ಕೊರೊನಾ ಚಿಕಿತ್ಸೆಗೆ ವಿಶೇಷ ಪ್ಯಾಕೇಜ್ ಮೀಸಲಿಡಿ: ಸೋನಿಯಾ ಗಾಂಧಿ ಆಗ್ರಹ
ಕೊರೋನಾ ವೈರಾಣು ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇಂತಹ ವಿಷಮ ಸ್ಥಿತಿಯಲ್ಲಿ ಜನ ಆತಂಕಕ್ಕೀಡಾಗಬಾರದು ಮತ್ತು ದೇಶವೂ ತಲೆಬಾಗಬಾರದು ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪತ್ರಿಕಾ ಹೇಳಿಕೆಯಲ್ಲಿ ಹೇಳಿದ್ದಾರೆ.
ಕೋವಿಡ್-19 ವೈರಾಣು ತಡೆಗೆ ಕೆಲವು ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡಿವೆ. ಈ ಮಾರಕ ಸೋಂಕು ದೃಢಪಟ್ಟಿರುವ ಸೋಂಕಿತರನ್ನು ಪಾರು ಮಾಡಲು ಕೇಂದ್ರ ಸರ್ಕಾರವು ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕು. ದೇಶಾದ್ಯಂತ ಕೊರೋನಾ ವೈರಸ್ ತಪಾಸಣಾ ಕೇಂದ್ರಗಳನ್ನು ಹೆಚ್ಚಿಸಿ ಮುಂಜಾಗೃತ ಕ್ರಮಕೈಗೊಳ್ಳಬೇಕು ಎಂದು ಸೋನಿಯಾ ಗಾಂಧಿ ಯವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
Equally alarming are reports that there is artificial shortages & black marketing of hand sanitizers, face masks & even…
Posted by Indian National Congress on Sunday, March 22, 2020
ಮಾರುಕಟ್ಟೆಯಲ್ಲಿ ನಕಲಿ ಸ್ಯಾನಿಟೈಸರ್ಗಳು, ಮಾಸ್ಕ್, ದ್ರವ ಸೋಪುಗಳನ್ನು ಅಧಿಕ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಇದರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ಗೆ 2ನೇ ವ್ಯಕ್ತಿ ಸಾವನ್ನಪ್ಪಿದ್ದು, ಬಿಹಾರದಲ್ಲಿಯೂ ಓರ್ವ ಸಾವನ್ನ್ಪಪಿದ್ದಾರೆ. ಈ ಮೂಲಕ ಭಾರತದಲ್ಲಿ ಕೋವಿಡ್-19ಗೆ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರ ಮೂಲದ 63 ವರ್ಷದ ವ್ಯಕ್ತಿಯೊಬ್ಬರು ಕೊರೋನಾ ವೈರಸ್ಗೆ ಬಲಿಯಾಗಿದ್ದಾರೆ. ಮಾ. 1ರಂದು ಕೊರೋನಾ ಶಂಕೆಯಿಂದ ಮುಂಬೈನ ಖಾಸಗಿ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮಾ. 21ರ ರಾತ್ರಿ 11 ಗಂಟೆಗೆ ಸಾವನ್ನಪ್ಪಿದ್ದಾರೆ. ಡಯಾಬಿಟಿಸ್, ಅಧಿಕ ರಕ್ತದೊತ್ತಡವಿದ್ದ ಅವರಿಗೆ ಹೃದಯದಲ್ಲಿ ನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಭಾರತದಲ್ಲಿ ಸಾವಿನ ಸಂಖ್ಯೆ 6 ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಕರ್ನಾಟಕದ ಕಲಬುರ್ಗಿಯಲ್ಲಿ ಮೊದಲ ವ್ಯಕ್ತಿ ಕೊರೋನಾ ವೈರಸ್ಗೆ ಬಲಿಯಾಗಿದ್ದರು. ನಂತರ ದೆಹಲಿ, ಮುಂಬೈನಲ್ಲಿ ಸಾವಿನ ಪ್ರಕರಣ ದಾಖಲಾಗಿತ್ತು.

