ದೇಶದಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ : 26,506 ಹೊಸ ಕೇಸ್ : 475 ಸಾವು..!

ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಒಂದೇ ದಿನದಲ್ಲಿ 26,506 ಹೊಸ ಕೇಸ್ ದಾಖಲಾಗಿದ್ದು, 475 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಪರಿಗಣಿಸಿದರೆ ಮುಂದಿನ ದಿನಗಳನ್ನು ಕಲ್ಪಿಸಿಕೊಳ್ಳುವುದು ಸರ್ಕಾರಕ್ಕೆ ಕಷ್ಟವಾಗಿದೆ. ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು,  ಕೊರೊನಾ ನಿಯಂತ್ರಣಕ್ಕೆ ಬರುವ ಲಕ್ಷಣಗಳೇ ಕಾಣ ಸಿಗುತ್ತಿಲ್ಲ. ದೇಶದಾದ್ಯಂತ 26,506 ಹೊಸ ಪ್ರಕರಣಗಳು ದಾಖಲಾಗಿದ್ದು, 475 ಸಾವು ಸಂಭವಿಸಿವೆ.

ಆ ಮೂಲಕ ಭಾರತದಲ್ಲಿ ಕೊರೊನವೈರಸ್ ಪ್ರಕರಣಗಳು 7.9 ಲಕ್ಷ ದಾಟಿದೆ. ಸಾವಿನ ಸಂಖ್ಯೆ 21,000 ಮೀರಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ ಸಕ್ರಿಯ ಪ್ರಕರಣಗಳು 2,76,685 , ಇವರಲ್ಲಿ 4,95,513 ಸೋಂಕಿತರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಈ ಪೈಕಿ 21,604 ಸಾವುಗಳು ಸಂಭವಿಸಿವೆ. ಒಟ್ಟು  7,93,802 ರಷ್ಟಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights