ಸೋಮವಾರದಿಂದ ಎಲ್ಲಾ ರೀತಿಯ ಕೈಗಾರಿಕೆಗಳು ಆರಂಭ: ಜಗದೀಶ್ ಶೆಟ್ಟರ್
ರಾಜ್ಯದಲ್ಲಿರುವ ಕಂಟೈನ್ಮೆಂಟ್ ಜೋನ್ಗಳನ್ನು ಹೊರತು ಪಡಿಸಿ ಉಳಿದ ಎಲ್ಲಾ ವಲಯಗಳಲ್ಲಿ ಮೇ 04 ರಿಂದ ಎಲ್ಲಾ ರೀತಿಯ ಕೈಗಾರಿಕೆಗಳನ್ನು ಆರಂಭಿಸಲು ಮುಖ್ಯಮಂತ್ರಿಗಳು ನಿರ್ಧಾರಿಸಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಿಗೆ ಸ್ವಯಂ ಘೋಷಣಾ ಪತ್ರ ಸಲ್ಲಿಸಿ ಕೈಗಾರಿಕೆ ಆರಂಭಿಸಬಹುದು ಎಂದು ಬೆಳಗಾವಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕೈಗಾರಿಕೆಗಳ ಆರಂಭಕ್ಕೆ ಎಲ್ಲಾ ರೀತಿಯ ಅಗತ್ಯ ನೆರವು ನೀಡಲು ಸರ್ಕಾರ ಸಿದ್ದವಿದೆ, ಸಣ್ಣ ಕೈಗಾರಿಕೆಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಈಗಾಗಲೇ ಪ್ರಸ್ತಾವ ಕೂಡ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.