ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸ್ಸು ಮಾಡಿ: ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಆಗ್ರಹ!

ಕೊರೊನಾ ಸಂಕಷ್ಟದ ನಡುವೆಯೂ ರಾಜಸ್ಥಾನದ ರಾಜಕೀಯ ದೇಶಾದ್ಯಂತ ಸದ್ದು ಮಾಡುತ್ತಿದೆ. ಸಧ್ಯ, ರಾಜಸ್ಥಾನದಲ್ಲಿ ಬಿಜೆಪಿ ಶಾಸಕರ ಕುದುರೆ ವ್ಯಾಪಾರ ಮಾಡುತ್ತಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಆಶೋಕ್‌ ಗೆಹ್ಲೋಟ್‌ ಆರೋಪಿಸಿದ್ದಾರೆ. ಅಲ್ಲದೆ, ಬಿಜೆಪಿ ನಾಯಕರನ್ನು ಆ ಕಾರಣಕ್ಕಾಗಿ ಬಂಧಿಸಲಾಗಿದೆ. ಇದರ ಬೆನ್ನಲ್ಲೇ, ರಾಜಸ್ಥಾನದ ರಾಜಕೀಯ ಬಿಕ್ಕಟ್ಟಿಗೆ ಪ್ರತಿಕ್ರಿಯಿಸಿರುವ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)ದ  ಮುಖ್ಯಸ್ಥೆ ಮಾಯಾವತಿಯವರು ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸ್ಸು ಮಾಡಬೇಕು ಎಂದು ಆಗ್ರಹಿಸಿದ್ಧಾರೆ.

‘ರಾಜಸ್ಥಾನ ಸಿಎಂ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಈ ಹಿಂದೆ ಕಾಂಗ್ರೆಸ್​ ಮುಖಂಡರು ಬಿಎಸ್​ಪಿ ಶಾಸಕರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡರು. ಆಗ ಕಾಂಗ್ರೆಸ್​ ಮಾಡಿದ ಕೆಲಸವನ್ನೇ ಈಗ ಬಿಜೆಪಿ ಮಾಡುತ್ತಿದೆ. ಇವರು ತಮ್ಮ ಶಾಸಕರನ್ನು ಕಾಪಾಡಿಕೊಳ್ಳಲು ಬಿಜೆಪಿ ನಾಯಕರ ಫೋನ್​​ ಕದ್ದಾಲಿಕೆ ಮಾಡಲಾಗಿದೆ. ಹೀಗಾಗಿ ರಾಜಸ್ಥಾನದಲ್ಲಿ ರಾಷ್ಟ್ರಪತಿಗಳ ಆಡಳಿತ ಹೇರಬೇಕು’ ಎಂದು ಮಾಯಾವತಿ ಟ್ವೀಟ್‌ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ರಾಜಸ್ಥಾನದ ಸದ್ಯದ ರಾಜಕೀಯ ಬಿಕ್ಕಟ್ಟಿನ ಬಗ್ಗೆ ರಾಜ್ಯಪಾಲರು ಸಂಪೂರ್ಣ ಮಾಹಿತಿ ಸಂಗ್ರಹಿಸಬೇಕು. ಬಳಿಕ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡುವ ಮೂಲಕ ಪ್ರಜಾಪ್ರಭುತ್ವ ಉಳಿಸಬೇಕು’ ಎಂದು ಆಗ್ರಹಿಸಿದ್ದಾರೆ.

ರಾಜಸ್ಥಾನದಲ್ಲಿ ರಾಜಕಾರಣಿಗಳ ಫೋನ್‌ ಕದ್ದಾಲಿಕೆ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಅಶೋಕ್‌ ಗೆಹ್ಲೋಟ್‌ ಸರ್ಕಾರದ ಮೇಲೆ ಕೇಳಿ ಬಂದಿದೆ. ಈ ಸಂಬಂಧ ಸಿಬಿಐ ತನಿಖೆ ನಡೆಯಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಇತ್ತೀಚೆಗೆ ಶುಕ್ರವಾರವಷ್ಟೆ ಕಾಂಗ್ರೆಸ್‌ ಬಿಜೆಪಿ ನಾಯಕರ ಆಡಿಯೋ ಟೇಪ್‌ ಒಂದನ್ನು ಬಿಡುಗಡೆಗೊಳಿಸಿತ್ತು. ಇದರಲ್ಲಿ ಶಾಸಕರ ಕುದುರೆ ವ್ಯಾಪಾರದ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದು ಕಾಂಗ್ರೆಸ್​ ಹೇಳಿತ್ತು.

ಇನ್ನು, ಈ ಫೋನ್​ ಟ್ಯಾಪಿಂಗ್​ ಆಧಾರದ ಮೇಲೆ ಕಾಂಗ್ರೆಸ್‌ ಬಿಜೆಪಿ ಮೇಲೆ ಪೊಲೀಸರಿಗೆ ದೂರು ಕೂಡ ನೀಡಿತ್ತು. ಆದರೆ ಬಿಜೆಪಿಯ ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಇದು ನನ್ನ ಧ್ವನಿಯಲ್ಲ ಎಂದಿದ್ದರು. ಜತೆಗೆ ಇದು ನಕಲಿ ಆಡಿಯೋ ಎಂದು ಬಿಜೆಪಿ ಹೇಳಿತ್ತು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights