ಪುಲ್ವಾಮದಲ್ಲಿ ಕಾರ್ಯಾಚರಣೆ; ಓರ್ವ ಉಗ್ರನ ಹತ್ಯೆ!

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನಾಪಡೆಯು ಕಾರ್ಯಾಚರಣೆ ನಡೆಸಿದ್ದು, ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪುಲ್ವಾಮದ ಗೂಸು ಎಂಬ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.

ಉಗ್ರರ ಗುಂಡಿನ ದಾಳಿಗೆ ಮುಂದಾದ ಕಾರಣದಿಂದಾಗಿ ಕಾರ್ಯಾಚರಣೆಯನ್ನು ಎನ್‌ಕೌಂಟರ್ ಆಗಿ ಪರಿವರ್ತಿಸಿರುವ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರೆದು ಎನ್‌ಕೌಂಟರ್ ನಡೆಸಿದ್ದಾರೆ. ಪರಿಣಾಮ ಇದೀಗ ಓರ್ವ ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳದಲ್ಲಿ ಇನ್ನೂ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights