ಬಾಲಿವುಡ್‌ ನಟ ಅಮಿತಾಭ್‌ ಮತ್ತು ಅಭಿಷೇಕ್‌ ಬಚ್ಚನ್‌ಗೆ ಕೊರೊನಾ ಪಾಸಿಟಿವ್: ಐಶ್ವರ್ಯಾ ರೈ ಟೆಸ್ಟ್‌?

ಬಾಲಿವುಡ್ ಸ್ಟಾರ್ ನಟ ಅಮಿತಾಭ್ ಬಚ್ಚನ್ ಮತ್ತು ಅವರ ಮಗ ಅಭಿಷೇಕ್​ ಬಚ್ಚನ್​ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಮುಂಬೈನ ನಾನಾವತಿ ಕೊರೊನಾ ಆಸ್ಪತ್ರೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ತಮಗೆ ಕೊರೊನಾ ಪಾಸಿಟಿವ್‌ ಬಂದಿರುವ ವಿಚಾರವನ್ನು ಅಮಿತಾಭ್ ಬಚ್ಚನ್ ಟ್ವೀಟ್ ಮಾಡಿ ಖಚಿತಪಡಿಸಿದ್ಧಾರೆ.

ಕೊರೊನಾ ಸೋಂಕು ದೃಢಪಟ್ಟಿರುವ ಬಗ್ಗೆ ಟ್ವೀಟ್‌ ಮಾಡಿರುವ ಅವರು, ತಮ್ಮ ಸಂಪರ್ಕಕ್ಕೆ ಬಂದಿದ್ದ ಎಲ್ಲರೂ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

“ನನಗೆ ಕೋವಿಡ್ ಪಾಸಿಟಿವ್ ಬಂದಿದೆ. ಆಸ್ಪತ್ರೆಗೆ ದಾಖಲಾಗಿದ್ದೇನೆ. ಕುಟುಂಬದ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರ ಪರೀಕ್ಷೆ ನಡೆಯುತ್ತಿದೆ. ಅದರ ಫಲಿತಾಂಶ ಬರಬೇಕಿದೆ. ಕಳೆದ 10 ದಿನಗಳಿಂದ ನನ್ನ ಸಮೀಪ ಬಂದಿದ್ದ ಯಾರೇ ಆದರೂ ಪರೀಕ್ಷೆ ಮಾಡಿಸಿಕೊಳ್ಳಿ” ಎಂದು ಬಚ್ಚನ್ ಟ್ವೀಟ್ ಮಾಡಿದ್ದಾರೆ.

ಅಭಿಷೇಕ್​​ ಬಚ್ಚನ್​ ಕೂಡ ಟ್ವೀಟ್​ ಮಾಡಿದ್ದು, ಇಂದು ಬೆಳಗ್ಗೆ ನಾನು ನನ್ನ ತಂದೆ ಇಬ್ಬರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ರೋಗ ಲಕ್ಷಣಗಳಿರುವ ಕಾರಣ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದೇವೆ. ನಾವು ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಕುರಿತು ಮಾಹಿತಿ ನೀಡಿದ್ದು, ನಮ್ಮ ಕುಟುಂಬದವರು ಮತ್ತು ಮನೆಯಲ್ಲಿರುವ ಸಿಬ್ಬಂದಿಗಳಿಗೆ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ ಎಂದು ಟ್ವೀಟ್​ನನಲ್ಲಿ ಬರೆದುಕೊಂಡಿದ್ದಾರೆ.

https://twitter.com/juniorbachchan/status/1282018653215395840?ref_src=twsrc%5Etfw%7Ctwcamp%5Etweetembed%7Ctwterm%5E1282018653215395840%7Ctwgr%5E&ref_url=https%3A%2F%2Fkannada.news18.com%2Fnews%2Fcoronavirus-latest-news%2Famitabh-bachchan-tested-covid-positive-and-admitted-to-nanavati-hospital-in-mumbai-snvs-410555.html

ಅಲ್ಲದೆ, ಅಭಿಷೇಕ್‌ ಅವರ ಪತ್ನಿ, ವಿಶ್ವಸುಂದರಿ ವಿಜೇತೆ, ಬಾಲಿವುಡ್‌ ನಟಿ ಐಶ್ವರ್ಯ ರೈ ಹಾಗೂ ಆರಾಧ್ಯ ಬಚ್ಚನ್, ಜಯಾ ಬಚ್ಚನ್‌ ಅವರಿಗೂ ಕೊರೊನಾ ಟೆಸ್ಟ್‌ ಮಾಡಲಾಗಿದ್ದು, ಮೂವರಿಗೂ ಕೊರೊನಾ ನೆಗೆಟಿವ್‌ ಬಂದಿದೆ.

ಅಮಿತಾಬ್ ಮತ್ತು ಅಭಿಷೇಕ್‌ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯದಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ. ಶೀಘ್ರವೇ ಗುಣಮುಖರಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಇದೇ ವೇಳೆ, ನಟಿ ರೇಖಾ ಅವರ ಭದ್ರತಾ ಸಿಬ್ಬಂದಿಯೊಬ್ಬರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ರೇಖಾ ಅವರ ಬಂಗಲೆಯನ್ನು ಸೀಲ್ ಡೌನ್ ಮಾಡಲಾಗಿದೆ ಎಂಬ ಸುದ್ದಿ ಕೇಳಿಬಂದಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights