ರಾಜ್ಯದಲ್ಲಿ ಮತ್ತೆಲ್ಲೂ ಲಾಕ್‌ಡೌನ್‌ ಮಾಡುವುದಿಲ್ಲ; ಎಸ್‌.ಟಿ.ಸೋಮಶೇಖರ್

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಲಾಕ್‌ಡೌನ್‌ ಮಾಡಲಾಗಿದೆ. ಇನ್ನೆರಡು ದಿನಗಳಲ್ಲಿ ನಗರದ ಲಾಕ್‌ಡೌನ್‌ ಮುಗಿಯಲಿದ್ದು, ಮತ್ತೆ ಲಾಕ್‌ಡೌನ್‌ ಮುಂದುವರೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಲ್ಲದೆ, ರಾಜ್ಯದಲ್ಲಿಯೂ ಲಾಕ್‌ಡೌನ್‌ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಇಂತಹ ಊಹಾಪೋಹಾಗಳಿಗೆ ಸ್ಪಷ್ಟನೆ ನೀಡಿರುವ ಸಚಿವ ಎಸ್‌.ಟಿ.ಸೋಮಶೇಖರ್ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಇನ್ಮುಂದೆ ರಾಜ್ಯದಲ್ಲಿ ಲಾಕ್​ಡೌನ್​ ಇರುವುದಿಲ್ಲ. ಈಗಾಗಲೇ ಸಿಎಂ ಬಿಎಸ್ ಯಡಿಯೂರಪ್ಪನವರು ಈ ಬಗ್ಗೆ ಹೇಳಿದ್ದಾರೆ.  ಕೊರೋನಾ ಪಾಸಿಟಿವ್ ಬಂದ ರಸ್ತೆಗಳನ್ನು ಮಾತ್ರ ಸೀಲ್​ಡೌನ್ ಮಾಡಲಾಗುತ್ತದೆ. ಅಲ್ಲಿ ಮಾತ್ರ ಸೀಲ್​ಡೌನ್ ಇರುತ್ತದೆ, ಆದರೆ ಲಾಕ್​ಡೌನ್​ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕೊರೊನಾ ಸೋಂಕಿಗೆ ಲಾಕ್‌ಡೌನ್ ಪರಿಹಾರವಲ್ಲ, ಅದು ಕೇವಲ ತಾತ್ಕಾಲಿಕ, ಲಾಕ್‌ಡೌನ್ ಬದಲು ಚಿಕಿತ್ಸೆಗೆ ಆದ್ಯತೆ ನೀಡಲಾಗುವುದು, ಹಿಗಾಗಿ ಮುಂದಿನ ದಿನಗಳಲ್ಲಿ ಲಾಕ್ ಡೌನ್ ಮುಂದುವರೆಸುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದರು.

ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ ನಡೆಸಿ, ಕೋವಿಡ್ ಹಾಗೂ ನಾನ್ ಕೋವಿಡ್ ರೋಗಿಗಳಿಗೆ ಚಿಕಿತ್ಸಾ ಸೌಲಭ್ಯ ದೊರಕುವುದನ್ನು ಖಾತರಿಪಡಿಸುವಂತೆ ಸೂಚಿಸಿದರು. ರೋಗ ಲಕ್ಷಣ ಇಲ್ಲದ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸದೆ, ಕೋವಿಡ್ ಕೇರ್ ಸೆಂಟರ್‌ಗಳಿಗೆ ಅಥವಾ ಹೋಮ್ ಕ್ವಾರಂಟೈನ್ ಮೂಲಕ ಸೋಂಕಿತರಿಗೆ ಚಿಕಿತ್ಸೆ ಒದಗಿಸುವಂತೆ BSY ಸೂಚಿಸಿದರು.

ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ; ಲಾಕ್ ಡೌನ್ ಮುಂದುವರೆಸುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಅವರು ಈ ಸಭೆಯಲ್ಲಿ ಅಭಿಪ್ರಾಯ ಪಟ್ಟಿದ್ದಾರೆ.  ಕರೋನಾ ವೈರಸ್ ಹಾವಳಿ ಜೊತೆಗೆ ಆರ್ಥಿಕ ಪರಿಸ್ಥಿತಿಯನ್ನು ಸರಿದಾರಿಗೆ ತರಬೇಕಿದೆ ಹಾಗಾಗಿ  ಲಾಕ್ ಡೌನ್ ವಿಸ್ತರಣೆ ಇಲ್ಲ ಎಂದು ಅವರು ಹೇಳಿದ್ದರು..

ಪ್ರತಿ ವಾರ್ಡುಗಳಲ್ಲಿ ಕಲ್ಯಾಣ ಮಂಟಪಗಳನ್ನು ಹಾಗು ವಸತಿ ಗೃಹಳನ್ನು ಗುರುತಿಸಲಾಗಿದ್ದು, ಪ್ರತ್ಯೇಕವಾಗಿ ವಾಸಿಸಲು ಕೊಠಡಿಗಳು ಇಲ್ಲದವರಿಗೆ ಕ್ವಾರಂಟೈನ್ ಮಾಡಲು ಈ ಕಲ್ಯಾಣ ಮಂಟಪಗಳನ್ನು ಬಳಸುವಂತೆ ಸೂಚಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ. ಒಟ್ಟಿನಲ್ಲಿ ಲಾಕ್‌ಡೌನ್ ಸೋಂಕು ತಡೆಗೆ ಪರಿಹಾರವಲ್ಲ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ. ಇನ್ನೂ ಸಚಿವರಾದ ಆರ್. ಅಶೋಕ್ ಮತ್ತು ಭೈರತಿ ಬಸವರಾಜ್ ಕೂಡ ಲಾಕ್‌ಡೌನ್ ಮುಂದುವರಿಸೋ ಅವಶ್ಯಕತೆ ಇಲ್ಲ ಎಂದಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights