ದೇಶಾದ್ಯಂತ ಮೂರು ತಿಂಗಳ ಬಾಡಿಗೆ ವಿನಾಯ್ತಿ ನೀಡಿ: ಪ್ರಧಾನಿಗೆ ಹೆಚ್ಡಿಕೆ ಒತ್ತಾಯ
ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಆಗಿರುವುದರಿಂದ ತೀವ್ರ ಆರ್ಥಿಕ ಮುಗ್ಗಟ್ಟು ಉಂಟಾಗಿದ್ದು ಈ ಸಂದರ್ಭದಲ್ಲಿ ಬಾಡಿಗೆದಾರರನ್ನು ಕಾಪಾಡಲು ಕೇಂದ್ರ ಸರ್ಕಾರ ಬಾಡಿಗೆ ವಿನಾಯ್ತಿ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಇಡೀ ದೇಶಕ್ಕೆ ಅನ್ವಯವಾಗುವಂತೆ ಮೂರು ತಿಂಗಳು ಬಾಡಿಗೆ ವಿನಾಯ್ತಿಯನ್ನು ಪ್ರಧಾನಿ ಘೋಷಿಸಬೇಕೆಂದು ಮನವಿ ಮಾಡಿದ್ದಾರೆ. ದೆಹಲಿ ಸರ್ಕಾರ ಮೂರು ತಿಂಗಳ ಬಾಡಿಗೆಯನ್ನು ತಾನೇ ಕೊಡುವ ಮೂಲಕ ಯೋಜನೆ ಘೋಷಿಸಿದೆ. ಇಂತಹ ಯೋಜನೆಯನ್ನು ದೇಶಾದ್ಯಂತ ಜಾರಿಗೆ ತರಬೇಕೆಂದು ಒತ್ತಾಯಿಸಿದ್ದಾರೆ.
ಆರ್ಥಿಕ ಮುಗ್ಗಟ್ಟಿನಿಂದ ಬಾಡಿಗೆದಾರರನ್ನು ಕಾಪಾಡಲು ಅನೇಕ ದೇಶಗಳು ಕರೋನ ಸಂಕಟದ ಅವಧಿಗೆ ಬಾಡಿಗೆ ವಿನಾಯಿತಿಯನ್ನು ಘೋಷಿಸಿವೆ. ದೆಹಲಿಯ ಸರಕಾರ ಮೂರು ತಿಂಗಳ ಬಾಡಿಗೆಯನ್ನು ತಾನೇ ಕೊಡುವ ಯೋಜನೆ ಘೋಷಿಸಿದೆ. ಇಡೀ ದೇಶಕ್ಕೆ ಅನ್ವಯವಾಗುವಂತೆ ಮೂರು ತಿಂಗಳು ಬಾಡಿಗೆ ವಿನಾಯಿತಿಯನ್ನು ಸನ್ಮಾನ್ಯ ಪ್ರಧಾನಿ ಘೋಷಿಸಲು ಮನವಿ ಮಾಡಿಕೊಳ್ಳುತ್ತೇನೆ.
1/3— H D Kumaraswamy (@hd_kumaraswamy) April 12, 2020
ದೆಹಲಿ ಮುಂಬಯಿ ಬೆಂಗಳೂರಿನಂತಹ ನಗರಗಳಲ್ಲಿ ವೃತ್ತಿ ಮಾಡುವ ಹಾಗೂ ಇಲ್ಲಿನ ಸಂಸ್ಥೆಗಳಲ್ಲಿ ಓದುತ್ತಿರುವ ಅನೇಕ ಜನರ ಆರ್ಥಿಕ ಸ್ಥಿತಿ ನಾಜೂಕಾಗಿದೆ. ಇಂತಹ ಸಂದರ್ಭದಲ್ಲಿ ಮನೆ, ಪಿಜಿ, ಹಾಸ್ಟೆಲ್ ಮಾಲೀಕರು ಎಂದಿನಂತೆ ಬಾಡಿಗೆ ವಸೂಲಿಗೆ ಇಳಿಯದೆ ಉದಾರತೆ ತೋರಲಿ. ಸರಕಾರ ಬಾಡಿಗೆ ವಿನಾಯಿತಿ ಘೋಷಿಸಿ ಜನಸಾಮಾನ್ಯನ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ.

