ಕೊರೊನಾ ಸೋಂಕಿನ ಆತಂಕದಿಂದ ನಿಟ್ಟುಸಿರು ಬಿಟ್ಟ ಕೊಪ್ಪಳ!
ಲಾಕ್ಡೌನ್ ಸಂದರ್ಭದಲ್ಲಿ ಬಾಗಲಕೋಟೆಯಲ್ಲಿ ನಡೆದಿದ್ದ ಮದುವಯಿಂದಾಗಿ ಪಕ್ಕದ ಗದಗ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಕೊರೋನಾ ಹರಡುವ ಭೀತಿ ಆತಂಕ ಮೂಡಿಸಿತ್ತು. ಈ ಮದುವೆಯಲ್ಲಿ ಪಾಲ್ಗೊಂಡಿದ್ದ ಕೆಲವರಲ್ಲಿ ಕೊರೋನಾ ಸೋಂಕು ಕಂಡುಬಂದಿತ್ತು. ಅವರ ಟ್ರಾವೆಲ್ ಹಿಸ್ಟರಿಯನ್ನು ಗಮನಿಸಿದಾಗ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಿಲೋಗಲ್, ಹನುಮನಾಳದ ವರೆಗೆ ವಿಸ್ತರಿಸಿತ್ತು. ಈ ವಿಚಾರ ಸಾಮಾನ್ಯವಾಗಿ ಇಡೀ ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿತ್ತು.
ಹೀಗಾಗಿ ಕೊಪ್ಪಳ ಜಿಲ್ಲೆಯಲ್ಲಿ ನಿಲೊಗಲ್ ಗ್ರಾಮದ 18 ಜನರನ್ನು ಮೇ 7ರಂದು ಕ್ವಾರಂಟೈನ್ ಮಾಡಲಾಗಿತ್ತು. ಇವರೆಲ್ಲ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಡಾನಕ್ಶಿರೂರು ಗ್ರಾಮದ ಕೊರೊನಾ ಸೋಂಕು ದೃಢಪಟ್ಟ ವ್ಯಕ್ತಿಯೊಬ್ಬನ ಮಗಳ ಮದುವೆಯಲ್ಲಿ ಪಾಲ್ಗೊಂಡಿದ್ದರು.
ಇದಲ್ಲದೆ, ಕೊಪ್ಪಳ ಜಿಲ್ಲೆಯಲ್ಲಿ 154 ಜನರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 118 ಜನರ ವರದಿ ನೆಗೆಟಿವ್ ಬಂದಿದೆ. ಅಲ್ಲದೆ, ಕೊಪ್ಪಳ ಜಿಲ್ಲೆಯ ಕೇವಲ 36 ಸ್ಯಾಂಪಲ್ಗಳ ಪರೀಕ್ಷಾ ವರದಿ ಮಾತ್ರ ಬಾಕಿ ಇದ್ದು, ಇಡೀ ಜಿಲ್ಲೆ ಕೊನೆಗೂ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

