ವಿಮಾನ ನಿಲ್ದಾಣದಲ್ಲಿ ಖಾಕಿ ದರ್ಪ : ಮಂಗಳೂರಿಗೆ ತೆರಳುತ್ತಿದ್ದ ಕಾಂಗ್ರೆಸ್ ನಿಯೋಗ ಪೊಲೀಸರ ವಶ!

ವಿಮಾನ ನಿಲ್ದಾಣದಲ್ಲಿ ಖಾಕಿ ದರ್ಪ ಮೆರೆದಿದ್ದು, ಮಂಗಳೂರಿಗೆ ತೆರಳುತ್ತಿದ್ದ ಕಾಂಗ್ರೆಸ್ ನಿಯೋಗ ಪೊಲೀಸರ ವಶಕ್ಕೆ ಮುಂದಾಗಿದೆ.

ಹೌದು… ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದಲ್ಲಿ ಶಾಂತಿಯುತ ಹೋರಾಟ ಕೂಡ ನಡೆಯದ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಪ್ರತಿಭಟನೆಗೂ ಮುನ್ನ ಪೊಲೀಸ್ ಇಲಾಖೆ 144 ಸೆಕ್ಷನ್ ಜಾರಿ ಮಾಡಿದೆ. ಈ ಮಧ್ಯೆ ಹೋರಾಟ ಬಿಸಿ ತಾರಕಕ್ಕೇರುತ್ತಿದ್ದಂತೆ ಪೊಲೀಸರು ಗುಂಡಿನ ದಾಳಿ ಮಾಡಿ ಮಂಗಳೂರಿನಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

ವಿಚಾರ ತಿಳಿದ ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕೆಲ ನಾಯಕರನ್ನು ಒಳಗೊಂಡ ಕಾಂಗ್ರೆಸ್ ಸಮಿತಿ ಇಂದು ಮಂಗಳೂರಿನತ್ತ ಪ್ರಯಾಣ ಬೆಳಸಿತ್ತು. ಈ ವೇಳೆ ವಿಮಾನ ನಿಲ್ದಾಣದಲ್ಲಿ ಪೊಲೀಸರು ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಡೆದಿದ್ದಾರೆ.

ಮೃತರ ಕುಟುಂಬಸ್ಥರನ್ನ ಕಾಂಗ್ರೆಸ್ ನಿಯೋಗ ಭೇಟಿಯಾಗಲು ತೆರಳುವ ವೇಳೆ ಈ ಘಟನೆ ನಡೆದಿದೆ. ಈ ವೇಳೆ ನಾಯಕರು ವಿಮಾನ ನಿಲ್ದಾಣದಿಂದ ನಾವು ಬೆಂಗಳೂರಿಗೆ ವಾಪಾಸ್ ಆಗುವುದಿಲ್ಲ ಎಂದಿದ್ದಾರೆ. ಪೊಲೀಸರು ಮಾಜಿ ಸ್ಪೀಕರ್ ಅವರನ್ನ ಬಲವಂತವಾಗಿ ಪೊಲೀಸ್ ವಾಹನದಲ್ಲಿ ಕಳುಹಿಸಲು ಪ್ರಯತ್ನಿಸಿದ್ದಾರೆ.

ಕಾಂಗ್ರೆಸ್ ನಿಯೋಗ ಮಂಗಳೂರಿಗೆ ತೆರಳಿದರೆ ಶಾಂತಿ ಸುವ್ಯವಸ್ಥೆಗೆ ದಕ್ಕೆ ಆಗುತ್ತದೆ ಅನ್ನೋ ಭಾವನೆಯಿಂದ ಪೊಲೀಸರು ವಿಮಾನ ನಿಲ್ದಾಣದಲ್ಲಿ ಅವರನ್ನ ತಡೆದಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ವಾಪಾಸ್ಸಾಗಲು ನಿರಾಕರಿಸಿದ ನಿಯೋಗ ವಾಹನಗಳ ಮೂಲಕ ಮಂಗಳೂರಿಗೆ ತೆರಳಲು ಮುಂದಾಗಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights