ಸಧ್ಯಕ್ಕಿಲ್ಲ ಶಾಲೆಗಳ ಓಪನ್; ವಿದ್ಯಾರ್ಥಿಗಳ ಆರೋಗ್ಯವೇ ಮುಖ್ಯ: ಸುಧಾಕರ್‌

ಕೊರೊನಾ ವೈರಸ್ ಅಟ್ಟಹಾಸದ ನಡುವೆಯೇ ಎಲ್ಲ ಶಾಲೆಗಳು ಆರಂಭವಾಗುತ್ತವಾ ಎಂಬ ಪೋಷಕರ ಗೊಂದಲಕ್ಕೆ ಸರ್ಕಾರ ತೆರೆ ಎಳೆಯುವ ಪ್ರಯತ್ನ ಮಾಡಿದೆ.. ಮಕ್ಕಳ ಸಂರಕ್ಷಣೆಗೆ ಮೊದಲ ಆದ್ಯತೆ, ಯಾವುದೇ ಕಾರಣಕ್ಕೂ ಸದ್ಯದ ಮಟ್ಟಿಗೆ ಶಾಲೆಗಳನ್ನು ಮತ್ತೆ ಆರಂಭಿಸುವ ಮಾತೇ ಇಲ್ಲ ಎಂದು ವೈದ್ಯ ಶಿಕ್ಷಣ ಸಚಿವ ಸುಧಕರರು ಹೇಳಿದ್ದಾರೆ.

ರಾಜ್ಯ ಸರ್ಕಾರ ಮಕ್ಕಳ ಆರೋಗ್ಯ ಕಾಪಾಡಲು ಬದ್ಧವಾಗಿವೆ. ಶಾಲೆಗಳನ್ನು ತೆರೆದರೆ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಈಗಲೇ ಶಾಲೆ ಆರಂಭಸಲು ಸಾಧ್ಯವಿಲ್ಲ ಎಂದವರು ತಿಳಿಸಿದ್ದಾರೆ. ಆದರೆ ಮಕ್ಕಳ ಶೈಕ್ಷಣಿಕ ವರ್ಷದ ಬಗ್ಗೆ ಸಚಿವರು ಸ್ಪಷ್ಟವಾಗಿ ಏನನ್ನು ಹೆಳಲಿಲ್ಲ..

ಈ ಮಧ್ಯೆ ಸರಕಾರ ಮತ್ತು ಖಾಸಗಿ ಆಸ್ಪತ್ರೆಗಳ ನಡುವಿನ ಗೊಂದಲಕ್ಕೆ ಇನ್ನು ತೆರೆ ಬಿದ್ದಿಲ್ಲ..  ಕೋವಿಡ್ ಮತ್ತು ಕೋವಿಡ್ ಅಲ್ಲದ ಕಾಯಿಲೆಗಳಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಸರಕಾರ ಮುಂದಾಗಿದೆ ಎಂದು ಸಚಿವರು ತಿಳಿಸಿದ್ದಾರೆ..

ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಮುಖ್ಯಮಂತ್ರಿಗಳು ಮಹತ್ವದ ಸಭೆ ನಡೆಸಿದ್ದು, 5,200 ಹಾಸಿಗೆಗಳನ್ನು ಕೋವಿಡ್ ಸೋಂಕಿತರಿಗೆ ಮೀಸಲಿಡಲು ನಿರ್ದೇಶಿಸಿದ್ದಾರೆ. ಒಂದು ವಾರದೊಳಗೆ ಹೆಚ್ಚುವರಿ 3,000 ಹಾಸಿಗೆಗಳು ಸೇರ್ಪಡೆ. ಸಭೆಗೆ ಹಾಜರಾಗದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.

ರಾಜ್ಯದಲ್ಲಿ ಇದುವರೆಗೆ 21,775 ಜನರು ಗುಣಮುಖರಾಗಿದ್ದು, ಇಂದು ರಾಜ್ಯದಲ್ಲಿ 24,909  ಟೆಸ್ಟ್ ನಡೆಸಲಾಗಿದೆ. ರಾಜ್ಯದಲ್ಲಿ ಈಗ 85 ಕೋವಿಡ್ ಪರೀಕ್ಷಾ ಪ್ರಯೋಗಾಲಯಗಳಿದ್ದು ಮುಂದಿನ ದಿನಗಳಲ್ಲಿ ಇನ್ನೂ 25 ಲ್ಯಾಬ್ ಸ್ಥಾಪಿಸುವ ಚಿಂತನೆ ಇದೆ. ಮುಂದಿನ ದಿನಗಳಲ್ಲಿ 50,000 ಆರ್ಟಿಪಿಸಿಆರ್ ಟೆಸ್ಟ್ ಪ್ರತಿದಿನ ನಡೆಸುವ ಗುರಿ ಹೊಂದಲಾಗಿದೆ. ಇದುವರೆಗೆ 9.8 ಲಕ್ಷ ಟೆಸ್ಟ್ ನಡೆಸಲಾಗಿದ್ದು ಕೆಲವೇ ರಾಜ್ಯಗಳು ನಮಗಿಂತ ಹೆಚ್ಚು ಟೆಸ್ಟ್ ನಡೆಸಿವೆ ಎಂದವರು ಮಾಹಿತಿ ನೀಡಿದರು.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಪ್ರತಿ 10 ಲಕ್ಷ ಜನಸಂಖ್ಯೆಗೆ 149 ಪರೀಕ್ಷೆ ನಡೆಸಬೇಕಾಗಿದ್ದು, ರಾಜ್ಯದಲ್ಲಿ 300 ಜನರಿಗೆ ಟೆಸ್ಟ್ ಮಾಡಲಾಗುತ್ತಿದೆ. ಇನ್ನೂ 10 ಲಕ್ಷ ಆಂಟಿಜೆನ್ ಕಿಟ್ ಗಳಿಗೆ ಆರ್ಡರ್ ನೀಡಲಾಗಿದೆ. ಟೆಸ್ಟ್ ನಡೆಸುವಲ್ಲಿ ಮೊದಲ 10 ರಾಜ್ಯಗಳಲ್ಲಿ ಕರ್ನಾಟಕವೂ ಒಂದು ಎಂದು ಸಚಿವರು ತಿಳಿಸಿದ್ದಾರೆ.

ಲಕ್ಷಣರಹಿತ ಮತ್ತು ಅಲ್ಪ ಲಕ್ಷಣವುಳ್ಳ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ ಮತ್ತು ಹೋಂ ಐಸೋಲೇಶನ್ ಮಾಡುವ ನಿಟ್ಟಿನಲ್ಲಿ ಸರ್ಕಾರದ ಸುತ್ತೋಲೆ ಹೊರಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಲಕ್ಷಣರಹಿತ ಸೋಂಕಿತರನ್ನು ದಾಖಲು ಮಾಡಿಕೊಳ್ಳುವಂತಿಲ್ಲ ಎಂದು ಸುಧಾಕರ ಅವರು ಹೇಳಿದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights