ಹಾಸನದಲ್ಲಿ ಸಾರಿಗೆ ಬಸ್ ಉರುಳಿ ಬಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ…!

ಹಾಸನದಲ್ಲಿ ಸಾರಿಗೆ ಬಸ್ ಉರುಳಿ ಬಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆ ಗ್ರಾಮದಲ್ಲಿ ಅತೀ ವೇಗವಾಗಿ ಬಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ಇಂದು ಮುಂಜಾನೆ ರಸ್ತೆಗೆ ಉರುಳಿ ಬಿದ್ದಿತ್ತು. ಬಸ್ ರಸ್ತೆಗೆ ಉರುಳಿ ಇನೋವಾ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, 24 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬಂಟ್ವಾಳ ತಾಲೂಕಿನ ಮಾನಿ ಗ್ರಾಮದ ಅಭಿಷೇಕ್(29) ಮೃತ ದುರ್ದೈವಿ.

ಮಂಗಳೂರಿನಿಂದ ಬೆಂಗಳೂರಿಗೆ ಚಲಿಸುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 46 ಮಂದಿ ಪ್ರಯಾಣಿಕರಿದ್ದರು. ಗಾಯಾಳುಗಳು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights