ಸಿಎಂ ಗೃಹ ಕಚೇರಿ ಸಿಬ್ಬಂದಿಗೆ ಕೊರೊನಾ: Work From Home ಮಾಡುವೆನೆಂದ ಯಡಿಯೂರಪ್ಪ!

ಕರ್ನಾಟಕ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕೆಲವು ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಕಾರಣದಿಂದಾಗಿ ಸಿಎಂ ಯಡಿಯೂರಪ್ಪ ಅವರು ಮುಂದಿನ ಐದು ದಿನಗಳ ಕಾಲ ಮನೆಯಿಂದಲೇ ಕಾರ್ಯ ನಿರ್ವಹಿಸುವುದಾಗಿ ಹೇಳಿದ್ದಾರೆ.

ತಮ್ಮ ಕೆಲಸದ ಕುರಿತಂತೆ ಸ್ವತಃ ಯಡಿಯೂರಪ್ಪರವರೆ ಕರ್ನಾಟಕದ ಮುಖ್ಯಮಂತ್ರಿಗಳ ಅಧಿಕೃತ ಫೇಸ್‌ಬುಕ್‌ ಖಾತೆ ಮೂಲಕ ತಿಳಿಸಿದ್ದು ನಾನು ಆರೋಗ್ಯವಾಗಿದ್ದೇನೆ, ಆತಂಕ ಪಡಬೇಡಿ ಎಂದಿದ್ದಾರೆ.

“ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ಕಾರಣ, ಇಂದಿನಿಂದ ಕೆಲ ದಿನಗಳ ಕಾಲ ಮನೆಯಿಂದಲೇ ಕರ್ತವ್ಯ ನಿರ್ವಹಿಸಲಿದ್ದೇನೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಆರೋಗ್ಯವಾಗಿದ್ದೇನೆ.

ಎಲ್ಲರೂ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ. ವ್ಯಕ್ತಿಗತ ಅಂತರ ಕಾಪಾಡಿಕೊಳ್ಳುವುದು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ” ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ಕಾರಣ, ಇಂದಿನಿಂದ ಕೆಲ ದಿನಗಳ ಕಾಲ ಮನೆಯಿಂದಲೇ ಕರ್ತವ್ಯ…

Posted by Chief Minister of Karnataka on Friday, July 10, 2020

ಕೊರೊನಾ ಪ್ರಕರಣಗಳಲ್ಲಿ ಕರ್ನಾಟವು ಒಟ್ಟು 31,105 ವರದಿಗಳೊಂದಿಗೆ ದೇಶದಲ್ಲಿ 6 ನೇ ಸ್ಥಾನಕ್ಕೆ ತಲುಪಿದೆ. 17,786 ಸಕ್ರಿಯ ಪ್ರಕರಣಗಳೊಂದಿಗೆ ದೇಶದಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ. ಇದುವರೆಗೂ 486 ಸಾವುಗಳನ್ನು ದಾಖಲಿಸಿದ್ದರೆ, 12,883 ಸೋಂಕಿತರು ಗುಣಮುಖರಾಗಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights