ಕೊರೊನಾದಿಂದ ಕಂಗೆಟ್ಟ ಕಟ್ಟಡ ಕಾರ್ಮಿಕರಿಗೆ 1000 ಹೆಚ್ಚುವರಿ ಸಹಾಯ ಧನ – ಸಿಎಂ ಘೋಷಣೆ
ಕೊರೊನಾ ಹರಡುವ ಭೀತಿಯಲ್ಲಿ ಇಡೇ ದೇಶವೇ ಲಾಕ್ ಡೌನ್ ಮಾಡಲಾಗಿದೆ. ಇದರ ಪ್ರಭಾವ ದಿನಗೂಲಿ ಕಾರ್ಮಿಕರ ಮೇಲೆ ಹೆಚ್ಚಾಗಿದ್ದು, ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಕಟ್ಟಡ ಕಾರ್ಮಿಕರಿಗಾಗಿ 5 ಸಾವಿರ ರೂ. ಸಹಾಯ ಧನ ನೀಡಲು ಮುಂದಾಗಿತ್ತು. ಸದ್ಯ ಕೇಂದ್ರದ ಸಹಾಯ ಧನದೊಂದಿಗೆ ರಾಜ್ಯ ಸರ್ಕಾರವೂ ಸಹಾಯ ಹಸ್ತ ಚಾಚಿದೆ.
ಹೌದು… ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ 1 ಸಾವಿಉರ ರೂಪಾಯಿ ಸಹಾಯ ಧನ ನೀಡುವುದಾಗಿ ಘೋಷಿಸಲಾಗಿದೆ. ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಜ್ಯದಲ್ಲಿನ ಕೊರೊನಾ ನಿಯಂತ್ರಣ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ, ಲಾಖ್ ಡೌನ್ ನಿಂದ ಆರ್ಥಿಕ ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಕಂಗೆಟ್ ಕಾರ್ಮಿಕರ ನೆರವಿಗೆ ಸರ್ಕಾರ ನಿಲ್ಲುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
15 ಲಕ್ಷ ಕಟ್ಟಡ ಕಾರ್ಮಿಕರಿಗೆ 1 ಸಾವಿರ ರೂ. ಹೆಚ್ಚುವರಿ ಸಹಾಯ ಧನ ನೀಡುವಂತೆ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದರು. ನೇರವಾಗಿ ಕಾರ್ಮಿಕರ ಖಾತೆಗೆ ಹಣ ಜಮಾ ಆಗುವುದು.

