ಮತ್ತೆ ರಾಷ್ಟ್ರ ರಾಜಧಾನಿಯಲ್ಲಿ ಗುಂಡಿನ ಸದ್ದು : ಇಬ್ಬರು ಕ್ರಿಮಿನಲ್ ಮೇಲೆ ಎನ್ ಕೌಂಟರ್!

ಬೆಳಗಿನ ಜಾವ ರಾಷ್ಟ್ರ ರಾಜಧಾನಿಯಲ್ಲಿ ಕೇಳಿದ ಗುಂಡಿನ ಸದ್ದಿಗೆ ಜನ ಬೆಚ್ಚಿಬಿದ್ದಿದ್ದಾರೆ. ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಕ್ರಿಮಿನಲ್ ಗಳನ್ನು ಎನ್ ಕೌಂಟರ್ ನಲ್ಲಿ ದೆಹಲಿ ಪೊಲೀಸರು ಹೊಡೆದುರುಳಿಸಿದ್ದಾರೆ.

ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಕ್ರಿಮಿನಲ್ ಗಳಾದ ರಾಜ ಖುರೇಶಿ ಹಾಗೂ ರಮೇಶ್ ಬಹದ್ಧೂರ್ ಅವರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಇವರ ಮೇಲೆ 30 ಸುತ್ತು ಗುಂಡು ಹಾರಿಸಲಾಗಿದೆ ಎನ್ನಲಾಗಿದೆ.

ಪೊಲೀಸರ ಪ್ರಕಾರ, ‘ಇವರು ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದರು. ತನಿಖೆ ವೇಳೆ ಪರಾರಿಯಾಗಿದ್ದು, ಬಂಧನ ವೇಳೆ ಎನ್ ಕೌಂಟರ್ ನಡೆಸಲಾಗಿದೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದರೂ, ಆ ವೇಳೆಗಾಗಲೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಟಿಸಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights