ಸಣ್ಣ, ಮಧ್ಯಮ ಕೈಗಾರಿಕೆಗಳ ಪುನಶ್ಚೇತನಕ್ಕೆ 3 ಲಕ್ಷ ಕೋಟಿ ಸಾಲ: ನಿರ್ಮಲಾ ಸೀತಾರಾಮನ್

ಕೊರೋನಾ ಲಾಕ್‌ಡೌನ್‌ನಿಂದಾಗಿ ಎದುರಾಗಿರುವ ಆರ್ಥಿಕ ಬಿಕ್ಕಟ್ಟು ನಿವಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ಬಗ್ಗೆ ವಿವರವನ್ನು ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

 

ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಮೋದಿ ಘೋಷಿಸಿದ ಪ್ಯಾಕೇಜ್‌ನಲ್ಲಿ ಯಾವ-ಯಾವ ಕ್ಷೇತ್ರಕ್ಕೆ ಒತ್ತು ಕೊಡಲಾಗಿದೆ. ಪ್ಯಾಕೇಜ್ ಯಾವ ರೀತಿಯಲ್ಲಿ ಹಂಚಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರು ಸ್ವಾವಲಂಬನೆ ಕುರಿತು ಒತ್ತಿ ಹೇಳಿದ್ದರು. ಅವರ ಸಮಗ್ರ ದೃಷ್ಟಿಕೋನದೊಂದಿಗೆ ಮತ್ತು ಸಮಾಜದ ಹಲವಾರು ವರ್ಗಗಳೊಂದಿಗೆ ವ್ಯಾಪಕ ಸಮಾಲೋಚನೆಯ ನಂತರ ಇದನ್ನು ರೂಪಿಸಲಾಯಿತು ಎಂದು ಸೀತಾರಾಮನ್ ಹೇಳಿದರು.

ಆರ್ಥಿಕತೆ, ನಿರ್ಮಾಣ, ವ್ಯವಸ್ಥೆ, ಜನಸಂಖ್ಯೆ ಹಾಗೂ ಬೇಡಿಕೆ ಇವು ಸ್ವಾವಲಂಬಿ ಭಾರತದ ಐದು ಆಧಾರ ಸ್ತಂಭಗಳು ಎಂದು ವಿತ್ತ ಸಚಿವೆ ಹೇಳಿದ್ದಾರೆ. ಹಾಗೆಯೇ ಆತ್ಮ ನಿರ್ಭಾರ್ (ಸ್ವಾವಲಂಬಿ) ಭಾರತ ಅಂದರೆ ಭಾರತವು ಪ್ರತ್ಯೇಕವಾಗಿ ಇರುವ ದೇಶ ಎಂದು ಅರ್ಥವಲ್ಲ ಎಂದು ಹೇಳಿದರು.

ಸಣ್ಣ, ಅತಿಸಣ್ಣ, ಮಧ್ಯಮ ಕೈಗಾರಿಕೆಗಳ ಪುನಶ್ಚೇತನ ಮತ್ತು ಸ್ಥಾಪನೆಗಾಗಿ 3 ಲಕ್ಷ ಕೋಟಿ ರೂಪಾಯಿ ಜಾಮೀನು ರಹಿತ ಸಾಲ ನೀಡಲು ಮೀಸಲಿರಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights