ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದ 23 ಜನರ ವಿರುದ್ಧ ಕ್ರಿಮಿನಲ್ ಕೇಸ್‌ ದಾಖಲು!

ಮಹಾರಾಷ್ಟ್ರದ ಗಡಿ ಭಾಗದಲ್ಲೇ ಇರುವ ಬೆಳಗಾವಿ ಜಿಲ್ಲೆಗೆ ಅನೇಕ ವಲಸಿಗರು ದಿನನಿತ್ಯ  ಮಹಾರಾಷ್ಟ್ರದಿಂದ ಬರುತ್ತಲೇ ಇದ್ದಾರೆ. ಸರ್ಕಾರ ಅವರನ್ನು ಕಡ್ಡಾಯವಾಗಿ 7 ದಿನ ಹೋಂ ಕ್ವಾರಂಟೈನ್ ಸೂಚನೆ ನೀಡಿದೆ. ಆದರೆ, ಈ ನಿಯಮವನ್ನು ಯಾರೊಬ್ಬರು ಪಾಲಿಸುತ್ತಿಲ್ಲ.

ಹಾಗಾಗಿ ರಾಜ್ಯಕ್ಕೆ ಬಂದವರ ಅಶಿಸ್ತಿನಿಂದಾಗಿ ಹೋಂ ಕ್ವಾರಂಟೈನ್ ನಿಯಮವನ್ನು  ಉಲ್ಲಂಘಿಸಿದವರ ವಿರುದ್ಧ ಬೆಳಗಾವಿ ಜಿಲ್ಲಾಢಳಿತ ಕ್ರೀಮಿನಲ್ ಕೇಸ್ ದಾಖಲಿಸಲು ನಿರ್ಧರಿಸಿದೆ. ಬೆಳಗಾವಿ ಜಿಲ್ಲೆಯಲ್ಲಿ ಈಗಾಗಲೇ 23 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಈ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದಿಂದ ಬರುವವರಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮೊದಲು ಕಡ್ಡಾಯವಾಗಿ ಹೋಂ ಕ್ವಾರಂಟೈನ್ ಆಗಲು ಸೂಚನೆ ನೀಡಿದ್ದರು. ಆದರೆ, ಹಲವರು ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಂತವರ ವಿರುದ್ಧ ಕೇಸ್ ದಾಖಲಾಗಿದೆ. ಬೆಳಗಾವಿ ನಗರ ವ್ಯಾಪ್ತಿಯಲ್ಲಿ 10 ಜನರ ವಿರುದ್ಧ ಕೇಸ್ ದಾಖಲಾಗಿದೆ. ಹುಕ್ಕೇರಿ, ಸಂಕೇಶ್ವರ ಹಾಗೂ ಗೋಕಾಕ್​​ನಲ್ಲಿ 13 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚಾಗಲು ಮಹಾರಾಷ್ಟ್ರು ನಂಟು ಪ್ರಮುಖ ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಮಹಾರಾಷ್ಟ್ರದಿಂದ ಆಗಮಿಸುವ ಪ್ರತಿಯೊಬ್ಬರನ್ನು 7 ದಿನ ಕಡ್ಡಾಯವಾಗಿ ಹೋಂ ಕ್ವಾರಂಟೈನ್ ಸಲಹೆ ನೀಡಲಾಗಿದೆ. ಆದರೆ, ನಿಯಮವನ್ನು ಅನೇಕರು ಉಲ್ಲಂಘನೆ ಮಾಡುತ್ತಿದ್ದು, ಕೊರೋನಾ ಸೋಂಕು ಹರಡಲು ಕಾರಣವಾಗುತ್ತಿದ್ದಾರೆ. ಇಂತವರ ವಿರುದ್ಧ ಕ್ರಮಕ್ಕೆ ಬೆಳಗಾವಿ ಜಿಲ್ಲಾಢಳಿತ ಮುಂದಾಗಿದೆ.

ಮುಂಬೈನಿಂದ ಗೋಕಾಕ್‌ನ ಕಲ್ಲೋಳಿ ಗ್ರಾಮಕ್ಕೆ ಬಂದಿದ್ದ ವ್ಯಕ್ತಿಯೊಬನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇಡಲಾಗಿತ್ತು. ಆತನ ಗಂಟಲು ಮಾದರಿ ಪ್ರಯೋಗಾಲಕ್ಕೆ ಕಳುಹಿಸಲಾಗಿದ್ದು. ವರದಿ ಬರುವ ಮೊದಲೆ ಆತನನ್ನು ಬಿಟ್ಟು ಮನೆಗೆ ಕಳುಹಿಸಲಾಗಿತ್ತು. ಈ ವ್ಯಕ್ತಿ ಲೋಕೋಪಯೋಗಿ ಇಲಾಖೆಯ ಕಚೇರಿಯ ಎಸ್​ಡಿಎ ಸಂಪರ್ಕಕ್ಕೆ ಬಂದಿದ್ದನು. ಜೂನ್ 2ರಂದು ಕಲ್ಲೋಳ್ಳಿ ಗ್ರಾಮದ ವ್ಯಕ್ತಿಗೆ ಕೊರೋನಾ ಸೋಂಕು ಇರೋದು ದೃಢವಾಗಿತ್ತು.

ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ 14 ಜನ ಸಿಬ್ಬಂದಿಗೆ ಹೋಂ ಕ್ವಾರಂಟೈನ್ ಸೂಚನೆ ನೀಡಲಾಗಿದೆ. ಜತೆಗೆ ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಕೇಸ್ ಸಹ ದಾಖಲು ಮಾಡಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights