ಕೊರೊನಾ ವಾರಿಯರ್ಸ್‌ಗೆ ಸಂಕಷ್ಟ: ಪ್ರತಿಭಟನೆಗೆ ಮುಂದಾದ ಆಶಾ ಕಾರ್ಯಕರ್ತೆಯರು!

ಕೊರೊನಾ ವಾರಿಯರ್ಸ್​ ಆಗಿ ರಾಜ್ಯದ ಮೂಲೆ ಮೂಲೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಈಗ ಸರಕಾರದ ವಿರುದ್ಧ ಫ್ರತಿಭಟನೆಗಿಳಿದಿದ್ಧರೆ. ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜುಲೈ 10 ರಿಂದ ಅನಿರ್ದಿಷ್ಟ ಅವಧಿಯ ಮುಷ್ಕರಕ್ಕೆ ಅಶಾ ಕಾರ್ಯಕರ್ತೆಯರು ಮುಂದಾಗಿದ್ದಾರೆ. ಇದು ಕೊರೊನಾ ಮಹಾಮಾರಿ ಆತಂಕದ ನಡುವೆ ರಾಜ್ಯ ಸರಕಾರಕ್ಕೆ ಮತ್ತೊಂದು ತಲೆನೋವಾಗಿದೆ..

ಕೆಲ ತಿಂಗಳ ಹಿಂದೆ ಗುತ್ತಿಗೆ ವೈದ್ಯರು ಸರಕಾರದ ವಿರುದ್ಧ ತಿರುಗಿಬಿದ್ದಿದ್ದರು. ಹಾಗೂ ಹೀಗೂ ಮಾಡಿ ಗುತ್ತಿಗೆ ವೈದ್ಯರ ಬಂಡಾಯವನ್ನು ಸರಕಾರ ಸರಿದೂಗಿಸಿತ್ತು. ಇದರ ಬೆನ್ನಲ್ಲೇ ಈಗ ಅಶಾ ಕಾರ್ಯಕರ್ತೆಯರು ಸರಕಾರಕ್ಕೆ ಸಂಕಟ ತರುವ ಲಕ್ಷಣ ಕಾಣುತ್ತಿದೆ. ರಾಜ್ಯದಾದ್ಯಂತ ಜುಲೈ 10ರಿಂದ ಅಶಾ ಕಾರ್ಯಕರ್ತೆಯರ ಸೇವೆ ಸ್ಥಗಿತವಾಗಲಿದೆ. ಸರ್ಕಾರದ ಧೋರಣೆ ಖಂಡಿಸಿ ರಾಜ್ಯಾದ್ಯಂತ ಅಶಾ ಕಾರ್ಯಕರ್ತೆಯರು ಮುಷ್ಕರಕ್ಕೆ ಮುಂದಾಗಿದ್ದಾರೆ.


ಕೊರೊನಾ ಟೈಮ್ ನಲ್ಲಿ ಆಶಾ ಕಾರ್ಯಕರ್ತೆಯರನ್ನ ರಾಜ್ಯ ಸರ್ಕಾರ ಕಡೆಗಣಿಸುತ್ತಿದೆ ಎಂದು ಆರೋಪಿಸಲಾಗಿದೆ, ಮಾಸಿಕ ಗೌರವ ಧನ 12 ಸಾವಿರಕ್ಕೆ ಹೆಚ್ಚಳ ಸೇರಿದಂತೆ ಅಗತ್ಯ ಸೌಲಭ್ಯಕ್ಕೆ ಅಗ್ರಹಿಸಿ ಧರಣಿಗೆ ಮುಂದಾಗಿದ್ದಾರೆ. ಆಶಾ ಕಾರ್ಯಕರ್ತೆಯರು ಜನವರಿಯಿಂದ ಸರ್ಕಾರ ಕ್ಕೆ 10 ಭಾರಿ ಮನವಿ ಪತ್ರ ನೀಡಿದ್ರು, ಆ ಬಗ್ಗೆ ಸರಕಾರ ಕ್ಯಾರೆ ಎನ್ನುತ್ತಿಲ್ಲ. ಹೀಗಾಗಿ ಜುಲೈ 10 ರಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕೆ ರಾಜ್ಯ ಅಶಾ ಕಾರ್ಯಕರ್ತೆಯರು ಮುಂದಾಗಿದ್ದಾರೆ.

ಕರ್ನಾಟಕದಲ್ಲಿ ಸುಮಾರು 42 ಸಾವಿರ ಆಶಾ ಕಾರ್ಯಕರ್ತೆಯರು ಕೆಲಸ ಮಾಡುತ್ತಿದ್ದಾರೆ. ಕೊರೊನಾ ತಡೆಗಟ್ಟುವಲ್ಲಿ ಆಶಾ ಕಾರ್ಯಕರ್ತೆಯರ ಪರಿಶ್ರಮ ಅಪಾರ. ಮನೆ ಮನೆಗೆ ತೆರಳಿ ಸಮೀಕ್ಷೆ, ಸೋಂಕು ಪತ್ತೆ ಹಚ್ಚವಲ್ಲಿ ಇವರ ಪಾತ್ರ ಅತಿ ಮುಖ್ಯವಾಗಿದೆ. ಈಗ ಈ ಆರೋಗ್ಯ ಸಿಬ್ಬಂಧಿಗಳು ಸರಕಾರದ ವಿರುದ್ಧ ತಿರುಗಿಬಿದ್ದಿರೋದು ಆಡಳಿತ ನಡೆಸುವವರಿಗೆ ತಲೆ ನೋವು ಹೆಚ್ಚಿಸಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights