ವಿಮಾನ ನಿಲ್ದಾಣಕ್ಕೆ ಕಿತ್ತೂರು ಚೆನ್ನಮ್ಮಳ ಹೆಸರಿಡಲು ನಿರಾಕರಿಸಿದ ಬಿಜೆಪಿ, ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡಲು ಮುಂದಾಗಿದೆ!

ಭಾರತದ ಇತಿಹಾಸದಲ್ಲಿ ಬ್ರಿಟಿಷ್‌ ದಾಸ್ಯದ ವಿರುದ್ಧ ಹೋರಾಡಿ ಮಡಿದ ಬೆರಳಿಕೆಯಷ್ಟು ರಾಜ ಮನೆತನಗಳಲ್ಲಿ ಕಿತ್ತೂರು ರಾಣಿ ಚೆನ್ನಮ್ಮಳೂ ಒಬ್ಬರು. ಕರ್ನಾಟಕದಲ್ಲಿ ಬಿಟ್ರಿಷರ ವಿರುದ್ಧ ಹೋರಾಡಿ ಮಡಿದ ರಾಣಿ, ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ.

ಉತ್ತರ ಕರ್ನಾಟಕದ ಕಿತ್ತೂರಿನ ರಾಣಿಯಾಗಿ ಆಳಿದ್ದ ಚೆನ್ನಮ್ಮ ಈಗಲೂ ಅಲ್ಲಿಯ ಜನಮಾನಸದಲ್ಲಿ ನೆಲೆಯೂರಿದ್ದಾರೆ. ಆದರೆ, ಎಂಥಹ ವಿಪರ್ಯಾಸವೆಂದರೆ ಉತ್ತರ ಕರ್ನಾಟಕವನ್ನು ಆಳಿದ ಚೆನ್ನಮ್ಮಳ ಹೆಸರನ್ನು  ಬೆಳಗಾವಿ ವಿಮಾನ ನಿಲ್ದಾಣಕ್ಕಿಡಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಆದರೆ, ಕರ್ನಾಟಕಕ್ಕೂ ಆತನಿಗೂ ಸಂಬಂಧವೇ ಇಲ್ಲದ ಸಾವರ್ಕರ್ ಹೆಸರನ್ನು ಯಲಹಂಕ ಮೇಲ್ಸೇತುವೆಗೆ ಇಡಲು ಮುಂದಾಗಿದ್ದು, ಅದಕ್ಕಾಗಿ ಬಿಜೆಪಿ ಗುದ್ದಾಡುತ್ತಿದೆ.

ರಾಜ್ಯದ ವಾಣಿಜ್ಯ ನಗರಗಳ ಪೈಕಿ ಬೆಳಗಾವಿಯೂ ಒಂದು. ಹೀಗಾಗಿ ಬೆಳಗಾವಿ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗಿತ್ತು. ಅಲ್ಲದೆ. 2018ರಲ್ಲಿ ಕಾಂಗ್ರೆಸ್—ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಈ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಯೂ ಗೊಳಿಸಲಾಗಿತ್ತು. ಈ ಸಮಾರಂಭದಲ್ಲಿ ಮಾತನಾಡಿದ್ದ ಅಂದಿನ ವಿಮಾನಯಾನ ಸಚಿವ ಅಶೋಕ ಗಜಪತಿರಾಜು, “ಚೆನ್ನಮ್ಮನ ಹೆಸರಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ, ಶೀಘ್ರವೇ ಅನುಮೋದನೆ ನೀಡಲಾಗುವುದು” ಎಂದು ಆಶ್ವಾಸನೆ ನೀಡಿದ್ದರು.

ಅದರಂತೆ ಅಂದಿನ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಡಿಸೆಂಬರ್‌ 22, 2018ರಂದು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡುವಂತೆ ಕೋರಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆದು ಒತ್ತಾಯಿಸಿದ್ದರು.

ನಂತರ ಸಮ್ಮಿಶ್ರ ಸರ್ಕಾರ ಉರುಳಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರವೂ ಸಹ ಸಿಎಂ ಬಿಎಸ್‌ ಯಡಿಯೂರಪ್ಪ, “ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರಿನ ರಾಣಿ ಚೆನ್ನಮ್ಮ ಅವರ ಹೆಸರಿಡಿ” ಎಂದು ಕೇಂದ್ರ ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆದು ಮನವಿ ಮಾಡಿದ್ದರು. ಕಿತ್ತೂರು ರಾಣಿ ಚೆನ್ನಮ್ಮ. ಭಾರತದ ಸ್ವಾತಂತ್ಯ್ರ ಹೋರಾಟದ ಇತಿಹಾಸದಲ್ಲಿ ಅಗ್ರಗಣ್ಯವಾದ ಹೆಸರು. ಕರ್ನಾಟಕದ ಮಟ್ಟಿಗೆ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಯೂರಿರುವ ಹೆಸರು. ಇನ್ನೂ ಉತ್ತರ ಕರ್ನಾಟಕದ ಪಾಲಿಗೆ ಚೆನ್ನಮ್ಮ ಈಗಲೂ ಮನೆ ಮನೆ ಸದಸ್ಯೆ ಎಂದರೆ ತಪ್ಪಾಗಲಾರದು. ಆದರೆ, ವಿಪರ್ಯಾಸ ನೋಡಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರಿನ ರಾಣಿ ಚೆನ್ನಮ್ಮ ಹೆಸರಿಡಲು ಕೇಂದ್ರ ಸರ್ಕಾರ ಸಾರಾ ಸಗಟಾಗಿ ತಿರಸ್ಕರಿಸಿದರೆ, ನಾವಿಲ್ಲಿ ಯಲಹಂಕ ಮೇಲ್ಸೇತುವೆಗೆ ವೀರ ಸಾವರ್ಕರ್‌ ಹೆಸೆರಿಟ್ಟು ವಿಜೃಂಭಿಸುತ್ತಿದ್ದೇವೆ.

ರಾಜ್ಯದ ವಾಣಿಜ್ಯ ನಗರಗಳ ಪೈಕಿ ಬೆಳಗಾವಿಯೂ ಒಂದು. ಹೀಗಾಗಿ ಬೆಳಗಾವಿ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗಿತ್ತು. ಅಲ್ಲದೆ. 2018ರಲ್ಲಿ ಕಾಂಗ್ರೆಸ್—ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಈ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಯೂ ಗೊಳಿಸಲಾಗಿತ್ತು. ಈ ಸಮಾರಂಭದಲ್ಲಿ ಮಾತನಾಡಿದ್ದ ಅಂದಿನ ವಿಮಾನಯಾನ ಸಚಿವ ಅಶೋಕ ಗಜಪತಿರಾಜು, “ಚೆನ್ನಮ್ಮನ ಹೆಸರಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ಶೀಘ್ರವೇ ಅನುಮೋದನೆ ನೀಡಲಾಗುವುದು” ಎಂದು ಆಶ್ವಾಸನೆ ನೀಡಿದ್ದರು.


ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು; ನಾಡಿಗೆ ಅಪಮಾನ ಎಂದ ಹೆಚ್‌ಡಿಕೆ


ಅದರಂತೆ ಅಂದಿನ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಡಿಸೆಂಬರ್‌ 22, 2018ರಂದು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡುವಂತೆ ಕೋರಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆದು ಒತ್ತಾಯಿಸಿದ್ದರು.

ನಂತರ ಸಮ್ಮಿಶ್ರ ಸರ್ಕಾರ ಉರುಳಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರವೂ ಸಹ ಸಿಎಂ ಬಿಎಸ್‌ ಯಡಿಯೂರಪ್ಪ, “ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರಿನ ರಾಣಿ ಚೆನ್ನಮ್ಮ ಅವರ ಹೆಸರಿಡಿ” ಎಂದು ಕೇಂದ್ರ ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆದು ಮನವಿ ಮಾಡಿದ್ದರು. ಆದರೆ, 2018ರಲ್ಲಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮ ಹೆಸರಿಡಲು ನಮ್ಮದೇನೂ ತಕರಾರಿಲ್ಲ ಎಂದಿದ್ದ ಕೇಂದ್ರ ಸರ್ಕಾರ ಇಂದು ಚೆನ್ನಮ್ಮ ಹೆಸರನ್ನು ಸಾರಾಸಗಟಾಗಿ ತಿರಸ್ಕರಿಸಿದೆ. ಈ ಮೂಲಕ ಕರ್ನಾಟಕದ ಕೆಚ್ಚೆದೆಯ ಸ್ವಾತಂತ್ಯ್ರ ಹೋರಾಟಗಾರರನ್ನು ಅಪಮಾನಿಸಿದೆ ಎಂದರೆ ತಪ್ಪಾಗಲಾರದು.

ಆದರೆ, ವಿಪರ್ಯಾಸ ನೋಡಿ ಕೇಂದ್ರ ಸರ್ಕಾರ ನಮ್ಮದೆ ನಾಡಿನ ವಿಮಾನ ನಿಲ್ದಾಣಕ್ಕೆ ನಮ್ಮದೇ ಸ್ವಾತಂತ್ಯ್ರ ಹೋರಾಟಗಾರರ ಹೆಸರಿಡಲು ಹಿಂದೂ-ಮುಂದೂ ನೋಡುತ್ತಿರುವ ಸಂದರ್ಭದಲ್ಲಿ ನಾವು ಬೆಂಗಳೂರಿನ ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರಿಡುವಂತೆ ಒತ್ತಾಯಿಸಿ ಹೋರಾಟ ಮಾಡುತ್ತಿದ್ದೇವೆ ಮತ್ತು ಬಿಬಿಎಂಪಿಯಲ್ಲಿ ಪ್ರಸ್ತಾಪವೇ ಆಗದೆ ಹೆಸರನ್ನು ಕೊನೆಗೂ ಅಂತಿಮಗೊಳಿಸಲಾಗಿದೆ.


ಇದನ್ನೂ ಓದಿ: ಕ್ಷಮೆ ಯಾಚಿಸಲು ನಾನು ಸಾವರ್ಕರ್ ಅಲ್ಲ – ಬಿಜೆಪಿ ವಿರುದ್ಧ ಗುಡುಗಿದ ರಾಹುಲ್ ಗಾಂಧಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights