ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ; ಉಕ್ಕುತ್ತಿವೆ ನದಿಗಳು, ಉತ್ತರ ಕರ್ನಾಟಕ ಮತ್ತು ಮಲೆನಾಡಿನಲ್ಲಿ ಪ್ರವಾಹ ಭೀತಿ!

ಜೂನ್‌ ತಿಂಗಳ ಅಂತ್ಯದಿಂದ ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಅದರಲ್ಲೂ ಮಲೆನಾಡು, ಕರಾವಳಿ ಭಾಗದಲ್ಲಿ ಉತ್ತಮ ಮಳೆ ಆಗುತ್ತಿದೆ. ಧಾರಾಕಾರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಳ್ಳ, ಕೊಳ್ಳ, ನದಿಗಳು ಉಕ್ಕಿ ಹರಿಯುತ್ತಿವೆ. ಹಾಗಾಗಿ ನದಿ ಪಾತ್ರದಲ್ಲಿರುವ ಜನರಿಗೆ ಪ್ರವಾಹದ ಭೀತಿ ಎದುರಾಗಿದ್ದು, ಕಳೆದ ವರ್ಷದಂತೆಯೇ ಹಾನಿಯಾಗುವ ಭೀತಿ ಮನೆ ಮಾಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು ಭಾಗದಲ್ಲಿ ಹೆಚ್ಚಿನ ಮಳೆ ಆಗುತ್ತಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ,  ತುಮಕೂರು, ಕೋಲಾರ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಭಾಗದಲ್ಲಿ ಇಂದು ಮೋಡ ಕವಿದ ವಾತಾವರಣ ಇದ್ದು, ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.

ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿವೆ. ಹೀಗಾಗಿ, ನದಿ ಅಂಚಿನ ಗ್ರಾಮಗಳು ಕಂಗಾಲಾಗಿವೆ. ಅಘನಾಶಿನಿ, ಗಂಗಾವಳಿ, ನೇತ್ರಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಸದ್ಯ, ನದಿ ಅಪಾಯದ ಮಟ್ಟ ತಲುಪಿಲ್ಲ. ಆದರೆ, ಮಳೆ ಹೆಚ್ಚಾದರೆ, ಕೆಲ ಗ್ರಾಮಗಳು ಮುಳುಗುವ ಭೀತಿ ಎದುರಾಗಿದೆ.

Heavy rain claims 4 lives in DK, Sringeri | Deccan Herald

ಗುಲ್ಬರ್ಗದಲ್ಲಿಯೂ ಭಾರಿ ಮಳೆಯಾಗುತ್ತಿದೆ. ನಾಗರಾಳ ಜಲಾಶಯದಿಂದ ನೀರು ಹೊರ ಬಿಡಲಾಗಿದೆ. ಇದರ ಪರಿಣಾಮ ನದಿ ದಂಡೆಯಲ್ಲಿದ್ದ  ಚಿಮ್ಮನಚೋಡ ಗ್ರಾಮದ ಸಂಗಮೇಶ್ವರ ದೇವಾಲಯ ಮುಳುಗಿದ್ದು, ದೇವಾಲಯದಲ್ಲಿದ್ದವರನ್ನು ರಕ್ಷಿಸಲಾದಿದೆ.

ಮಹಾರಾಷ್ಟ್ರದಲ್ಲಿಯೂ ಕೆಲ ದಿನಗಳಿಂದ ಭಾರೀ ಮಳೆ ಆಗುತ್ತಿದೆ. ಮುಂದಿನ ಒಂದು ವಾರಗಳ ಕಾಲ ಇದೇ ರೀತಿಯ ಮಳೆ ಮುಂದುವರಿಯಲಿದೆ ಎನ್ನಲಾಗಿದೆ. ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಪುಣೆ, ಮುಂಬೈ ಸೇರಿದಂತೆ ಅನೇಕ ಕಡೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿವೆ. ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಹರಿಯುವ ಕೃಷ್ಙಾ ನದಿಯಲ್ಲಿಯೂ ನೀರಿನ ಪ್ರಮಾಣ ಹೆಚ್ಚುತ್ತಿದ್ದು, ನದಿಗೆ ಬಿಜಾಪುರದಲ್ಲಿ ನಿರ್ಮಿಸಲಾಗಿರುವ ಆಲಮಟ್ಟಿ ಜಲಾಶಯ ಭರ್ತಿಯಾಗುವ ಅಂಚಿನಲ್ಲಿದ್ದು, ಉತ್ತರ ಕರ್ನಾಟಕದ ಅನೇಕ ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ, ನದಿ ಅಂಚಿನ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights