ರಾಷ್ಟ್ರ ರಾಜಧಾನಿಯಲ್ಲಿ ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳು ರದ್ದು….

ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಈ ದಿನ ಮಾನಗಳಲ್ಲಿ ಪರೀಕ್ಷೆಗಳನ್ನು ನಡೆಸುವುದು ಅಪಾಯಕಾರಿಯಾಗಿದ್ದು, ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಒತ್ತಡಗಳು ಕೇಳಿ ಬಂದಿದ್ದವು. ಹೀಗಾಗಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ವಿಶ್ವವಿದ್ಯಾಲಯದ ಎಲ್ಲ ಪರೀಕ್ಷೆಗಳನ್ನು ರದ್ದುಗೊಳಿಸಲು ದೆಹಲಿ ಸರ್ಕಾರ ಸೂಚಿಸಿದೆ.

ಯುಜಿಸಿ ಅಧ್ಯಕ್ಷ ಧಿರೇಂದ್ರ ಪಾಲ್ ಸಿಂಗ್ ಅವರಿಗೆ ಗುರುವಾರ ಬರೆದ ಪತ್ರದಲ್ಲಿ, ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ದೇಶಾದ್ಯಂತ ವಿದ್ಯಾರ್ಥಿಗಳು ಕೋರಿದ್ದಾರೆ. ಪತ್ರದ ಸಹಿಗಳಲ್ಲಿ ದೆಹಲಿ ವಿಶ್ವವಿದ್ಯಾಲಯ ಮತ್ತು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಸೇರಿದಂತೆ ದೇಶದ ವಿವಿಧ ಸಂಸ್ಥೆಗಳ ಸುಮಾರು 28 ಪ್ರಾಧ್ಯಾಪಕರು ಸೇರಿದ್ದಾರೆ.

ಹೀಗಾಗಿ ಕೊರೊನಾ ಭೀತಿ ಹಿನ್ನೆಲೆ ಅಂತಿಮ ವರ್ಷದ ಪರೀಕ್ಷೆ ಸೇರಿದಂತೆ ವಿಶ್ವವಿದ್ಯಾಲಯದ ಎಲ್ಲ ಪರೀಕ್ಷೆಗಳನ್ನು ರದ್ದುಗೊಳಿಸಿ, ಈ ಹಿಂದಿನ ಪೂರ್ವ ಪರೀಕ್ಷೆಗಳ ಆಧಾರದಲ್ಲಿ ಅಂಕಗಳನ್ನು ನೀಡಿ ಮುಂದಿನ ತರಗತಿಗೆ ತೇರ್ಗಡೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights