ರಾಜ್ಯದಲ್ಲಿ ಪ್ರತಿ ಭಾನುವಾರ ಲಾಕ್‌ಡೌನ್, ನಾಳೆಯಿಂದ ನೈಟ್‌ ಕರ್ಫ್ಯೂ!

ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವ ಕೊರೊನಾ ಪ್ರಕರಣಗಳನ್ನು ಕಂಡು ರಾಜ್ಯದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಆ ಕಾರಣದಿಂದಾಗಿ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಮಾಡಬೇಕೆಂದು ವಿರೋಧ ಪಕ್ಷಗಳು ಒತ್ತಡ ಏರುತ್ತಲೇ ಇವೆ. ಅಲ್ಲದೆ, ಆಡಳಿತಾರೂಢ ಬಿಜೆಪಿ ಶಾಸಕರೂ ಬೆಂಗಳೂರಿನಲ್ಲಿ ಲಾಕ್‌ಡೌನ್‌ ಮಾಡಬೇಕೆಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದರು. ಆದರೆ, ಯಾವುದೇ ಕಾರಣಕ್ಕೂ ಲಾಕ್‌ಡೌನ್‌ ಮಾಡುವುದಿಲ್ಲ ಎಂದಿದ್ದ ಸರ್ಕಾರ, ಈಗ ಮತ್ತೆ ಭಾನುವಾರದ ಲಾಕ್‌ಡೌನ್‌ ಜಾರಿಗೊಳಿಸಲು ಮುಂದಾಗಿದೆ.

ಜುಲೈ 05 ರಿಂದ ಭಾನುವಾರ ಸಂಪೂರ್ಣ ಲಾಕ್‌ಡೌನ್‌ ಘೋಷಿಸಿದ್ದು, ನಾಳೆಯಿಂದ ರಾತ್ರಿ ವೇಳೆ ಕರ್ಫ್ಯೂ ಜಾರಿಯಾಗಲಿದೆ. ನಾಳೆಯಿಂದ ರಾತ್ರಿ 09 ಗಂಟೆಯಿಂದ ಬೆಳಗ್ಗೆ 05 ಗಂಟೆಯ ವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ರಾಜ್ಯವ್ಯಾಪಿ ಲಾಕ್​ಡೌನ್ ಮಾಡಬೇಕೆಂದು ವಿಪಕ್ಷಗಳು ಒತ್ತಡ ಹಾಕುತ್ತಿದ್ದರೂ ಆರ್ಥಿಕತೆಯ ದೃಷ್ಟಿಯಿಂದ ಆ ಕ್ರಮ ಕೈಗೊಳ್ಳಲು ಸರ್ಕಾರ ನಿರಾಕರಿಸಿದೆ. ಆದರೆ, ತಜ್ಞರ ಸಲಹೆ ಪಡೆದು ಪರ್ಯಾಯ ಕ್ರಮಗಳನ್ನ ಜಾರಿಗೊಳಿಸಲು ನಿರ್ಧರಿಸಿದೆ. ಅದರಂತೆ, ರಾಜ್ಯ ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಲು ಅವಕಾಶ ಕೊಡಲಾಗಿದೆ. ವಾರದಲ್ಲಿ ಎರಡು ದಿನ ಸರ್ಕಾರಿ ನೌಕರರಿಗೆ ರಜೆ ನೀಡಲಾಗಿದೆ. ಜುಲೈ 10ರಿಂದ ಒಂದು ತಿಂಗಳ ಕಾಲ ಈ ಕ್ರಮ ಜಾರಿಯಲ್ಲಿರುತ್ತದೆ. ಈ ಮುಂಚೆ, ತಿಂಗಳಲ್ಲಿ ಪ್ರತಿ ಭಾನುವಾರದ ಜೊತೆಗೆ 2ನೇ ಮತ್ತು 4ನೇ ಶನಿವಾರದಂದು ರಾಜ್ಯ ಸರ್ಕಾರಿ ನೌಕರರಿಗೆ ರಜೆ ಇರುತ್ತಿತ್ತು. ಈಗ ಎಲ್ಲಾ ಶನಿವಾರ ಮತ್ತು ಭಾನುವಾರದಂದು ರಜೆ ಇರಲಿದೆ.

ಇವತ್ತಿನ ಸಭೆಯಲ್ಲಿ ವಾರದಲ್ಲಿ ಎರಡು ದಿನ ಲಾಕ್​ಡೌನ್ ಮಾಡುವ ಚಿಂತನೆ ನಡೆದಿತ್ತು. ಆದರೆ, ಸದ್ಯಕ್ಕೆ ಸಂಡೇ ಲಾಕ್​ಡೌನ್ ಮಾತ್ರ ಮಾಡಿ, ಒಂದೆರಡು ವಾರಗಳ ಬಳಿಕ ಅದರ ಪರಿಣಾಮ ನೋಡಿಕೊಂಡು ವಾರಕ್ಕೆರಡು ದಿನ ಲಾಕ್​ಡೌನ್ ಮಾಡುವುದು ಒಳ್ಳೆಯದು ಎಂಬ ತಜ್ಞರ ಅಭಿಪ್ರಾಯವನ್ನ ಸ್ವೀಕರಿಸಲಾಗಿದೆ.

ಈಗ ರಾತ್ರಿ 9ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಇದೆ. ಈಗ ಒಂದು ಗಂಟೆ ಮುಂಚಿತವಾಗಿ, ಅಂದರೆ ರಾತ್ರಿ 8 ಗಂಟೆಗೇ ಕರ್ಫ್ಯೂ ಶುರುವಾಗಲಿದೆ. ಸರ್ಕಾರ ಈ ಬಗ್ಗೆ ಅಧಿಕೃತವಾಗಿ ಆದೇಶ ಹೊರಡಿಸಿದೆ.

ವೈದ್ಯರ ಕೊರತೆ ನೀಗಿಸಲು ಕಾರ್ಮಿಕ ಇಲಾಖೆಯಿಂದ ನೇಮಕವಾಗಿರುವ 180 ಇಎಸ್ಐ ವೈದ್ಯರನ್ನ ಕೋವಿಡ್ ಕರ್ತವ್ಯಕ್ಕೆ ಜೋಡಿಸಿಕೊಳ್ಳಲಾಗುತ್ತಿದೆ. ಪರೀಕ್ಷಾರ್ಥಿ ತಹಶೀಲ್ದಾರ್​ಗಳನ್ನ ಕೋವಿಡ್ ಆಸ್ಪತ್ರೆ ಮತ್ತು ಕೇರ್ ಸೆಂಟರ್​ಗಳಿಗೆ ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲು ಸರ್ಕಾರ ಸೂಚಿಸಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights