ಕೊರೊನಾಗೆ ಲಾಕ್‌ಡೌನ್‌ ಪರಿಹಾರವಲ್ಲ; ಆದರೆ ಬೇರೆ ದಾರಿಯಿಲ್ಲ: ಯಡಿಯೂರಪ್ಪ

ಕೊರೊನಾ ಸೋಂಕಿಗೆ ಲಾಕ್‌ಡೌನ್ ಪರಿಹಾರವಲ್ಲ, ಅದು ಕೇವಲ ತಾತ್ಕಾಲಿಕ, ಲಾಕ್‌ಡೌನ್ ಬದಲು ಚಿಕಿತ್ಸೆಗೆ ಆದ್ಯತೆ ನೀಡಲಾಗುವುದು, ಹಿಗಾಗಿ ಮುಂದಿನ ದಿನಗಳಲ್ಲಿ ಲಾಕ್ ಡೌನ್ ಮುಂದುವರೆಸುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನರು ಬೆಂಗಳೂರಿನ ಕೋವಿಡ್ ಪರಿಸ್ಥಿತಿ ಹಾಗೂ ನಿರ್ವಹಣೆ ಕುರಿತು ಎಂಟು ವಲಯಗಳ ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಈ ಸಂದರ್ಭದಲ್ಲಿ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ದಾಖಲಾಗಲು ಆಗುತ್ತಿರುವ ತೊಡಕು ನಿವಾರಿಸುವ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ ನಡೆಸಿ, ಕೋವಿಡ್ ಹಾಗೂ ನಾನ್ ಕೋವಿಡ್ ರೋಗಿಗಳಿಗೆ ಚಿಕಿತ್ಸಾ ಸೌಲಭ್ಯ ದೊರಕುವುದನ್ನು ಖಾತರಿಪಡಿಸುವಂತೆ ಸೂಚಿಸಿದರು. ರೋಗ ಲಕ್ಷಣ ಇಲ್ಲದ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸದೆ, ಕೋವಿಡ್ ಕೇರ್ ಸೆಂಟರ್‌ಗಳಿಗೆ ಅಥವಾ ಹೋಮ್ ಕ್ವಾರಂಟೈನ್ ಮೂಲಕ ಸೋಂಕಿತರಿಗೆ ಚಿಕಿತ್ಸೆ ಒದಗಿಸುವಂತೆ BSY ಸೂಚಿಸಿದರು.

ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ; ಲಾಕ್ ಡೌನ್ ಮುಂದುವರೆಸುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಅವರು ಈ ಸಭೆಯಲ್ಲಿ ಅಭಿಪ್ರಾಯ ಪಟ್ಟಿದ್ದಾರೆ.  ಕರೋನಾ ವೈರಸ್ ಹಾವಳಿ ಜೊತೆಗೆ ಆರ್ಥಿಕ ಪರಿಸ್ಥಿತಿಯನ್ನು ಸರಿದಾರಿಗೆ ತರಬೇಕಿದೆ ಹಾಗಾಗಿ  ಲಾಕ್ ಡೌನ್ ವಿಸ್ತರಣೆ ಇಲ್ಲ ಎಂದು ಅವರು ಹೇಳಿದರು..

ರೋಗ ಲಕ್ಷಣ ಇಲ್ಲದ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸದೆ, ಕೋವಿಡ್ ಕೇರ್ ಸೆಂಟರ್ ಗಳಿಗೆ ಅಥವಾ ಮನೆ ಕ್ವಾರಂಟಿಗೆ ಒಳಪಡಿಸಬೇಖು ಎಂದು ಸೂಚನೆ ನೀಡಿದರು. ಆಸ್ಪತ್ರೆ ಯಲ್ಲಿ ಮೃತರಾದವರಿಗೆ ರ್ಯಾಪಿಡ್ ಆಂಟಿಜೆನ್ ಪರೀಕ್ಷೆ ನಡೆಸಿ ಶವವನ್ನು ಕೂಡಲೇ ಹಸ್ತಾಂತರಿಸಲು ಅಥವಾ ನಿಯಮಾನುಸಾರ ಅಂತ್ಯಕ್ರಿಯೆ ನಡೆಸಲು ಕ್ರಮ ವಹಿಸಬೇಕು. ಮನೆಯಲ್ಲಿ ಮೃತರಾದವರಿಗೂ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ನಡೆಸಿ ಮೃತದೇಹವನ್ನು ತುರ್ತಾಗಿ ಅಂತ್ಯಕ್ರಿಯೆ ನಡೆಸಲು‌ ಕ್ರಮ ವಹಿಸಬೇಕು ಎಂದೂ ಬಿಎಸ್ವೈ ಹೇಳಿದರು.

ಪ್ರತಿ ವಾರ್ಡುಗಳಲ್ಲಿ ಕಲ್ಯಾಣ ಮಂಟಪಗಳನ್ನು ಹಾಗು ವಸತಿ ಗೃಹಳನ್ನು ಗುರುತಿಸಲಾಗಿದ್ದು, ಪ್ರತ್ಯೇಕವಾಗಿ ವಾಸಿಸಲು ಕೊಠಡಿಗಳು ಇಲ್ಲದವರಿಗೆ ಕ್ವಾರಂಟೈನ್ ಮಾಡಲು ಈ ಕಲ್ಯಾಣ ಮಂಟಪಗಳನ್ನು ಬಳಸುವಂತೆ ಸೂಚಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ. ಒಟ್ಟಿನಲ್ಲಿ ಲಾಕ್‌ಡೌನ್ ಸೋಂಕು ತಡೆಗೆ ಪರಿಹಾರವಲ್ಲ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ. ಇನ್ನೂ ಸಚಿವರಾದ ಆರ್. ಅಶೋಕ್ ಮತ್ತು ಭೈರತಿ ಬಸವರಾಜ್ ಕೂಡ ಲಾಕ್‌ಡೌನ್ ಮುಂದುವರಿಸೋ ಅವಶ್ಯಕತೆ ಇಲ್ಲ ಅಂದಿದ್ದಾರೆ.


ಇದನ್ನೂ ಓದಿಹೃದಯಾಘಾದಿಂದ ಸಾವಿಗೀಡಾದ ಯುವಕನಿಗೆ ಕೊರೊನಾ; ಸಂಸ್ಕಾರದಲ್ಲಿ ಭಾಗಿಯಾಗಿದ್ದಕ್ಕೆ ಹಳ್ಳಿಯನ್ನೇ ತೊರೆದು ಜಮೀನಿನಲ್ಲಿ ಬೀಡುಬಿಟ್ಟ ಜನ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights