ಪಿಎಂ ಕೇರ್ಸ್ ಹಣವನ್ನು ಎನ್‌ಡಿಆರ್‌ಎಫ್‌ಗೆ ವರ್ಗಾಯಿಸಲು ಮನವಿ: ಸರ್ಕಾರದ ಉತ್ತರ ಕೇಳಿದ ಸುಪ್ರೀಂ ಕೋರ್ಟ್
ಪಿಎಂ ಕೇರ್ಸ್ ನಿಧಿಗೆ ದೇಶದ ಜನರು ನೀಡಿರುವ ಸಹಾಯಧನವನ್ನು ಎನ್‌ಡಿಆರ್‌ಎಫ್ (ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ) ಗೆ ವರ್ಗಾಯಿಸಬೇಕೆಂದು ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾಗಿರುವ ಮನವಿಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಪ್ರತಿಕ್ರಿಯೆಯನ್ನು ಕೇಳಿದೆ.
ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಹಾಯಧನವನ್ನು ಸ್ವೀಕರಿಸಲು ಕೇಂದ್ರ ಸರ್ಕಾರವು ಪಿಎಂ ಕೇರ್ಸ್ ಫಂಡ್ ಅನ್ನು ಸ್ಥಾಪಿಸಿದೆ.
ನ್ಯಾಯಾಲಯವು ಕೇಂದ್ರಕ್ಕೆ ನೋಟಿಸ್ ನೀಡಿದ್ದು, ಎರಡು ವಾರಗಳಲ್ಲಿ ತನ್ನ ಉತ್ತರವನ್ನು ಸಲ್ಲಿಸುವಂತೆ ಕೇಳಿದೆ.
ಸಾರ್ವಜನಿಕ ಹಿತಾಸಕ್ತಿಗಾಗಿ ಎನ್‌ಜಿ ಒಂದು ಸಲ್ಲಿಸಿರುವ ಪಿಐಎಲ್ ವಿಚಾರಣೆಯನ್ನು ಸುಪ್ರಿಂ ಕೋರ್ಟ್ ನಡೆಸುತ್ತಿದೆ. ಸಾಂಕ್ರಾಮಿಕ ರೋಗವನ್ನು ಎದುರಿಸಲು ಸರ್ಕಾರವು ವಿಪತ್ತು ನಿರ್ವಹಣಾ ಕಾಯ್ದೆಯಡಿ ರಾಷ್ಟ್ರೀಯ ಯೋಜನೆಯನ್ನು ಸಿದ್ಧಪಡಿಸಬೇಕು ಮತ್ತು ಕಾರ್ಯಗತಗೊಳಿಬೇಕು ಎಂದು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಲಾಗಿದೆ.
ಇಲ್ಲಿಯವರೆಗೆ “ಪಿಎಂ ಕೇರ್ಸ್ ನಿಧಿಗೆ ನೀಡಲಾಗಿರುವ ಸಹಾಯಧನ”ದ ಮಾಹಿತಿಯನ್ನು ಬಹಿರಂಗ ಪಡಿಸಲು ಕೇಂದ್ರ ಸರ್ಕಾರ ಹಿಂದೇಟು ಹಾಕುತ್ತಿರುವ ಕಾರಣದಿಂದ, ಪಿಎಂ ಕೇರ್ಸ್‌ಗೆ ಬಂದಿರುವ ಹಣವನ್ನು ಎನ್‌ಡಿಆರ್‌ಎಫ್‌ಗೆ ವರ್ಗಾಯಿಸಬೇಕೆಂದು ಆರ್ಜಿದಾರರು ಕೋರಿದ್ದಾರೆ.

