ಪಶ್ಚಿಮ ಘಟ್ಟಗಳಲ್ಲಿ ಭಾರಿ ಮಳೆ; ಕೃಷ್ಣಾ ನದಿಯಲ್ಲಿ ಪ್ರವಾಹವಾಗುವ ಆತಂಕ!

ಪಶ್ಚಿಮ ಘಟ್ಟಗಳು ಮತ್ತು ಕೃಷ್ಣಾ ನದಿಯ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣಾ ತೀರದ ಜನರು ಸಂತೋಷ ಪಡುವುದೋ, ಆಂಕತಗೊಳ್ಳುವುದೋ ಎಂಬಂತಹ ಸ್ಥಿತಿಯಲ್ಲಿದ್ದಾರೆ. ಕಳೆದ ಏಳು ತಿಂಗಳ ಹಿಂದೆ ಯಾದಗಿರಿ ಜಿಲ್ಲೆಯಲ್ಲಿ ಕೃಷ್ಣಾ ನದಿಯ ಪ್ರವಾಹ ಉಂಟಾಗಿ ಸಾಕಷ್ಟು ಆಸ್ತಿಪಾಸ್ತಿ ಹಾನಿಯಾಗಿತ್ತು. ಮತ್ತದೇ ರೀತಿಯ ಪ್ರವಾಹ ಎದುರಾಗಬಹುದಾ ಎಂಬಂತಹ ಚಿಂತ ಒಂದೆಡೆಯಾದರೆ, ಮತ್ತೊಂದೆಡೆ  ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ (ಆಲಮಟ್ಟಿ ಅಣೆಕಟ್ಟು) ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ಹತ್ತಿರ ತಲುಪಿದ್ದು, ಆಂಧ್ರದ ಜನರಿಗೆ ಸಾಕಷ್ಟು ನೀರು ಸಿಗುವ ನಿರೀಕ್ಷೆಯಲ್ಲಿ ನಗೆ ಬೀರುತ್ತಿದ್ದಾರೆ.

ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್ಎಲ್) ಮೂಲ ಪ್ರಕಾರ, ವಿಜಯಪುರ ಜಿಲ್ಲೆಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ ಪೂರ್ಣ ಮಟ್ಟವನ್ನು) ತಲುಪಲು ಕೇವಲ ಎರಡು ಮೀಟರ್ ಉಳಿದಿದೆ.  ಸೋಮವಾರ ಅಣೆಕಟ್ಟಿನ ನೀರಿನ ಮಟ್ಟ 517.20 ಮೀಟರ್ ತಲುಪಿದ್ದು, ಜಲಾಶಯದ ಗರಿಷ್ಠ ಮಟ್ಟ 519.6 ಮೀಟರ್ ಇದೆ.

ಆದರೆ,  ಮತ್ತೊಮ್ಮೆ ಯಾದಗಿರಿ ಜಿಲ್ಲೆಯ ಕೃಷ್ಣಾ ನದಿ ಪ್ರವಾಹ ಉಂಟಾಗುವ ಮುನ್ಸೂಚನೆ ಎದುರಾಗಿದೆ. ಈಗಾಗಲೇ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವ ಸಾಗರ ಜಲಾಶಯ ಭರ್ತಿಯಾಗಿದ್ದು, ಜಲಾಶಯ ದಿಂದ ನಾಲ್ಕು ಗೇಟ್ ಗಳ ಮೂಲಕ ಕೃಷ್ಣಾ ನದಿಗೆ ನೀರು ಹರಿಬಿಡಲಾಗಿದೆ.

ಮಹಾರಾಷ್ಟ್ರ ಹಾಗೂ ಕರ್ನಾಟಕದ ಬೆಳಗಾವಿ ಸೇರಿದಂತೆ ಇತರ ಕಡೆ ಭಾರಿ ಮಳೆ ಆಗ್ತಿದ್ದು ಮತ್ತೊಮ್ಮೆ ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಒಟ್ಟು ನಾಲ್ಕು ಗೇಟ್ ಮೂಲಕ ನೀರು ಹೊರಕ್ಕೆ ಬಿಡಲಾಗಿದ್ದು, ಒಟ್ಟು 22,860 ಸಾವಿರ ಕ್ಯೂಸೆಕ್ ನೀರು ಜಲಾಶಯದಿಂದ ಕೃಷ್ಣಾ ನದಿಗೆ ಬಿಡಲಾಗಿದೆ. ನದಿ ತೀರದ ಜನರು ಹೆಚ್ಚರ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights