ಭಾರತದಲ್ಲಿ ದಿನಕ್ಕೆ 20 ಸಾವಿರ ಗಡಿ ಮುಟ್ಟಿದ ಕೊರೊನಾ! 05 ಲಕ್ಷ ಸೋಂಕಿತರು!

ಭಾರತದಲ್ಲಿ ಕೊರೊನಾದ ಅಬ್ಬರ ಹೆಚ್ಚಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ ದಾಖಲೆಯ 18,552 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 5 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ನಿನ್ನೆ ಒಂದೇ ದಿನ ವಿವಿಧ ರಾಜ್ಯಗಳಲ್ಲಿ ಒಟ್ಟಾರೆ 18,552 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 5,08,953ಕ್ಕೆ ಏರಿಕೆಯಾಗಿದೆ.

ಇನ್ನು 24 ಗಂಟೆಗಳಲ್ಲಿ 384 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಭಾರತದಲ್ಲಿ ಒಟ್ಟು ಸಾವಿನ ಸಂಖ್ಯೆ 15685ಕ್ಕೆ ತಲುಪಿದೆ.

ಇನ್ನು 508953 ಮಂದಿ ಸೋಂಕಿತರ ಪೈಕಿ ಈ ವರೆಗೂ 2,95,881 ಮಂದಿ ಗುಣಮುಖರಾಗಿ, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಪ್ರಸ್ತುತ ಇನ್ನು ದೇಶದಲ್ಲಿ 1,97,387 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights