ಕೊರೊನಾ ಪರಿಸ್ಥಿತಿ ನಿರ್ವಹಣೆಯಲ್ಲಿ ವೈಫಲ್ಯ : ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್ ಎತ್ತಂಗಡಿ

ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿರುವ ನಗರದಲ್ಲಿ ಪರಿಸ್ಥಿತಿ ನಿರ್ವಹಣೆಯಲ್ಲಿ ವೈಫಲ್ಯ ಉಂಟಾಗಿದೆ ಎಂದು ಬಿಬಿಎಂ ಕಮಿಷನರ್ ಅನಿಲ್ ಕುಮಾರ್ ಅವರನ್ನು ಎತ್ತಂಗಡಿ ಮಾಡಲಾಗಿದೆ.

ಹೈಕೋರ್ಟ್‌ನಿಂದ ಬಿಬಿಎಂಪಿ ಕಾರ್ಯ ವೈಖರಿ ಬಗ್ಗೆ ಅಪಸ್ವರ ಕೇಳಿಬಂದಾಗಿನಿಂದಲೂ ಕೊರೊನಾ ಪರಿಸ್ಥಿತಿ ನಿಯಂತ್ರಿಸುವಲ್ಲಿ ಅನಿಲ್​ ಕುಮಾರ್ ಅವರು ವೈಫಲ್ಯರಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಸ್ಥಾನಕ್ಕೆ ಈಗ ಎನ್. ಮಂಜುನಾಥ್ ಪ್ರಸಾದ್ ಅವರನ್ನು ನೂತನ ಕಮಿಷನರ್​ ಆಗಿ ನೇಮಕ ಮಾಡಲಾಗಿದೆ. ಇನ್ನು, ಅನಿಲ್ ಕುಮಾರ್ ಸಾರ್ವಜನಿಕ ಉದ್ದಿಮೆ ಅಪರ ಮುಖ್ಯ ಕಾರ್ಯದರ್ಶಿ ಆಗಿ ವರ್ಗಾವಣೆ ಮಾಡಲಾಗಿದೆ.

ನಿನ್ನೆ ಒಂದೇ ದಿನ ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2,208 ಪ್ರಕರಣಗಳು ವರದಿಯಾಗಿದ್ದು, 75 ಸೋಂಕಿತರು ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ ಕೊರೊನಾ ಸೋಂಕಿನ ಹಾವಳಿ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ 115 ಮಂದಿ ವೈರಸ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,147ಕ್ಕೆ ಏರಿಕೆಯಾಗಿದೆ. ಇಂದಿನ ವರದಿ ನಿರೀಕ್ಷೆಯಲ್ಲಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಅಧಿಕಗೊಳ್ಳುತ್ತಿರುವುದು ನಗರದ ಜನರ ನಿದ್ದೆಗೆಡಿಸಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights