೊಂಡ ಬಳಿಕ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಮೂರು ಪಟ್ಟು ಹೆಚ್ಛಾಗುತ್ತದೆ. ಲಾಕ್ ಡೌನ್ 3.0 ನಲ್ಲಿ 25 ರಿಂದ 35 ಮೀರದ ಸೋಂಕಿತರ ಸಂಖ್ಯೆ ಲಾಕ್ ಡೌನ್ 4.0 ವೇಳೆಗೇ 100 ರ ಗಡಿ ದಾಟಿದೆ. ಇದು ಭಾರೀ ಆತಂಕವನ್ನೇ ಸೃಷ್ಟಿ ಮಾಡಿದೆ.

ರಾಜ್ಯ ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ಕೊರೊನಾ ಸೋಂಕಿತರು ಬರಲು ಕಾರಣವಾದ ಮಹಾರಾಷ್ಟ್ರದಿಂದ ಯಾರೋಬ್ಬರು ಬಾರದಂತೆ ಕರ್ನಾಟಕ ಸರ್ಕಾರ ನಿಷೇಧ ಹೇರಿದೆ. ಮಂಡ್ಯದಲ್ಲಿ ಕಳೆದೆರೆಡು ದಿನಗಳಲ್ಲಿ ಹೆಚ್ಚೆಚ್ಚೆ ಮಹಾರಾಷ್ಟ್ರದಿಂದ ಬಂದವರಿಗೇ ಸೋಂಕು ದೃಢಪಟ್ಟಿದೆ. ಅಷ್ಟೇ ಯಾಕೆ ಇಂದು ಕೂಡ ಚಿಕ್ಕಬಳ್ಳಾಪುರದಲ್ಲಿ ದೃಢಪಟ್ಟ 45 ಪೀಡಿತರಲ್ಲಿ ಬಹುತೇಕರು ಮಹಾರಾಷ್ಟ್ರದವರೇ ಎಂದು ವರದಿಯಾಗಿದೆ. ಹೀಗಾಗಿ, ಸಿಎಂ ಯಡಿಯೂರಪ್ಪ ಮಹಾರಾಷ್ಟ್ರದ ಪ್ರಯಾಣಿಕರಿಗೆ ರಾಜ್ಯ ಪ್ರವೇಶಕ್ಕೆ ಅನುಮತಿ ನೀಡುವುದು ಬೇಡ ಎಂದು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights