ಕ್ರಿಮಿನಲ್ ವಿಕಾಸ್‌ ದುಬೆಗೆ ಜಾಮೀನು ಸಿಕ್ಕಿದ್ದು ನ್ಯಾಯಾಂಗ ವ್ಯವಸ್ಥೆಯ ವೈಫಲ್ಯ: ಸುಪ್ರಿಂ ಕೋರ್ಟ್‌

ಉತ್ತರ ಪ್ರದೇಶದ ಮೋಸ್ಟ್‌ ವಾಂಟೆಡ್‌ ಕ್ರಿಮಿನಲ್‌ ಆಗಿದ್ದ ಹಾಗೂ ಇತ್ತೀಚೆಗೆ ಕಾನ್ಲುರದಲ್ಲಿ ಪೊಲೀಸ್‌ ಎನ್‌ಕೌಂಟರ್‌ಗೆ ಬಲಿಯಾದ 60 ಪ್ರಕರಣಗಳ ಆರೋಪಿಯಾಗಿದ್ದ ವಿಕಾಸ್‌ ದುಬೆಗೆ ಜಾಮೀನು ನೀಡಿದ್ದು ನಾಯಾಂಗ ವ್ಯವಸ್ಥೆಯ ವೈಫಲ್ಯ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ.

ವಿಕಾಸ್‌ ದುಬೆ ಎನ್‌ಕೌಂಟರ್ ಪ್ರಕರಣ ಕುರಿತು ಸುಪ್ರೀಂ ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿದೆ.

ಹಲವು ಪ್ರಕರಣಗಳು ದಾಖಲಾಗಿದ್ದರೂ ದುಬೆ ಜಾಮೀನು ಪಡೆದಿರುವುದು ನ್ಯಾಯಾಂಗ ವ್ಯವಸ್ಥೆಯ ಪೈಫಲ್ಯ. ಹಲವು ಪ್ರಕರಣಗಳು ದಾಖಲಾಗಿದ್ದರೂ ವಿಕಾಸ್ ದುಬೆಗೆ ಜಾಮೀನು ನೀಡಿರುವುದು ನೋಡಿ ನಮಗೆ ಅಚ್ಚರಿಯಾಗಿದೆ ಎಂದಿದ್ದಾರೆ ಎಂದು ನ್ಯಾಯಪೀಠ ಹೇಳಿದೆ.

ದುಬೆ ಎನ್ ಕೌಂಟರ್ ಪ್ರಕರಣದ ತನಿಖಾ ತಂಡದಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರೊಬ್ಬರನ್ನೂ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರನ್ನು ಸದಸ್ಯರನ್ನಾಗಿಸುವ ಬಗ್ಗೆ ಪರಿಗಣಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಇನ್ನು ಪಾತಕಿ ವಿಕಾಸ್ ದುಬೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯಗಳು ನೀಡಿದ ಆದೇಶಗಳ ಬಗ್ಗೆ ವರದಿ ನೀಡುವಂತೆಯೂ ಸುಪ್ರೀಂ ಕೋರ್ಟ್ ಸೂಚಿಸಿದೆ.

60ಕ್ಕು ಹೆಚ್ಚು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದ ಪಾತಕಿ ವಿಕಾಸ್ ದುಬೆ ಮತ್ತು ಆತನ ಸಹಚರರು ಎಂಟು ಪೊಲೀಸರನ್ನು ಹತ್ಯೆ ಮಾಡಿ ಆರು ಮಂದಿಯನ್ನು ಗಾಯಗೊಳಿಸಿದ್ದರು. ನಂತರ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಪಾತಕಿಯನ್ನು ಬಂಧಿಸಿದ್ದ ಪೊಲೀಸರು, ಬಳಿಕ ಎನ್ ಕೌಂಟರ್ ಮಾಡಿದ್ದರು.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights