ಗುಜರಾತ್ ಮಾಜಿ ಮುಖ್ಯಮಂತ್ರಿಗೆ ಕೊರೊನಾ ಸೋಂಕು ದೃಢ!

 ಗುಜರಾತ್‌ನ ಮಾಜಿ ಮುಖ್ಯಮಂತ್ರಿ ಶಂಕರ್‌ಸಿಂಗ್‌ ವಘೇಲಾ ಅವರಿಗೆ ಕೊರೋನಾ ಸೋಂಕು ತಗುಲಿದೆ ಎಂದು ರಾಜ್ಯ ಅರೋಗ್ಯ ಮೂಲಗಳು ತಳಿಸಿವೆ.

ಶಂಕರ್ ಸಿಂಗ್ ವಘೇಲಾ ಅವರಿಗೆ ತೀವ್ರ ಜ್ವರ ಕಂಡುಬಂದು ಹಿನ್ನಲೆಯಲ್ಲಿ ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿಗಾಗಿ ಎದುರು ನೋಡುತ್ತಿದ್ದರು,

ಅವರ ಕೊರೊನಾ ಪರೀಕ್ಷೆಯ  ವರದಿ ಬಂದಿದ್ದು, ಶಂಕರ್ ಸಿಂಗ್ ವಘೇಲಾ ಅವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

79 ವರ್ಷದ ಶಂಕರ್ ಸಿಂಗ್ ವಘೇಲಾ ಅವರು, 1996ರ ಅಕ್ಟೋಬರ್ ನಿಂದ 1997ರ ಅಕ್ಟೋಬರ್ ವರೆಗೆ ಬಿಜೆಪಿ ಸರ್ಕಾರದಲ್ಲಿ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ನಂತರ, ಬಿಜೆಪಿ ತೊರೆದು ರಾಷ್ಟ್ರೀಯ ಜನತಾ ಪಕ್ಷ ಹಾಗೂ ಕಾಂಗ್ರೆಸ್ ಸೇರಿದ್ದರು. ಈಗ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ)ಯಲ್ಲಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights