ಲಡಾಖ್ ಘರ್ಷಣೆ: ಭಾರತ-ಚೀನಾ ಗಡಿಯಲ್ಲಿ ರೈಲು ಸಂಚಾರ ರದ್ದು!
ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನ್ಯಗಳ ನಡುವೆ ಘರ್ಷಣೆ ನಡೆಯುತ್ತಿದ್ದು, ಗಡಿ ಭಾಗದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಉಭಯ ರಾಷ್ಟ್ರಗಳ ನುಡುವಿನ ಘರ್ಷಣೆ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯಿದ್ದು, ಚೀನಾ ಗಡಿಭಾಗದಲ್ಲಿ ರೈಲು ಸಂಚಾರವನ್ನು ಭಾರತದ ರೈಲ್ವೇ ಇಲಾಖೆ ರದ್ದುಗೊಳಿಸಿದೆ.
ಪೂರ್ವ ಲಡಾಕ್ನ ಗಾಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಉಭಯ ರಾಷ್ಟ್ರಗಳ ನಡುವಿನ ಘರ್ಷಣೆಯಲ್ಲಿ ಭಾರತದ 20 ಮಂದಿ ಸೈನಿಕರು ಹತ್ಯೆಯಾಗಿದ್ದು, ಭಾರತ ಸೈನಿಕರು ನಡೆಸಿದ ಪ್ರತಿದಾಳಿಯಲ್ಲಿ ಚೀನಾದ 43 ಸೈನಿಕರು ಹತರಾಗಿದ್ದಾರೆ.

ಗಾಲ್ವಾನ್ ಕಣಿವೆಯಲ್ಲಿ ನಡುವಿನ ಘರ್ಷಣೆಯಿಂದಾಗಿ ಎರಡು ದೇಶಗಳ ನಡುವೆ ಪ್ರಕ್ಷುಬ್ದ ಪರಿಸ್ಥಿತಿ ಉಂಟಾಗಿದೆ. ಆದ್ದರಿಂದಲೇ ಭಾರತ ಮತ್ತು ಚೀನಾದ ಗಡಿಯಲ್ಲಿ ರೈಲು ಸಂಚಾರ ರದ್ದುಗೊಳಿಸಲಾಗಿದೆ. ಉಭಯ ರಾಷ್ಟ್ರಗಳ ಗಡಿಯಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿರುವುದರಿಂದಲೇ ರೈಲು ಸಂಚಾರ ರದ್ದು ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಂಜಾಗೃತ ಕ್ರಮವಾಗಿ ಈ ನಿಲುವು ತಾಳಿದೆ. ಯಾರಿಗೂ ತೊಂದರೆಯಾಗಬಾರದೆಂದು ಭಾರತ ಮತ್ತು ಚೀನಾದ ಗಡಿಯಲ್ಲಿ ರೈಲು ಸಂಚಾರ ರದ್ದುಗೊಳಿಸಿ ಆದೇಶಿಸಲಾಗಿದೆ.

