ರದ್ದಾಗುವುದೇ ಟಿ20 ವಿಶ್ವಕಪ್‌; ಗರಿಗೇಳಲಿದೆ ಐಪಿಎಲ್‌ ಹಂಗಾಮ!

ದಾದಾ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ ಇದ್ದರೆ, ಕ್ರಿಕೆಟ್ ಪ್ರಿಯರಿಗೆ ಶೀಘ್ರವೇ ಸಿಹಿ ಸುದ್ದಿ ಸಿಗುವ ನಿರೀಕ್ಷೆಯಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಮುಂದಿನ ಸಾಮಾನ್ಯ ಸಭೆಯಲ್ಲಿ ಅಕ್ಟೋಬರ್ ನಲ್ಲಿ ನಡೆಯಬೇಕಿರುವ ಟಿ20 ವಿಶ್ವಕಪ್ ರದ್ದು ಮಾಡುವ ಬಗ್ಗೆ ಘೋಷಣೆ ಮಾಡುವ ಸಾಧ್ಯತೆಯಿದೆ.

ಇದೇ ಸಮಯವನ್ನು ಬಿಸಿಸಿಐ ಐಪಿಎಲ್ ಗೆ ಬಳಸಲು ಯೋಜನೆ ಹಾಕಿಕೊಂಡಿದೆ. ಹೀಗಾಗಿ ವಿದೇಶದಲ್ಲಾದರೂ ಸರಿಯೇ ಐಪಿಎಲ್ ನಡೆಸಲು ಬಿಸಿಸಿಐ ತಯಾರಿ ನಡೆಸಿದೆ. ಈ ಮೂಲಕ ಈ ವರ್ಷ ಐಪಿಎಲ್ ಯಾವಾಗ ನಡೆಯುತ್ತದೋ ಎಂದು ಕಾದು ಕೂತಿದ್ದ ಅಭಿಮಾನಿಗಳಿಗೆ ಸದ್ಯದಲ್ಲೇ ಗುಡ್ ನ್ಯೂಸ್ ಶೀಘ್ರದಲ್ಲೇ ಸಿಗಲಿದೆ.

ಇನ್ನೊಂದಡೆ ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ ಸ್ವಯಂ ಕ್ವಾರಂಟೈನ್ ಗೊಳಗಾಗಲು ತೀರ್ಮಾನಿಸಿದ್ದಾರೆ. ಸಹೋದರ ಸ್ನೇಹಶಿಷ್ ಗಂಗೂಲಿಗೆ ಕೊರೋನಾ ದೃಢಪಟ್ಟ ಹಿನ್ನಲೆಯಲ್ಲಿ ಸೌರವ್ ಈ ನಿರ್ಧಾರ ಕೈಗೊಂಡಿದ್ದಾರೆ.

ಇತ್ತೀಚೆಗಷ್ಟೇ ಸ್ನೇಹಶಿಷ್ ಪತ್ನಿ, ತಂದೆಗೆ ಕೊರೋನಾ ದೃಢಪಟ್ಟಿತ್ತು. ಇದೀಗ ಬೆಂಗಾಳ ಕ್ರಿಕೆಟ್ ಅಸೋಸಿಯೇಷನ್ ಜಂಟಿ ಕಾರ್ಯದರ್ಶಿಯೂ ಆಗಿರುವ ಸ್ನೇಹಶಿಷ್ ಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಹಿನ್ನಲೆಯಲ್ಲಿ ಗಂಗೂಲಿ ಹೋಂ ಕ್ವಾರಂಟೈನ್ ಗೊಳಗಾಗಲು ನಿರ್ಧರಿಸಿದ್ದಾರೆ. ಸಹೋದರನನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights