ಪಾದರಾಯನಪುರ ಕಾರ್ಪೊರೇಟರ್ ಇರ್ಮಾನ್ ಪಾಷಾ ವಿರುದ್ಧ ಎಫ್‍ಐಆರ್..!

ಕೊರೊನಾ ಸೋಂಕು ಪತ್ತೆಯಾದ ಬಳಿಕ ಹೈಡ್ರಾಮಾ ವನ್ನೇ ಕ್ರಿಯೇಟ್ ಮಾಡಿದ ಪಾದರಾಯನಪುರ ಕಾರ್ಪೊರೇಟರ್ ಇರ್ಮಾನ್ ಪಾಷಾ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಹೌದು… ಶುಕ್ರವಾರ ಕೊರೊನಾ ಪಾಸಿಟಿವ್ ಬಂದರೂ ಆಸ್ಪತ್ರೆಗೆ ದಾಖಲಾಗದ ಪಾದರಾಯನಪುರ ಕಾರ್ಪೊರೇಟರ್ ಇರ್ಮಾನ್ ಪಾಷಾ ಶನಿವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನೆ ಬಳಿಗೆ ಪೊಲೀಸರು, ಆರೋಗ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಬಂದರೂ ಇಮ್ರಾನ್ ಪಾಷಾ ಮನೆಯಿಂದ ಹೊರಬರದೇ ಮೊಂದುತನ ಪ್ರದರ್ಶಿಸಿದ್ದಾರೆ.

ಯಾರ ಮಾತಿಗೂ ಬಗ್ಗದ ಕಾರ್ಪೊರೇಟರ್ ಇರ್ಮಾನ್ ಪಾಷಾ ಅವರಿಗೆ ಅರೆಸ್ಟ್ ಮಾಡುವುದಾಗಿ ತಿಳಿಸಿದಾಗ ಮನೆಯಿಂದ ಹೊರಬಂದಿದ್ದಾರೆ. 3 ಗಂಟೆಗಳ ಕಾಲ ಹೈಡ್ರಾಮ ವಾಡಿದ ಕಾರ್ಫೋರೇಟರ್ ನಂತರ ಪಿಪಿಇ ಕಿಟ್ ಹಾಕಿಕೊಂಡು ಹೊರಬಂದು ಜನರತ್ತ ಕೈ ಬೀಸಿ ಅಬ್ಯುಲೆನ್ಸ್ ನಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಹಾಜರಾಗಿದ್ದಾರೆ. ಸುರುಮಾರು ಎರಡು ನೂರಕ್ಕೂ ಹೆಚ್ಚು ಜನರೊಂದಿಗೆ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಸದ್ಯ ಅವರೆಲ್ಲರನ್ನೂ ಪತ್ತೆ ಹಚ್ಚುವ ಕಾರ್ಯ ನಡೆದಿದ್ದು ಕ್ವಾರಂಟೈನ್ ಮಾಡಲಾಗುತ್ತಿದೆ. ಕೊರೊನಾ ಪಾಸಿಟಿವ್ ಬಂದ ಬಳಿಕ ಆಸ್ಪತ್ರೆಗೆ ದಾಖಲಾಗದೇ ಮೊಂಡುತನ ಪ್ರದರ್ಶಿಸಿದ ಪಾಷಾ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಈ ಸಂಬಂಧ ಆರೋಗ್ಯ ಅಧಿಕಾರಿಗಳು ಜೆಜೆ ನಗರ ಪೊಲೀಸರಿಗೆ ದೂರು ನೀಡಿದ್ದರು. ಆರೋಗ್ಯ ಅಧಿಕಾರಿಗಳ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights