ರಾಜ್ಯದಲ್ಲಿ ಕೊರೊನಾ ವೈರಸ್‌ನಿಂದ ಒಂದೇ ದಿನ 115 ಸಾವು; ಹೆಚ್ಚಿದ ಸೋಂಕಿತ ಪ್ರಕರಣಗಳು!

ರಾಜ್ಯದಲ್ಲಿ ಕೊರೊನಾ ಸೋಂಕಿನ ಹಾವಳಿ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ 115 ಮಂದಿ ವೈರಸ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,147ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 75 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 115 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2,208 ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 3,693 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 55,115ಕ್ಕೇರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 1,028 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 33,205 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

Spread the love

Leave a Reply

Your email address will not be published. Required fields are marked *