ನಾಳೆ ಮೊಬೈಲ್ ನಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಸಚಿವ ಸುರೇಶ್ ಕುಮಾರ್

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ನಾಳೆ ಮೊಬೈಲ್ ನಲ್ಲೇ ಪಿಯುಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ನಾಳೆ ಬೆಳಿಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ  ಫಲಿತಾಂಶ ಪ್ರಕಟಗೊಳ್ಳಲಿದ್ದು, ಇದೇ ಮೊದಲ ಬಾರಿಗೆ ವೆಬ್ ಸೈಟ್ ಬದಲಾಗಿ ನೇರವಾಗಿ ಮೊಬೈಲ್ ಫೋನ್ ನಲ್ಲಿ ಫಲಿತಾಂಶ ಪ್ರಕಟಕೊಳ್ಳಲಿದೆ. ಮಧ್ಯ್ಹಾನ 12 ಗಂಟೆಯಲ್ಲಿ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಹೀಗಾಗಿ ಯಾವ ವಿದ್ಯಾರ್ಥಿಯೂ ಕಾಲೇಜ್ ಬಳಿ ಹೋಗುವಂತಿಲ್ಲ.

ಈ ಹಿಂದೆ ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ ಮೂಲಕ ಅಥವಾ ಕಾಲೇಜ್ ಗಳಿಗೆ ಹೋಗಿ ತಿಳಿದುಕೊಳ್ಳಬಹುದಾಗಿತ್ತು. ಆದರೆ ವಿದ್ಯಾರ್ಥಿಗಳು ಒಂದೆಡೆ ಸೇರಿ ಕೊರೊನಾ ಸೋಂಕು ಹರಡುವ ಭೀತಿಯಿಂದ ನಾಳೆ ಫಲಿತಾಂಶವನ್ನು ನೇರವಾಗಿ ಮೊಬೈಲ್ ಗೆ ರವಾನಿಸಲು ತೀರ್ಮಾನಿಸಿದೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಮೊಬೈಲ್ ನಲ್ಲೇ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ವಿಷಯದ ಪರೀಕ್ಷೆ ಪೂರ್ಣಗೊಂಡ ಬಳಿಕ ಎಲ್ಲ ವಿಷಯಗಳ ಮಾಲ್ಯಮಾಪನ ಕಾರ್ಯ ಸುಗಮವಾಗಿ ನಡೆದಿದೆ.

ಇದೀಗ ಫಲಿತಾಂಶ ಪ್ರಕಟಣೆಗೆ ದಿನಾಂಕ  ನಿಗದಿಯಾಗಿದ್ದು, ಜುಲೈ 18ರಂದು ಫಲಿತಾಂಶ ಹೊರಬೀಳಲಿದೆ ಎನ್ನಲಾಗಿತ್ತು. ಆದರೆ ಅದಕ್ಕೂ ಮುಂಚಿತವಾಗಿ ಫಲಿತಾಂಶ ಪ್ರಕಟವಾಗುತ್ತಿದ್ದು, ಮೊಬೈಲ್ ನಲ್ಲೇ ನೇರವಾಗಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಹಾಗೆಯೇ 10ನೇ ತರಗತಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಸೋಮವಾರದಿಂದ ಆರಂಭವಾಗಲಿದ್ದು ಜುಲೈ 30 ರೊಳಗೆ ಪೂರ್ಣಗೊಳ್ಳಲಿದೆ. ಆಗಸ್ಟ್ ಮೊದಲ ವಾರದಲ್ಲಿ 10ನೇ ತರಗತಿ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights