ಕೊರೊನಾ ಸಾಂಕ್ರಾಮಿಕ: 10 ನೇ ಮತ್ತು 12ನೇ ತರಗತಿಯ ಸಿಬಿಎಸ್‌ಇ ಪರೀಕ್ಷೆಗಳು ರದ್ದು

ಜುಲೈ 1, 2020 ರಿಂದ ನಡೆಯಬೇಕಿದ್ದ ಸಿಬಿಎಸ್‌ಇ 10 ನೇ ತರಗತಿ ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಎಂದು ಸಿಬಿಎಸ್‌ಇ ಶಿಕ್ಷಣ ಮಂಡಳಿ ಇಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಕೊರೊನಾ ವೈರಸ್ ಬಿಕ್ಕಟ್ಟಿನಿಂದಾಗಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ದೆಹಲಿ, ಮಹಾರಾಷ್ಟ್ರ ಮತ್ತು ತಮಿಳುನಾಡು ತಿಳಿಸಿದೆ ಎಂದು ಸಿಬಿಎಸ್‌ಇಯನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಕ್ಕೆ ತಿಳಿಸಿದ್ದಾರೆ.

ಜುಲೈ 1 ರಿಂದ ಜುಲೈ 15 ರವರೆಗೆ ನಿಗದಿಯಾಗಿದ್ದ ಪರೀಕ್ಷೆಗಳು ರದ್ದಾಗಿದ್ದು ಪರಿಸ್ಥಿತಿಗಳು ಅನುಕೂಲಕರವಾದಗ 12 ನೇ ತರಗತಿಯ ಪರೀಕ್ಷೆಗಳನ್ನು ನಡೆಸುತ್ತೇವೆ ಎಂದು ಸಿಬಿಎಸ್‌ಇ ಮಂಡಳಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಪರೀಕ್ಷೆಗಳಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಅವಕಾಶ ನೀಡುತ್ತದೆಯೇ ಅಥವಾ ಆಂತರಿಕ ಮೌಲ್ಯಮಾಪನ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು ಘೋಷಿಸುತ್ತದೆಯೇ ಎಂದು ಸಿಬಿಎಸ್‌ಇಯನ್ನು ಸುಪ್ರಿಂ ಕೋರ್ಟ್ ಕೇಳಿದೆ.

ಇದಕ್ಕೆ ಉತ್ತರಿಸಿದ ಸಿಬಿಎಸ್‌ಇ ಪರೀಕ್ಷೆಗಳಿಗೆ ಹಾಜರಾಗುವ ಆಯ್ಕೆಯನ್ನು 12 ನೇ ತರಗತಿ ವಿದ್ಯಾರ್ಥಿಗಳಿಗೆ ನೀಡಲಾಗುವುದು. ಈಶಾನ್ಯ ದೆಹಲಿ ವಿದ್ಯಾರ್ಥಿಗಳಿಗೆ ಮಾತ್ರ ನಡೆಯಬೇಕಿದ್ದ 10 ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಕಳೆದ ಮೂರು ಪರೀಕ್ಷೆಗಳ ಆಧಾರದ ಮೇಲೆ 12 ನೇ ತರಗತಿ ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಮಾಡುವ ಮೌಲ್ಯಮಾಪನ ಯೋಜನೆಯನ್ನು ತರಲಾಗಿದೆ ಎಂದು ಮಂಡಳಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಉಳಿದ ಐಸಿಎಸ್‌ಇ ಮತ್ತು ಐಎಸ್‌ಸಿ ಪರೀಕ್ಷೆಗಳ ಬಗ್ಗೆಯೂ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಸಿಐಎಸ್ಸಿಇ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲು ಒಪ್ಪಿಕೊಂಡಿದೆ ಆದರೆ ನಂತರ ಪರೀಕ್ಷೆಯನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಒದಗಿಸುವುದಿಲ್ಲ. ಫಲಿತಾಂಶಗಳನ್ನು ಘೋಷಿಸಲು CISCE ಆಂತರಿಕ ಮೌಲ್ಯಮಾಪನ ವ್ಯವಸ್ಥೆಯನ್ನು ಸಹ ಅನುಸರಿಸುತ್ತದೆ.

ಆಗಸ್ಟ್‌‌ನಲ್ಲಿ ಮಂಡಳಿಯು ಫಲಿತಾಂಶಗಳನ್ನು ಘೋಷಿಸಿದರೆ ಸೆಪ್ಟೆಂಬರ್‌ನಲ್ಲಿ ಹೊಸ ಶೈಕ್ಷಣಿಕ ವರ್ಷವನ್ನು ಪ್ರಾರಂಭಿಸಬಹುದು ಎಂದು ಹೊಸ ಶೈಕ್ಷಣಿಕ ವರ್ಷದ ಬಗ್ಗೆ ಸ್ಪಷ್ಟೀಕರಣವನ್ನು ಕೋರಿದ ಸುಪ್ರೀಂ ಕೋರ್ಟ್‌ಗೆ‌ ಹೇಳಿದೆ. ವಿದ್ಯಾರ್ಥಿಗಳು ಮೂಲ ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿ ಆಗಸ್ಟ್ ಮಧ್ಯದಲ್ಲಿ ಮಂಡಳಿಯ ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಸಿಬಿಎಸ್‌ಇ ತಿಳಿಸಿದೆ. 2020-21ರ ಶೈಕ್ಷಣಿಕ ವರ್ಷವನ್ನು ಸ್ಥಳಾಂತರಿಸಲಾಗುವುದು ಎಂದು ಮಂಡಳಿ ತಿಳಿಸಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights