ರಾಜಸ್ಥಾನ: ಸಚಿನ್‌ ಪೈಲಟ್‌ ಮತ್ತು ಬಂಡಾಯ ಶಾಸಕರ ವಿರುದ್ಧ ಮಂಗಳವಾರದ ವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಹೈಕೋರ್ಟ್‌ ಸೂಚನೆ!

ಸಚಿನ್ ಪೈಲಟ್ ಮತ್ತು ಇತರ ಬಂಡಾಯ ಸಂಸದರನ್ನು ಸದ್ಯಕ್ಕೆ ಅನರ್ಹಗೊಳಿಸುವಂತಿಲ್ಲ. ವಿಧಾನಸಭಾ ಸ್ಪೀಕರ್‌ ಸಚಿನ್‌ ಅವರ ವಿರುದ್ಧ ಯಾವುದೇ ಕ್ರಮವನ್ನು ಕೂಡಲು ತೆರೆದುಕೊಳ್ಳಬಾರದು ಎಂದು ರಾಜಸ್ಥಾನ ಹೈಕೋರ್ಟ್ ಹೇಳಿದೆ.

ಸಚಿನ್‌ ಪೈಲಟ್‌ ಮತ್ತು ಅವರ ಬೆಂಬಲಿತ ಶಾಸಕರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವುದಾಗಿ ಕಾಂಗ್ರೆಸ್‌ ನೋಟಿಸ್‌ ನೀಡಿತ್ತು. ಮುಕ್ತವಾಗಿ ಮಾತನಾಡುವುದನ್ನು “ಪಕ್ಷ ವಿರೋಧಿ ಚಟುವಟಿಕೆ” ಎನ್ನಲು ಸಾಧ್ಯವಿಲ್ಲ ಎಂದು ಬಂಡಾಯ ಶಾಸಕರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಇಂದು ಪ್ರಕರಣದ ವಿಚಾರಣೆ ನಡೆಸಿರುವ ಹೈಕೋರ್ಟ್‌ ಮಂಗಳವಾರಕ್ಕೆ ವಿಚಾರಣೆ ಮುಂದೂಡಿದ್ದು, ಅಲ್ಲಿಯವರೆಗೂ ಬಂಡಾಯ ಶಾಸಕರ ವಿರುದ್ಧ ಸ್ಪೀಕರ್‌ ಯಾವುದೇ ಕ್ರಮವನ್ನು ಕೈಗೊಳ್ಳಬಾರದು ಎಂದು ಹೈಕೋರ್ಟ್‌ ಆದೇಶಿಸಿದೆ.

ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಉರುಳಿಸುವ ಪಿತೂರಿಯಲ್ಲಿ ಭಾಗಿಯಾಗಿದ್ದಕ್ಕಾಗಿ ಕಾಂಗ್ರೆಸ್ ತನ್ನ ಇಬ್ಬರು ಶಾಸಕರನ್ನು ತನ್ನ ಪ್ರಾಥಮಿಕ ಸದಸ್ಯತ್ವದಿಂದ ಶುಕ್ರವಾರ ತೆಗೆದುಹಾಕಿರುವುದಾಗಿ ಹೇಳಿತ್ತು. ರಾಜಸ್ಥಾನದಲ್ಲಿ ಶಾಸಕರನ್ನು ಕುದುರೆ ವ್ಯಾಪಾರ ಮಾಡಲಾಗಿದೆ ಎಂಬ ಆರೋಪದ ಮೇಲೆ ಬಿಜೆಪಿ ಮುಖಂಡ ಮತ್ತು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿರುದ್ಧ ಪಕ್ಷವು ಎಫ್ಐಆರ್ ಕಾಂಗ್ರೆಸ್‌ ಎಫ್ಐಆರ್‌ ದಾಖಲಿಸುವಂತೆ ದೂರು ನೀಡಿತ್ತು.

ಎಫ್‌ಐಆರ್‌ನಲ್ಲಿ ಆರೋಪಿಸಲಾಗಿರುವ ಬಿಜೆಪಿ ನಾಯಕ ಸಂಜಯ್ ಜೈನ್ ಎಂಬ ಉದ್ಯಮಿಯನ್ನು ಬಂಧಿಸಲಾಗಿದೆ. ಆತ ಕುದುರೆ ವ್ಯಾಪಾರದಲ್ಲಿ ಭಾಗಿಯಾಗಿದ್ದ ಎಂಬ ಕಾಂಗ್ರೆಸ್ ಆರೋಪವನ್ನು ಬಿಜೆಪಿ ನಿರಾಕರಿಸಿದೆ.

ಬಿಜೆಪಿಯೊಂದಿಗೆ ಸೇರಿ ಸರ್ಕಾರ ಉರುಳಿಸಲು ಸಂಚು ಮಾಡಿದ್ದಾರೆ ಎಂಬ ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಭನ್ವರ್ ಲಾಲ್ ಶರ್ಮಾ ಮತ್ತು ಮತ್ತೊಬ್ಬ ಬಂಡಾಯ ಶಾಸಕ ವಿಶ್ವೇಂದ್ರ ಸಿಂಗ್ ಅವರನ್ನು ಶಾಸಕ ಸ್ಥಾನದಿಂದ ಕಾಂಗ್ರೆಸ್ ಅಮಾನತುಗೊಳಿಸಿದೆ.

ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಮಾತನಾಡಿ, ಎರಡು ಆಡಿಯೋ ರೆಕಾರ್ಡಿಂಗ್‌ಗಳು ಹೊರಬಂದಿದ್ದು, ಇದರಲ್ಲಿ ಭನ್ವರ್ ಲಾಲ್ ಶರ್ಮಾ ಬಿಜೆಪಿ ನಾಯಕರೊಂದಿಗೆ ಚರ್ಚಿಸಿದ್ದಾರೆ. ಆಡಿಯೋ ಧ್ವನಿಯೊಂದರಲ್ಲಿ ರಾಜಸ್ಥಾನದ ಹಿರಿಯ ಬಿಜೆಪಿ ಮುಖಂಡ ಮತ್ತು ಕೇಂದ್ರ ಜಲ ಸಂಪನ್ಮೂಲ ಸಚಿವ ಶೇಖಾವತ್ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

“ನಾನು ಯಾವುದೇ ತನಿಖೆಯನ್ನು ಎದುರಿಸಲು ಸಿದ್ಧನಿದ್ದೇನೆ. ಆ ಆಡಿಯೊ ಧ್ವನಿ ನನ್ನದಲ್ಲ. ನನ್ನನ್ನು ಪ್ರಶ್ನಿಸಲು ಕರೆದರೆ ನಾನು ಖಂಡಿತವಾಗಿಯೂ ಹೋಗುತ್ತೇನೆ” ಎಂದು ಶೇಖಾವತ್ ಹೇಳಿದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights