ಬೆಂಗಳೂರಿನಲ್ಲಿ ಕೊರೊನಾಗೆ 3ನೇ ಬಲಿ : ರಾಜ್ಯದಲ್ಲಿ 13 ಕ್ಕೇರಿದ ಸಾವಿನ ಸಂಖ್ಯೆ!
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿದ್ದು ಇಂದು ಮಹಾಮಾರಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಪರಿಣಾಮ ಸಿಲಿಕಾನ್ ಸಿಟಿಯಲ್ಲಿ ಆತಂಕ ಮತ್ತಷ್ಟು ಅಧಿಕವಾಗಿದ್ದು ಬೆಂಗಳೂರಿನಲ್ಲಿ ಕಿಲ್ಲರ್ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 3 ಕ್ಕೆ ಏರಿಕೆಯಾಗಿದೆ.
ಹೌದು.. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 66 ವರ್ಷದ ವ್ಯಕ್ತಿಯೊಬ್ಬರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಸೋಂಕಿತ ವ್ಯಕ್ತಿಯನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಕಿಲ್ಲರ್ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 3 ಕ್ಕೆ ಏರಿಕೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
195ನೇ ರೋಗಿ ಮಣಿಪುರದಿಂದ ಬೆಂಗಳೂರಿಗೆ ಮಾರ್ಚ್ 12 ರಂದು ಆಗಮಿಸಿದ್ದರು. ಬಿಬಿಎಂಪಿ ನಿವಾಸಿಯಾಗಿದ್ದ ಇವರು ಏ.10 ರಿಂದ ವೆಂಟಿಲೇಟರ್ ನಲ್ಲಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೊದಲು ಬ್ಯಾಪಿಸ್ಟ್ ಆಸ್ಪತ್ರೆ ಗೆ ದಾಖಲಾಗಿದ್ರು. ಬಳಿಕ ಕೊರೊನಾ ಐಸೋಲೇಷನ್ ಆಸ್ಪತ್ರೆಗೆ ದಾಖಲಾಗಿದ್ದರು.
ರಾಜ್ಯದಲ್ಲಿ ಒಟ್ಟು 279 ಮಂದಿಗೆ ಕೊರೊನಾ ಬಂದಿದ್ದು ಈ ಪೈಕಿ 80 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ರೋಗಿ ಸಂಖ್ಯೆ 43 ಮತ್ತು 101 ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

