ಮಹಾರಾಷ್ಟ್ರ ಬಿಕ್ಕಟ್ಟು: ಉದ್ಧವ್‌ಗೆ ಕರೆ ಮಾಡಿ ಸಂಪೂರ್ಣ ಬೆಂಬಲ ಸೂಚಿಸಿದ ರಾಹುಲ್‌ ಗಾಂಧಿ!

ಮಹಾರಾಷ್ಟ್ರದ ಮೈತ್ರಿ ಸರ್ಕಾರದಲ್ಲಿ ಬಿರುಕು ಮೂಡಿದೆ ಎಂಬ ವದಂತಿಗಳ ನಡುವೆ ಬಿಕ್ಕಟ್ಟನ್ನು ಶಮನ ಮಾಡುವ ದೃಷ್ಟಿಯಿಂದ ಇಂದು ಮುಖ್ಯಮಂತ್ರಿ ಉದ್ಧವ್‌ಠಾಕ್ರೆ ಅವರಿಗೆ ಕರೆ ಮಾಡಿ ಮಾತನಾಡಿರುವ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಭಯಪಡಬೇಡಿ, ನಿಮ್ಮ ಜೊತೆಗಿದ್ದೇವೆ ಎಂಬ ಭರವಸೆ ನೀಡಿದ್ದಾರೆ.

“ರಾಹುಲ್‌ ಅವರು ಮತ್ತು ಉದ್ಧವ್‌ ಅವರು ಇಂದು ಬೆಳಿಗ್ಗೆ ದೂರವಾಣಿ ಸಂಭಾಷಣೆ ನಡೆಸಿದರು. ಪತ್ರಿಕಾಗೋಷ್ಠಿಯಲ್ಲಿ ನೀಡಿದ ಹೇಳಿಕೆಯಿಂದ ಉಂಟಾಗಿರುವ ಉಹಾಪೋಹಗಳಿಗೆ ತೆರೆ ಎಳೆಯಲಾಯಿತು. ಈ ಸರ್ಕಾರಕ್ಕೆ ಕಾಂಗ್ರೆಸ್‌ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ” ಎಂದು ಶಿವಸೇನೆಯ ಮುಖಂಡರೊಬ್ಬರು ಹೇಳಿದ್ದಾರೆ.

ನಾವು ಮಹಾರಾಷ್ಟ್ರದಲ್ಲಿ ಬೆಂಬಲ ನೀಡಿರುವವರು ಅಷ್ಟೆ ಹೊರತು ನಿರ್ಧಾರ ತೆಗೆದುಕೊಳ್ಳುವವರ ಅಲ್ಲ. ನಾವು ರಾಜಸ್ತಾನ, ಪಂಜಾಬ್‌, ಛತ್ತೀಸ್‌ಘಡ ಮತ್ತು ಜಾರ್ಖಂಡ್‌ನಲ್ಲಿ ಮಾತ್ರ ಸ್ವಂತ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಕಾಂಗ್ರೆಸ್ ಹೇಳಿತ್ತು. ಈ ಹೇಳಿಕೆಯ ನಂತರ ಮಹಾರಾಷ್ಟ್ರದ ಮೈತ್ರಿಕೂಟದಲ್ಲಿ ಬಿರುಕು ಮೂಡಿದೆ ಎಂಬ ವದಂತಿಗಳು ಎದ್ದಿದ್ದವು.

ಶಿವಸೇನೆ, ಎನ್‌ಸಿಪಿ ಮತ್ತುಕಾಂಗ್ರೆಸ್‌ ಮೂರು ಪಕ್ಷಗಳು ಸೇರಿ ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಸರ್ಕಾರ ರಚಿಸಿವೆ. ರಾಜ್ಯವು ಎದುರಿಸುತ್ತಿರುವ ತೊಂದರೆಗಳ ನಡುವೆಯೂ ಕರೋನವೈರಸ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ತಮ್ಮ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ಅವರು ಮಂಗಳವಾರ ಉದ್ಧವ್ ಠಾಕ್ರೆ ರಾಹುಲ್ ಅವರಿಗೆ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಅವರು ಹೇಳಿಕೆಯ ಹಿಂದಿನ ತಮ್ಮ ನಿಲುವನ್ನು ವಿವರಿಸಿದರು. ಕೋವಿಡ್ -19 ವಿರುದ್ಧದ ಹೋರಾಟದಲ್ಲಿ ರಾಜ್ಯ ಸರ್ಕಾರಕ್ಕೆ ಹೇಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಅವರು ಸ್ಪಷ್ಟವಾಗಿ ಹೇಳಿದ್ದರು. ಆದರೆ ಕೆಲವರು ಅವರ ಹೇಳಿಕೆಯನ್ನು ತಿರುಚಿದ್ದರು ಎಂದು ಶಿವಸೇನೆಯ ಮುಖಂಡರು ತಿಳಿಸಿದ್ದಾರೆ.

ಎಂವಿಎದಲ್ಲಿ ಕಿರಿಯ ಪಾಲುದಾರರಾದ ಕಾಂಗ್ರೆಸ್‌ಗೆ ನಿರ್ಧಾರ ತೆಗೆದುಕೊಳ್ಳುವಲ್ಲಿ ಸಮಾನ ಪ್ರಾಮುಖ್ಯತೆ ನೀಡಲಾಗಿದೆ ಎಂದು ಉದ್ಧವ್‌ ಠಾಕ್ರೆ ಕೂಡ ರಾಹುಲ್ ಗಾಂಧಿಗೆ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.

ಕಳೆದ ಕೆಲವು ದಿನಗಳಲ್ಲಿ ರಾಜಕೀಯ ಚಟುವಟಿಕೆಗಳಲ್ಲಿ ಭರಾಟೆ ಉಂಟಾದ ಹಿನ್ನೆಲೆಯಲ್ಲಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಬುಧವಾರ ಮಧ್ಯಾಹ್ನ ಮೈತ್ರಿ ಪಾಲುದಾರರ ಸದಸ್ಯರನ್ನು ಭೇಟಿಯಾಗಲಿದ್ದಾರೆ. ಮುಖ್ಯಮಂತ್ರಿಯವರ ಅಧಿಕೃತ ನಿವಾಸ ವರ್ಷಾದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಪ್ರಮುಖ ಮಂತ್ರಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಎಂವಿಎ ಸಚಿವರು ತಿಳಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights