ವಲಸಿಗರಿದ್ದ ಬಸ್ ಟ್ರಕ್ ಗೆ ಡಿಕ್ಕಿ : 11 ಮಂದಿ ಸಾವು : 22 ಪ್ರಯಾಣಿಕರಿಗೆ ಗಾಯ!

ವಲಸೆ ಕಾರ್ಮಿಕರಿದ್ದ ವಾಹನ ರಸ್ತೆಬದಿ ನಿಂತಿದ್ದ ಟ್ರಕ್‍ಗೆ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಸಾವನ್ನಪ್ಪಿದ ಘಟನೆ ನೇಪಾಳದ ಪೂರ್ವ-ಪಶ್ಚಿಮ ಹೆದ್ದಾರಿಯ ಬಂಕೆ ಜಿಲ್ಲೆಯಲ್ಲಿ ನಡೆದಿದೆ.

ಬಂಕೆ ಜಿಲ್ಲೆಯ ತುರಿಯಾ ಅರಣ್ಯ ಪ್ರದೇಶದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 21 ಮಂದಿ ಗಾಯಗೊಂಡಿದ್ದಾರೆ. ನೇಪಾಳಿ ವಲಸೆ ಕಾರ್ಮಿಕರನ್ನು ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಿಂದ ನೇಪಾಳದ ಸಲ್ಯಾನ್ ಜಿಲ್ಲೆಗೆ ಹೋಗುವ ಮಾರ್ಗದಲ್ಲಿ ಕರೆದೊಯ್ಯುತ್ತಿದ್ದ ವಾಹನಕ್ಕೆ ಟ್ರಕ್‍ಗೆ ಡಿಕ್ಕಿ ಹೊಡೆದಿದೆ.

ವಲಸೆ ಕಾರ್ಮಿಕರಿದ್ದ ಬಸ್ ದಕ್ಷಿಣ ನೇಪಾಳದಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದು, 11 ಜನರು ಸಾವನ್ನಪ್ಪಿದ್ದು, 22 ಮಂದಿ ಗಾಯಗೊಂಡಿದ್ದಾರೆ.

ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಂಕೆ ಜಿಲ್ಲೆಯಲ್ಲಿ ಭಾನುವಾರ ಅಪಘಾತ ಸಂಭವಿಸಿದೆ. ಭಾರತದಿಂದ ನೇಪಾಳಗುಂಜ್ ಮೂಲಕ ಸಲ್ಯಾನ್‌ನಲ್ಲಿರುವ ತಮ್ಮ ತವರು ಜಿಲ್ಲೆಗೆ ಮರಳುತ್ತಿದ್ದ ಸುಮಾರು 30 ಕ್ಕೂ ಹೆಚ್ಚು ವಲಸೆ ಕಾರ್ಮಿಕರನ್ನು ಈ ಬಸ್ ಸಾಗಿಸುತ್ತಿತ್ತು ಎಂದು ಜಿಲ್ಲಾ ಪೊಲೀಸ್ ಕಚೇರಿ ಉಲ್ಲೇಖಿಸಿದೆ.

ರಸ್ತೆಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದಿದ್ದು, ಬಸ್ ಚಾಲಕ ಸೇರಿದಂತೆ 11 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 22 ಮಂದಿ ಗಾಯಗೊಂಡಿದ್ದಾರೆ.

ನೇಪಾಳ ಪೊಲೀಸ್, ಸಶಸ್ತ್ರ ಪೊಲೀಸ್ ಪಡೆ, ಸಂಚಾರ ಪೊಲೀಸ್ ಮತ್ತು ಬಂಕೆ ಕಲ್ಯಾಣಿ ಸಮಾಜದ ತಂಡವು ಗಾಯಾಳುಗಳನ್ನು ರಕ್ಷಿಸಿ ನೇಪಾಳಗುಂಜ್ ಮೂಲದ ಭೇರಿ ಆಸ್ಪತ್ರೆಗೆ ಮುಂಜಾನೆ 2: 00 ರ ಸುಮಾರಿಗೆ ಕರೆತಂದಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಭೇರಿ ಆಸ್ಪತ್ರೆಯನ್ನು ವರದಿಯಲ್ಲಿ ಉಲ್ಲೇಖಿಸಿದೆ.

ಕೋವಿಡ್-19 ಪ್ರೇರಿತ ಲಾಕ್‌ಡೌನ್‌ನಿಂದಾಗಿ ನೂರಾರು ನೇಪಾಳಿಗಳು, ಹೆಚ್ಚಾಗಿ ವಲಸೆ ಕಾರ್ಮಿಕರು, ನೇಪಾಳದ ಭಾರತದ ಗಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ.

ಹೆಚ್ಚಾಗಿ ಪಶ್ಚಿಮ ನೇಪಾಳದ ಮೂಲದ ಕಾರ್ಮಿಕರು ಭಾರತದಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗದಲ್ಲಿದ್ದರು. ಮನೆಗೆ ಮರಳಲು ಪ್ರಯತ್ನಿಸುತ್ತಿದ್ದರು. ಕೊರೋನವೈರಸ್ ಹರಡುವುದನ್ನು ತಡೆಯಲು ಭಾರತ ಸರ್ಕಾರ ರಾಷ್ಟ್ರವ್ಯಾಪಿ ಲಾಕ್‌ಡೌನ್ ವಿಧಿಸಿದ್ದರಿಂದ, ಅವರು ಗಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಇವರು ತವರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ನೇಪಾಳದಲ್ಲಿ 1,572 ಕೋವಿಡ್ -19 ಪ್ರಕರಣಗಳು ಮತ್ತು ಎಂಟು ಸಾವುಗಳು ಸಂಭವಿಸಿವೆ. ಕಳೆದ 24 ಗಂಟೆಗಳಲ್ಲಿ ಭಾರತವು ಅತಿ ಹೆಚ್ಚು ಏಕದಿನ ಕೋವಿಡ್-19 ಪ್ರಕರಣಗಳನ್ನು ದಾಖಲಿಸಿದ್ದು, ಕಳೆದ 24 ಗಂಟೆಗಳಲ್ಲಿ 8,380 ಹೊಸ ಸೋಂಕುಗಳು ವರದಿಯಾಗಿವೆ. ಈವರೆಗೆ ದೇಶದ ಸೋಂಕಿತರ ಸಂಖ್ಯೆ 1,82,143 ಕ್ಕೆ ತಲುಪಿದೆ. ಸಾವಿನ ಸಂಖ್ಯೆ 193 ರಷ್ಟು ಏರಿಕೆಯಾಗಿ 5,164 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights