ಎಂಟು ಮಂದಿ ಪೊಲೀಸರನ್ನು ಬಲಿ ಪಡೆದ ರೌಡಿ ವಿಕಾಸ್‌ ದುಬೆ ಬಂಧನ!

ಉತ್ತರ ಪ್ರದೇಶದ ಕಾನ್ಲುರದಲ್ಲಿಎಂಟು ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ಕುಖ್ಯಾತ ರೌಡಿ ವಿಕಾಸ್ ದುಬೆಯನ್ನು ಉಜ್ಜಯಿನಿಯಲ್ಲಿ ಬಂಧಿಸಲಾಗಿದೆ ಎಂದು ಯುಪಿ ಸರ್ಕಾರಿ ಮೂಲಗಳು ಮಾಹಿತಿ ನೀಡಿವೆ.

ಮಧ್ಯಪ್ರದೇಶ ರಾಜ್ಯದ ಉಜ್ಜಯನಿಯಲ್ಲಿ ವಿಕಾಸ್‌ ದುಬೆಯನ್ನು ಪೊಲೀಸರು ಬಂಧಿಸಿದ್ದಾರೆ. ಆಲ್ಲದೆ, ಇಂದು ಬೆಳಿಗ್ಗೆ ಪೊಲೀರು ನಡೆಸಿದ ಎರಡು ಪ್ರತ್ಯೇಕ  ಕಾರ್ಯಾಚರಣೆಯಲ್ಲಿ ಇಬ್ಬರನ್ನು ಎನ್‌ಕೌಂಟರ್‌ ಮಾಡಲಾಗಿದೆ ಎಂದು ತಿಳಿದುಬಂದಿದೆ.

ರೌಡಿ ಶೀಟರ್ ವಿಕಾಸ್‌ ದುಬೆಯ ಮೇಲೆ ಉತ್ತರಪ್ರದೇಶದಲ್ಲಿ 60 ಅಪರಾಧ ಕೇಸುಗಳಿದ್ದವು. ಆತ ಅಡಗಿರುವ ಜಾಗ ತಿಳಿದ ಪೊಲೀಸರು ಕಳೆದ ಶುಕ್ರವಾರ ದಿಕ್ರು ಗ್ರಾಮದಲ್ಲಿ ತೆರಳಿದ್ದ ಸಂದರ್ಭದಲ್ಲಿ ಗುಂಡಿನ ದಾಳಿ ನಡೆಸಿದ ವಿಕಾಸ್‌ನ ತಂಡ 08 ಜನ ಪೊಲೀಸರನ್ನು ಹತ್ಯೆ ಮಾಡಿತ್ತು. ರೌಡಿ ಶೀಟರ್‌ಗಳ ಗುಂಡಿನ ದಾಳಿಯಲ್ಲಿ ಡಿವೈಎಸ್ಪಿ ದೇವೇಂದ್ರ ಮಿಶ್ರಾ, ಮೂವರು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳು ಹಾಗೂ 4 ಪೇದೆಗಳು ಸಾವನ್ನಪ್ಪಿದ್ದರು.

ಕ್ರಿಮಿನಲ್ ಗಳು ಪೊಲೀಸರ ಬಳಿಯಿದ್ದ ಎಕೆ-47 ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದಿದ್ದರು. ಪೊಲೀಸರು ಈ ಹಿಂದೆ ಹೊಂದಿದ್ದ ಶಸ್ತ್ರಾಸ್ತ್ರಗಳು ದುಬೆಗೆ ದೊರೆತಿದ್ದು, ಅವುಗಳನ್ನೇ ಪೊಲೀಸರ ಮೇಲೆ ದಾಳಿ ನಾಡಲು ದುಬೆ ಸಹಚರರು ಬಳಸಿದ್ದರು. ಇದಕ್ಕೆ ಪ್ರತಿಯಾಗಿ ನಿನ್ನೆ (ಬುಧವಾರ) ಪ್ರತ್ಯೇಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಪ್ರೇಮ್ ಪ್ರಕಾಶ್ ಪಾಂಡೆ ಹಾಗೂ ಅತುಲ್ ದುಬೆ ಎಂಬ ಇಬ್ಬರು ಕ್ರಿಮಿನಲ್ ಗಳನ್ನು ಹೊಡೆದುರುಳಿಸಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights